ದಕ್ಷಿಣ ಕನ್ನಡ: ಜಿಲ್ಲೆಯ ಬಂಟ್ವಾಳದಲ್ಲಿ ಪಿಕಪ್ ವಾಹನ ಚಾಲಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆಗೆ ಯತ್ನಿಸಿರುವಂತ ಘಟನೆ ನಡೆದಿದೆ. ಈ ಯತ್ನದಲ್ಲಿ ಚಾಲಕ ತಪ್ಪಿಸಿಕೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನಲಾಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಇರಾಕೋಡಿಯಲ್ಲಿ ಪಿಕಪ್ ವಾಹನ ಚಾಲಕ ಹನೀಫ್ ತನ್ನ ವಾಹನ ನಿಲ್ಲಿಸಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕ್ ನಲ್ಲಿ ಬಂದಂತ ಇಬ್ಬರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ.
ಕೊಳತ್ತಮಜಲು ನಿವಾಸಿ ಹನೀಫ್ ಹತ್ಯೆ ಮಾಡೋದಕ್ಕೆ ಯತ್ನಿಸಿದಂತ ವೇಳೆಯಲ್ಲಿ ಅವರಿಂದ ಪಾರಾಗಲು ಓಡಿ ಹೋಗಿದ್ದಾನೆ. ಈ ಸಂದರ್ಭದಲ್ಲಿ ಹನೀಫ್ ಜೊತೆಗಿದ್ದ ರಹೀಮ್ ಎಂಬಾತನ ಮೇಲೂ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ.
ಪಿಕಪ್ ವಾಹನ ಚಾಲಕನ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದಂತ ವಿಷಯ ತಿಳಿದು ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.
BIG NEWS : ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಉಚ್ಚಾಟನೆ ಮಾಡಲಾಗಿದೆ : ಬಿವೈ ವಿಜಯೇಂದ್ರ ಫಸ್ಟ್ ರಿಯಾಕ್ಷನ್