ಬೆಂಗಳೂರು: ರಾಜ್ಯ ಸರ್ಕಾರದಿಂದ 2024-25ನೇ ಸಾಲಿನ ಶಿಕ್ಷಕರ ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಮೂಲಕ ಶಿಕ್ಷಕರ ವರ್ಗಾವಣೆಗೆ ಚಾಲನೆ ನೀಡಿದಂತೆ ಆಗಿದೆ.
ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಪರಿಷ್ಕೃತ ವರ್ಗಾವಣೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ಅಧಿನಿಯಮ-2020 [2020ರ ಕರ್ನಾಟಕ ಅಧಿನಿಯಮ ಸಂಖ್ಯೆ :04] ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ನಿಯಮಗಳು-2020ರ ಹಾಗೂ ವರ್ಗಾವಣಾ ತಿದ್ದುಪಡಿ ಕಾಯ್ದೆ ಮತ್ತು ನಿಯಮಗಳು-2022ರ ಪ್ರಕಾರ ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರನ್ನು ಒಳಗೊಂಡಂತೆ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ/ತತ್ಸಮಾನ ವೃಂದದ ಶಿಕ್ಷಕರು ಮತ್ತು ಸರ್ಕಾರಿ ಪ್ರೌಢ ಶಾಲಾ ಸಹ ಶಿಕ್ಷಕರು/ತತ್ಸಮಾನ ವೃಂದ, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದದ ಅಧಿಕಾರಿಗಳಿಗೆ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಗೆ ವರ್ಗಾವಣ ನಿಯಮ-2020ರ ನಿಯಮ-6 ರಲ್ಲಿ ನಿಗದಿಪಡಿಸಿರುವಂತೆ ವರ್ಗಾವಣೆ(ಅನುಸೂಚಿ) ವೇಳಾಪಟ್ಟಿಯನ್ನು ಉಲ್ಲೇಖಿತ ಅಧಿಸೂಚನೆಯಂತೆ ಹೊರಡಿಸಲಾಗಿತ್ತು.
ಉಲ್ಲೇಖ-3 ರ ದಿನಾಂಕ: 24/09/2025ರಲ್ಲಿನ ಪ್ರಕಟಣೆಯಲ್ಲಿ ತಿಳಿಸಿರುವಂತೆ ವರ್ಗಾವಣೆ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ಆಡಳಿತಾತ್ಮಕ ಕಾರಣಗಳ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು, ಮುಂದುವರಿದು ಈ ಕೆಳಕಂಡ ಅನುಬಂಧ-2ರಲ್ಲಿರುವಂತೆ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದ್ದು ಉಳಿದಂತೆ ಉಲ್ಲೇಖಿತ ವರ್ಗಾವಣಾ ಅಧಿಸೂಚನೆಯಲ್ಲಿರುವ ಅನುಬಂಧ-1 ರಲ್ಲಿನ ಎಲ್ಲಾ ಮಾರ್ಗಸೂಚಿ ಅಂಶಗಳು ಯಥಾವತ್ತಾಗಿ ಮುಂದುವರೆಯುತ್ತವೆ. ಈ ಪರಿಷ್ಕೃತ ವೇಳಾಪಟ್ಟಿಯ ಜೊತೆಯಲ್ಲಿ ಸದರಿ ಮಾರ್ಗಸೂಚಿ ಅಂಶಗಳನ್ನು ಓದಿಕೊಳ್ಳತಕ್ಕದ್ದು.
ವಿಸ್ಕೃತವಾದ ಮಾರ್ಗಸೂಚಿಗಳನ್ನೊಳಗೊಂಡಂತೆ ಅನುಬಂಧ-2 ಸಾಮಾನ್ಯ ಕೋಲಿಕೆ/ಪರಸ್ಪರ ವರ್ಗಾವಣೆಗಳುಉಲ್ಲೇಖ 1 ಮತ್ತು 2 ರ ವೇಳಾಪಟ್ಟಿಯಲ್ಲಿನ ಕ್ರಮ ಸಂಖ್ಯೆ ‘ಅ’ ರಿಂದ ‘ಋ’ ವರೆಗಿನ ಪ್ರಕ್ರಿಯೆಗಳು ಮುಗಿದಿರುತ್ತದೆ ಎಂದಿದ್ದಾರೆ.










