ಬೆಂಗಳೂರು : ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿ, SIT ವಶದಲ್ಲಿರುವಂತ ಮಾಜಿ ಸಚಿವ ಹೆಚ್.ಡಿ ರೇವಣ್ಣ ಆರೋಗ್ಯದಲ್ಲಿ ಏರುಪೇರಾಗಿತ್ತು. ಹೀಗಾಗಿ ಅವರನ್ನು ಇಂದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು ಇದೀಗ ಚಿಕಿತ್ಸೆ ಅಂತ್ಯವಾಗಿದ್ದು ಪೊಲೀಸರು ಅವರನ್ನು ಮತ್ತೆ ಎಸ್ ಐ ಟಿ ಕಚೇರಿಗೆ ಕರೆದೋಯ್ದಿದ್ದಾರೆ.
ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋದ ಸಂತ್ರಸ್ತೆಯನ್ನು ಕಿಡ್ನಾಪ್ ಮಾಡಿದಂತ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದರು. ಎದೆ ನೋವಿನಿಂದ ಬಳಲುತ್ತಿದ್ದ ಅವರನ್ನು ತಕ್ಷಣ ವಿಟ್ಟೋರಿಗೆ ಆಸ್ಪತ್ರೆಗೆ ದಾಖಲಿಸಲಾಯಿತು ಅಲ್ಲಿ ವೈದ್ಯರು ಸುದೀರ್ಘವಾಗಿ 2 ಗಂಟೆಗಳ ಕಾಲ ಅವರಿಗೆ ಚಿಕಿತ್ಸೆ ನೀಡಿದರು.ಈ ವೇಳೆ ಆಸ್ಪತ್ರೆಗೆ ಭೇಟಿ ನೀಡಿದ್ದ ಎಸ್ಐಟಿ ಎಸ್ ಪಿ ಸುಮನ್ ಡಿ. ಪನ್ನೇಕರ್ ಅವರು ರೇವಣ್ಣ ಅವರ ಆರೋಗ್ಯದ ಕುರಿತಂತೆ ಆಸ್ಪತ್ರೆಯ ವೈದ್ಯರಿಂದ ಮಾಹಿತಿಯನ್ನು ಪಡೆದುಕೊಂಡರು.
ಮೊದಲು ಅವರನ್ನ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ಕೂಡ ಮಾಡಿಸಲಾಗಿತ್ತು. ಈ ಬೆನ್ನಲ್ಲೇ ಆರೋಗ್ಯದಲ್ಲಿ ಏರುಪೇರಾಗಿದೆ. ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಯಿತು. ಈಗ ಚಿಕಿತ್ಸೆ ಪೂರ್ಣಗೊಂಡ ಬಳಿಕ ಪೊಲೀಸರು ಮತ್ತೆ ಅವರನ್ನು ಎಸ್ಐಟಿ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ.