ಬೆಂಗಳೂರು: ರಾಜ್ಯದ 2025-26ನೇ ಸಾಲಿನ ಸ್ನಾತಕ, ಸ್ನಾತಕೋತ್ತರ ಪದವಿ ಪರೀಕ್ಷೆಯ ಶೈಕ್ಷಣಿಕ ಪರಿಷ್ಕೃತ ವೇಳಾಪಟ್ಟಿಯನ್ನು ಉನ್ನತ ಶಿಕ್ಷಣ ಇಲಾಖೆ ಪ್ರಕಟಿಸಿದೆ.
ಈ ಸಂಬಂಧ ನಡವಳಿಯನ್ನು ಹೊರಡಿಸಿರುವಂತ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಜಿ ಶಶಿಧರ್ ಅವರು, 2025-26ನೇ ಸಾಲಿನ ಶೈಕ್ಷಣಿಕ ಸಾಲಿಗೆ ಉನ್ನತ ಶಿಕ್ಷಣ ಇಲಾಖೆಯಡಿ ಬರುವ ವಿಶ್ವವಿದ್ಯಾಲಯಗಳು ಕಾಲೇಜು ಶಿಕ್ಷಣ/ಅನುದಾನ/ ಅನುದಾನ ರಹಿತ ಕಾಲೇಜುಗಳಲ್ಲಿ (ತಾಂತ್ರಿಕ ಶಿಕ್ಷಣವನ್ನು ಹೊರತುಪಡಿಸಿ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗೆ ಸಂಬಂಧಿಸಿದಂತೆ ಶೈಕ್ಷಣಿಕ ವೇಳಾಪಟ್ಟಿಯನ್ನು ಈ ಕೆಳಕಂಡಂತೆ ಕಡ್ಡಾಯವಾಗಿ ಜಾರಿಗೊಳಿಸಲು ಆದೇಶಿಸಿದ್ದಾರೆ.
ಪ್ರಸ್ತುತ ರಾಜ್ಯದಲ್ಲಿ ಒಟ್ಟು 440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿದ್ದು 3.2 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಹೆಚ್ಚುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಹೆಚ್ಚುವರಿ ಬೋಧನಾ ಕಾರ್ಯಭಾರವನ್ನು ನಿರ್ವಹಿಸಲು ಸರ್ಕಾರಿ ಕಾಲೇಜಗಳಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲಾಗುತ್ತಿದೆ. ಆದರೆ ಅತಿಥಿ ಉಪನ್ಯಾಸಕರಿಗೆ ಸಂಬಂಧಿಸಿದ ನ್ಯಾಯಾಲಯದ ಪ್ರಕರಣಗಳಿಂದಾಗಿ 2025-26ನೇ ಸಾಲಿನ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯುವ ಪ್ರಕ್ರಿಯೆಯು ವಿಳಂಬಗೊಂಡಿರುತ್ತದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ವಿಶ್ವವಿದ್ಯಾನಿಲಯಗಳು ಈಗಾಗಲೇ ಘೋಷಿಸಿರುವ ಶೈಕ್ಷಣಿಕ ಕ್ಯಾಲೆಂಡರ್ ಅನ್ನು ಭಾಗಶಃ ಬದಲಾಯಿಸುವ ಮೂಲಕ ಬೋಧನಾ ದಿನಗಳ ನಷ್ಟದಿಂದ ವಿದ್ಯಾರ್ಥಿಗಳಿಗೆ ಆಗಿರುವ ಅನಾನುಕೂಲವನ್ನು ಸರಿದೂಗಿಸುವ ಅವಶ್ಯವಿರುತ್ತದೆ.
ಈ ಹಿನ್ನೆಲೆಯಲ್ಲಿ, ಮೇಲೆ ಓದಲಾದ (2) ರ ಕಡತದಲ್ಲಿ ಆಯುಕ್ತರು, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಇವರು ರಾಜ್ಯದ ಸಾರ್ವಜನಿಕ ವಿಶ್ವವಿದ್ಯಾಲಯಗಳಿಗೆ ಸಂಬಂಧಿಸಿದಂತೆ ಪರಿಷ್ಕೃತ (revised) ಸೆಮಿಸ್ಟರ್ ತರಗತಿಗಳ ಕೊನೆಯ ದಿನಾಂಕವನ್ನು ನಿಗದಿಪಡಿಸಿದ್ದು, ಆ ದಿನಾಂಕವನ್ನು ಅಳವಡಿಸಿಕೊಂಡು ಅದರಂತೆ ಪರೀಕ್ಷಾ ದಿನಾಂಕಗಳನ್ನು ನಿಗದಿಗೊಳಿಸುವಂತೆ ಸರ್ಕಾರವನ್ನು ಕೋರಿರುತ್ತಾರೆ.
ಮೇಲ್ಕಂಡ ಅಂಶಗಳನ್ವಯ 2025-26ನೇ ಸಾಲಿನ ಶೈಕ್ಷಣಿಕ ಸಾಲಿಗೆ ಉನ್ನತ ಶಿಕ್ಷಣ ಇಲಾಖೆಯಡಿ ಬರುವ ವಿಶ್ವವಿದ್ಯಾಲಯಗಳು /ಕಾಲೇಜು ಶಿಕ್ಷಣ/ಅನುದಾನ/ ಅನುದಾನ ರಹಿತ ಕಾಲೇಜುಗಳಲ್ಲಿ (ತಾಂತ್ರಿಕ ಶಿಕ್ಷಣವನ್ನು ಹೊರತುಪಡಿಸಿ) ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗೆ ಸಂಬಂಧಿಸಿದಂತೆ ಶೈಕ್ಷಣಿಕ ವೇಳಾಪಟ್ಟಿಯನ್ನು ಬದಲಾವಣೆ ಮಾಡಿ ಜಾರಿಗೊಳಿಸಲು ಸರ್ಕಾರವು ತೀರ್ಮಾನಿಸಿದ್ದು, ಅದರಂತೆ ಈ ಕೆಳಕಂಡ ಆದೇಶ.
ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 2025-26ನೇ ಸಾಲಿನ ಶೈಕ್ಷಣಿಕ ಸಾಲಿಗೆ ಉನ್ನತ ಶಿಕ್ಷಣ ಇಲಾಖೆಯಡಿ ಬರುವ ವಿಶ್ವವಿದ್ಯಾಲಯಗಳು /ಕಾಲೇಜು ಶಿಕ್ಷಣ/ಅನುದಾನ/ ಅನುದಾನ ರಹಿತ ಕಾಲೇಜುಗಳಲ್ಲಿ (ತಾಂತ್ರಿಕ ಶಿಕ್ಷಣವನ್ನು ಹೊರತುಪಡಿಸಿ) ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗೆ ಸಂಬಂಧಿಸಿದಂತೆ ಕೆಳಗಿನ ಕೋಷ್ಟಕದಲ್ಲಿರುವಂತೆ ಪರಿಷ್ಕೃತ (revised) ಸೆಮಿಸ್ಟರ್ ತರಗತಿಗಳ ಕೊನೆಯ ದಿನಾಂಕವನ್ನು ಅಳವಡಿಸಿಕೊಂಡು, ಅದರಂತೆ ಪರೀಕ್ಷಾ ದಿನಾಂಕಗಳನ್ನು ನಿಗದಿಗೊಳಿಸಿ ಶೈಕ್ಷಣಿಕ ವರ್ಷದ ಮಧ್ಯಂತರ ರಜಾ ಅವಧಿಯನ್ನು ಕಡಿತಗೊಳಿಸಿ ಸಮ ಸಂಖ್ಯೆಯ ಸೆಮಿಸ್ಟರ್ ( Even Semisters) ಪ್ರಾರಂಭದ ದಿನಾಂಕಗಳನ್ನು ಬದಲಾವಣೆ ಮಾಡಿಕೊಂಡು ಈ ಕೆಳಕಂಡಂತೆ ಕಡ್ಡಾಯವಾಗಿ ಜಾರಿಗೊಳಿಸಲು ಆದೇಶಿಸಿದ್ದಾರೆ.
BREAKING: ಮಧ್ಯ ಫಿಲಿಪೈನ್ಸ್‌ನಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ | Earthquake In Philippines