ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹೆಚ್ಚುವರಿ ಕಾರ್ಯಭಾರಕ್ಕೆ ಅತಿಥಿ ಉಪನ್ಯಾಸಕರ ಕೌನ್ಸಿಲಿಂಗ್ ಮೂಲಕ ನೇಮಕಾತಿಗೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಈ ಸಂಬಂಧ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
2024-25ನೇ ಶೈಕ್ಷಣಿಕ ಸಾಲಿನಲ್ಲಿ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹೆಚ್ಚುವರಿ ಕಾರ್ಯಭಾರಕ್ಕೆ ಅನುಗುಣವಾಗಿ ಅತಿಥಿ ಉಪನ್ಯಾಸಕರನ್ನು ಆನ್ ಲೈನ್ ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದಿದ್ದಾರೆ.
ಈ ಆಯ್ಕೆ ಪ್ರಕ್ರಿಯೆಯ ವೇಳಾಪಟ್ಟಿಯನ್ನು ದಿನಾಂಕ 04-05-2025ರಂದು ನಡೆಯಲಿರುವ ನೀಟ್ ಪರೀಕ್ಷೆಯ ಹಿನ್ನಲೆಯಲ್ಲಿ ಪರಿಷ್ಕರಿಸಲಾಗಿದೆ. ಪರಿಷ್ಕೃತ ಕೌನ್ಸಿಲಿಂಗ್ ವೇಳಾಪಟ್ಟಿ ಈ ಕೆಳಗಿನಂತಿದೆ ಎಂದು ತಿಳಿಸಿದ್ದಾರೆ.
ಹೀಗಿದೆ ಅತಿಥಿ ಉಪನ್ಯಾಸಕರ ನೇಮಕಾತಿಯ ಕೌನ್ಸಿಲಿಂಗ್ ವೇಳಾಪಟ್ಟಿ
- ದಿನಾಂಕ 29-04-2025ರ ಸಂಜೆ 5.30ರೊಳಗೆ ಕಾಲೇಜುಗಳ ಪ್ರಾಂಶುಪಾಲರು ಪ್ರಸ್ತುತ ಲಭ್ಯವಿರುವ ಕಾರ್ಯಭಾರದ ವಿವರಗಳನ್ನು ಇಐಎಂಎಸ್ ನಲ್ಲಿ ಕಡ್ಡಾಯವಾಗಿ ಅಪ್ ಲೋಡ್ ಮಾಡಲು ಕೊನೆಯ ದಿನವಾಗಿದೆ.
- ದಿನಾಂಕ 03-05-2025ರಂದು ತಾತ್ಕಾಲಿಕ ಮೆರಿಟ್ ಪಟ್ಟಿ ಹಾಗೂ ತಾತ್ಕಾಲಿಕ ಕಾರ್ಯಭಾರವನ್ನು ಪ್ರಕಟಿಸಲಾಗುತ್ತದೆ.
- ದಿನಾಂಕ 05-05-2025ರಿಂದ ಮೆರಿಟ್ ಪಟ್ಟಿಯ ಅನ್ವಯ ಕಾಲೇಜು ಆಯ್ಕೆಗೆ ಕೌನ್ಸಿಲಿಂಗ್ ಪ್ರಕ್ರಿಯೆ ಆರಂಭಿಸಲಾಗುತ್ತದೆ.
ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೇಸಿಗೆ ರಜೆ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ
BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 1,000 ಕ್ಕೂ ಹೆಚ್ಚು ಅಂಕ ಏರಿಕೆ |Share Market