ಬೆಂಗಳೂರು: ನಿನ್ನೆ ನಿವೃತ್ತ ಐಜಿ ಮತ್ತು ಡಿಜಿಪಿ ಓಂ ಪ್ರಕಾಶ್ ಅವರನ್ನು ಪತ್ನಿಯೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದರು. ಈ ಪ್ರಕರಣವನ್ನು ರಾಜ್ಯ ಸರ್ಕಾರವು ಸಿಸಿಬಿಗೆ ವರ್ಗಾವಣೆ ಮಾಡಿ ಆದೇಶಿಸಿದೆ.
ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ಆದೇಶ ಹೊರಡಿಸಿದ್ದಾರೆ. ನಿವೃತ್ತ ಡಿಜಿಪಿ ಓಂ ಪ್ರಕಾಶ್ ಕೊಲೆ ಪ್ರಕರಣವನ್ನು ಸೂಕ್ತ ರೀತಿಯಲ್ಲಿ ತನಿಖೆ ನಡೆಸಲು ಸಿಸಿಬಿ ತನಿಖೆಗೆ ವಹಿಸಿ ಆದೇಶಿಸಿರುವುದಾಗಿ ಹೇಳಿದ್ದಾರೆ.
ಅಂದಹಾಗೇ ನಿನ್ನೆ ಹೆಚ್ ಎಸ್ ಆರ್ ಲೇಔಟ್ ನಲ್ಲಿರುವಂತ ಅವರ ಮನೆಯಲ್ಲಿ ರಕ್ತದ ಮಡುವಿನಲ್ಲಿ ಓಂ ಪ್ರಕಾಶ್ ಅವರ ಮೃತದೇಹ ಪತ್ತೆಯಾಗಿತ್ತು. ತನಿಖೆ ನಡೆಸಿದಂತ ಪೊಲೀಸರಿಗೆ ಸ್ಥಳದಲ್ಲಿ ಖಾರದಪುಡಿ ಡಬ್ಬಿ, ಚಾಕು ಪತ್ತೆಯಾಗಿತ್ತು.
ಈ ಸಂಬಂಧ ಪೊಲೀಸರು ಪತ್ನಿ ಪಲ್ಲವಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಇಂದು ಓಂ ಪ್ರಕಾಶ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.
GOOD NEWS: ‘ರಾಜ್ಯ ಸರ್ಕಾರಿ ನೌಕರ’ರ ಬಹುದಿನಗಳ ಬೇಡಿಕೆಗೆ ‘ಸಿಎಂ ಸಿದ್ಧರಾಮಯ್ಯ’ ವಿದ್ಯುಕ್ತ ಚಾಲನೆ
ರಾಜ್ಯದ ರೈತರಿಗೆ ಸಿಹಿಸುದ್ದಿ: ರಿಯಾಯಿತಿ ದರದಲ್ಲಿ ಕೃಷಿ ಯಂತ್ರೋಪಕರಣ ವಿತರಣೆ