ಲಕ್ನೋ (ಉತ್ತರ ಪ್ರದೇಶ) : ಮನೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ನಿವೃತ್ತ ಐಪಿಎಸ್ ಅಧಿಕಾರಿ ಸಾವನ್ನಪ್ಪಿದ್ದು, ಆತನ ಪತ್ನಿ ಮತ್ತು ಮಗನ ಸ್ಥಿತಿ ಗಂಭೀರವಾಗಿರುವ ಘಟನೆ ಶನಿವಾರ ತಡರಾತ್ರಿ ಉತ್ತರ ಪ್ರದೇಶದ ಲಖನೌ ಜಿಲ್ಲೆಯ ಇಂದಿರಾ ನಗರ ಪ್ರದೇಶದಲ್ಲಿ ನಡೆದಿದೆ.
ಮೃತ ಐಪಿಎಸ್ ಅಧಿಕಾರಿಯನ್ನು ಮಾಜಿ ಪೊಲೀಸ್ ಮಹಾನಿರೀಕ್ಷಕ ದಿನೇಶ್ ಚಂದ್ರ ಪಾಂಡೆ ಎಂದು ಗುರುತಿಸಲಾಗಿದೆ. ಪಾಂಡೆ ಅವರೊಂದಿಗೆ ಮನೆಯಲ್ಲಿದ್ದ ಪತ್ನಿ ಮತ್ತು ಮಗನಿಗೆ ಗಂಭೀರ ಗಾಯಗಳಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಸುದ್ದಿ ತಿಳಿಯುತ್ತಿದ್ದಂತೇ, ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ದಿನೇಶ್ ಚಂದ್ರ ಪಾಂಡೆ ಮತ್ತು ಅವರ ಕುಟುಂಬ ಕೊಠಡಿಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ನೋಡಿದ್ದಾರೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದರು. ಏತನ್ಮಧ್ಯೆ, ನಿವೃತ್ತ ಐಪಿಎಸ್ ಅಧಿಕಾರಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು. ಅವರ ಪತ್ನಿ ಅರುಣಾ ಮತ್ತು ಪುತ್ರ ಶಶಾಂಕ್ ಸ್ಥತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಗ್ನಿ ಅವಘಡಕ್ಕೆ ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿಗಾಗಿ ತನಿಖೆ ನಡೆಯುತ್ತಿದೆ.
ಏಕಾಂತ ಬಯಸುವ ಜೋಡಿಗಳೇ ಹುಷಾರ್: ʻOYOʼ ರೂಮ್ನಲ್ಲಿ ರೆಕಾರ್ಡ್ ಆಗ್ತಿದೆ ನಿಮ್ಮ ಸೀಕ್ರೇಟ್ಸ್