ತುಮಕೂರು : ಮೇ 5 ರ ನಂತರ ರಾಜ್ಯ ರಾಜಕಾರಣದಲ್ಲಿ ಕ್ರಾಂತಿಯಾಗುತ್ತದೆ. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತದೆ ಎಂದು ತುಮಕೂರಿನಲ್ಲಿ ಬಿಜೆಪಿ ಶಾಸಕ ಬಿ ಸುರೇಶ್ ಗೌಡ ಸ್ಫೋಟಕವಾದ ಭವಿಷ್ಯ ನುಡಿದರು.
ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ಹಾಗೂ ಸಿಎಂ ಸಿದ್ದರಾಮಯ್ಯ ಅವರ ನಡೆ ನೋಡಿದರೆ ಸರ್ಕಾರ ಕ್ರಾಂತಿಗೆ ಒಳಗಾಗುತ್ತದೆ. ಪಂಚರಾಜ್ಯ ಚುನಾವಣೆಯ ನಂತರ ರಾಜಕೀಯದಲ್ಲಿ ಬದಲಾವಣೆ ಆಗುತ್ತದೆ. ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಕಚ್ಚಾಟ ಹೆಚ್ಚಾಗಿದೆ. ಮುಖ್ಯಮಂತ್ರಿ ಆಗಬೇಕು ಅಂತ ಜಿ ಪರಮೇಶ್ವರ್ ಅವರು ಸಹ ರೇಸ್ನಲ್ಲಿ ಇದ್ದಾರೆ. ಸತೀಶ್ ಜಾರಕಿಹೊಳಿ ಕೂಡ
ಮುಖ್ಯಮಂತ್ರಿ ರೇಸ್ನಲ್ಲಿ ಇದ್ದಾರೆ.
ಅತ್ತ ಎಂಬಿ ಪಾಟೀಲ್ ಸಹ ಮುಖ್ಯಮಂತ್ರಿ ಆಗಬೇಕು ಎನ್ನುತ್ತಿದ್ದಾರೆ ಡಿಕೆ ಶಿವಕುಮಾರ್ ಈಗಾಗಲೇ ಮುಖ್ಯಮಂತ್ರಿ ಆಗೋಗಿದ್ದಾರೆ. ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಜನರು ರೋಸಿ ಹೋಗಿದ್ದಾರೆ. ಈಗ ಚುನಾವಣೆ ನಡೆದರೂ ಮೈತ್ರಿಕೂಟ 175 ಸ್ಥಾನ ಗೆಲ್ಲುತ್ತದೆ ಎಂದು ತುಮಕೂರಿನಲ್ಲಿ ಬಿಜೆಪಿ ಶಾಸಕ ಸುರೇಶ್ ಗೌಡ ಹೇಳಿಕೆ ನೀಡಿದರು.








