ಸುಭಾಷಿತ :

Tuesday, February 18 , 2020 1:52 PM

ಅಸ್ತ್ರೆಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಿಂದಲೂ ರಿಷಬ್ ಪಂತ್ ಔಟ್


Thursday, January 16th, 2020 12:30 pm

ಮುಂಬೈ: ರಾಜ್‌ಕೋಟ್ ನಲ್ಲಿ ನಾಳೆ ನಡೆಯುವ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಿಂದ ವಿಕೆಟ್ ಕೀಪರ್ ಬ್ಯಾಟ್ಸ್‌‌ಮನ್ ರಿಷಬ್ ಪಂತ್ ಔಟ್ ಆಗಿದ್ದಾರೆ. ಅವರ ಬದಲು ಕೆ. ಎಲ್. ರಾಹುಲ್ ಕೀಪಿಂಗ್ ಮಾಡುತ್ತಿದ್ದಾರೆ.

ಮಂಗಳವಾರ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದಿದ್ದ ಮೊದಲನೇ ಏಕದಿನ ಪಂದ್ಯದಲ್ಲಿ ಪ್ಯಾಟ್ ಕಮಿನ್ಸ್‌ ಎಸೆತದಲ್ಲಿ ಚೆಂಡು ಪಂತ್ ಹೆಲ್ಮೇಟ್‌ ಗೆ ಬಡಿದು ಗಾಯವಾದ ಹಿನ್ನಲೆಯಲ್ಲಿ ಅವರು ಆ ಪಂದ್ಯದಲ್ಲಿ ಅವರು ವಿಕೆಟ್ ಕೀಪಿಂಗ್ ಮಾಡಿರಲಿಲ್ಲ. ಅವರ ಸ್ಥಾನದಲ್ಲಿ ಕೆ.ಎಲ್ ರಾಹುಲ್ ವಿಕೆಟ್ ಕೀಪಿಂಗ್ ಜವಾಬ್ದಾರಿ ನಿಭಾಯಿಸಿದ್ದರು.

ಪಂತ್ ತಲೆಗೆ ಚೆಂಡು ತಾಗಿ ಪೆಟ್ಟಾದ ಬಳಿಕ ಅವರನ್ನು ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಬುಧವಾರ ಅವರನ್ನು ಆಸ್ಪತ್ರೆಯಿಂದ ಡಿಶ್ಚಾರ್ಜ್ ಮಾಡಿದ ಬಳಿಕ ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಯಲ್ಲಿ ಪುನಶ್ಚೇತನ ಕಾರ್ಯಕ್ಕೆ ಕಳುಹಿಸಿಕೊಡಲಾಗಿದೆ ಎಂದು ಬಿಸಿಸಿಐ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Health
Sandalwood
Food
Beauty Tips
Astrology
Cricket Score
Poll Questions