ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ನಿನ್ನೆ ಸುರಿದ ಭಾರಿ ಮಳೆಗೆ ಗ್ರಾಮದಲ್ಲಿ ನದಿ, ಹಳ್ಳ ತುಂಬಿ ತುಳುಕುತ್ತಿದೆ. ಇದರಿಂದ ರಸ್ತೆ ಸಂಚಾರ ಕಡಿತಗೊಂಡಿದೆ.
ತಾಲೂಕಿನ ಮುಲ್ಲಾಮಾರಿ ಜಲಾಶಯದಲ್ಲಿ ಹರಿದ ನೀರಿನಿಂದಾಗಿ ಚಿಮ್ಮನಚೋಡ, ತಾಜಲಾಪುರ, ಗಾರಂಪಳ್ಳಿ , ಕನಕಪುರ, ಗಾರಂಪಳ್ಳಿ, ಗೌಡನಹಳ್ಳಿ , ಅಣವಾರ, ಗರಗಪಳ್ಳಿ ಮತ್ತು ಜಟ್ಟೂರು ಗ್ರಾಮಗಳ ಬಳಿ ನಿರ್ಮಿಸಿದ ಸೇತುವೆ ಮೇಲೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಹೋಗಿದ್ದರಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಸ್ಥಗಿತಗೊಂಡು ಜನರಿಗೆ ತೊಂದರೆ ಆಗುತ್ತಿದೆ.
ಚಿಂಚೋಳಿ ತಾಲೂಕಿನ ವ್ಯಾಪಕವಾಗಿ ಸುರಿದ ಮಳೆಗೆ ಚಂದ್ರಂಪಳ್ಳಿ ಮತ್ತು ಕೆಳದಂಡೆ ಮುಲ್ಲಾಮಾರಿ ಜಲಾಶಯ ಭರ್ತಿಯಾಗಿರುವುದರಿಂದ ಅನ್ನದಾತರು ಕಂಗಾಲಾಗಿದ್ದಾರೆ.