ಬೆಂಗಳೂರು: ಪೋಸ್ಕೋ ಕೇಸ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಮುರುಘಾ ಮಠದ ( Murugha Matt ) ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಜೈಲು ಪಾಲು ಆಗಿದ್ದಾರೆ. ಈ ಹಿನ್ನಲೆಯಲ್ಲಿ ಮುರುಘಾ ಮಠದ ಆಡಳಿತಾಧಿಕಾರಿಯನ್ನಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿಎಸ್ ವಸ್ತ್ರದ್ ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಸಾರ್ವಜನಿಕರೇ, ‘ಕರೆಂಟ್ ಬಿಲ್’ ಜಾಸ್ತಿ ಬರ್ತಿದ್ಯಾ.? ಚಿಂತಿಸ್ಬೇಡಿ, ನಿಮ್ಮ ಮನೆಲಿ ಈ ಸಾಧನ ಬಳಸಿ
ಈ ಕುರಿತಂತೆ ಕಂದಾಯ ಇಲಾಖೆ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದೂ, ಚಿತ್ರದುರ್ಗ ಶ್ರೀ ಜಗದ್ಗುರು ಮುರುಘಾರಾಜೇಂದ್ರ ಬೃಹಲ್ಮಠದ ಪೀಠಾಧಿಪತಿ ಹಾಗೂ ಎಸ್ ಜೆ ಎಂ ವಿದ್ಯಾಪೀಠದ ಅಧ್ಯಕ್ಷರು ಆಗಿರುವ ಶ್ರೀ ಶಿವಮೂರ್ತಿ ಮುರುಘಾ ಶರಣರು ದಿನಾಂಕ 01-09-2022ರಿಂದ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಹೀಗಾಗಿ ಸಂಸ್ಥೆಯ ನಿರ್ವಹಣೆಯಲ್ಲಿ ಈ ಸಂಸ್ಧೆಯ ದಿನನಿತ್ಯದ ಕಾರ್ಯಚಟುವಟಿಕೆಗೆ ಹಾಗೂ ಮೇಲುಸ್ತುವಾರಿ ನಡೆಸಲು ಸಮಸ್ಯೆ ಉಂಟಾಗಿದೆ ಎಂದಿದ್ದಾರೆ.
BIGG NEWS: ಭಾರತ- ಚೀನಾ ಸಂಘರ್ಷಕ್ಕೆ ನೆಹರೂ ಅವರೇ ಕಾರಣ;ಸಿ.ಟಿ ರವಿ ಆರೋಪ
ಈ ಹಿನ್ನಲೆಯಲ್ಲಿ ಹಾಗೂ ಸಾರ್ವಜನಿಕರ ಹಿತದೃಷ್ಠಿಯಿಂದ ಮಠದ ಚರಾ-ಸ್ಥಿರ ಆಸ್ತಿಗಳನ್ನು ಸಂರಕ್ಷಿಸುವ ಹಿತದೃಷ್ಟಿಯಿಂದ ಹಾಗೂ ಸಂಸ್ಥೆಯ ಹಣ ದುರುಪಯೋಗ ಆಗದಂತೆ ಲೆಕ್ಕಪತ್ರಗಳನ್ನು ನಿರ್ವಹಿಸುವ ಹಾಗೂ ಒಟ್ಟಾರೆ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ನಡೆಸುವ ಹಿತದೃಷ್ಠಿಯಿಂದ ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್ ಅವರನ್ನು ಈ ಕೂಡಲೋ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆ ಟ್ರಸ್ಟ್ ಮತ್ತು ಶಿಕ್ಷಣ ಸಂಸ್ಥೆಗೆ ಆಡಳಿತಾಧಿಕಾರಿಯನ್ನಾಗಿ ನೇಮಿಸಿ ಆದೇಶಿಸಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ