ಬೆಂಗಳೂರು: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದಂತ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಅವರ ಹತ್ಯೆ ಪ್ರಕರಣದ ಎರಡನೇ ಆರೋಪಿ ಅವರ ಪುತ್ರಿ ಕೃತಿಗೆ ಈಗ ಸಂಕಷ್ಟ ಎದುರಾಗಿದೆ. ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದ್ದು, ಬಂಧನದ ಭೀತಿ ಎದುರಾದಂತೆ ಆಗಿದೆ.
ಕರ್ನಾಟಕದ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಅವರ ಹತ್ಯೆ ಪ್ರಕರಣದಲ್ಲಿ ಅವರ ಪುತ್ರಿಯ ವಿರುದ್ಧವೂ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅವರು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದಂತ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯವು ಕೃತಿ ಸಲ್ಲಿಸಿದ್ದಂತ ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ಅವರಿಗೆ ಬಂಧನದ ಭೀತಿ ಎದುರಾದಂತೆ ಆಗಿದೆ.
ಅಂದಹಾಗೆ ಏಪ್ರಿಲ್.20ರಂದು ಕರ್ನಾಟಕದ ನಿವೃತ್ತ ಡಿಜಿಪಿ ಓಂ ಪ್ರಕಾಶ್(68) ಅವರನ್ನು ಪತ್ನಿಯೇ ಚಾಕುವಿನಿಂದ ಇರಿದು ಕೊಲೆ ಮಾಡಿದ್ದರು. ಈ ಪ್ರಕರಣದಲ್ಲಿ ಓಂ ಪ್ರಕಾಶ್ ಪತ್ನಿ ಪಲ್ಲವಿ ಹಾಗೂ ಪುತ್ರಿ ಕೃತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದರು.
ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಗೋವಿಂದ ಕಾರಜೋಳ ಒತ್ತಾಯ