ಸುಭಾಷಿತ :

Wednesday, April 1 , 2020 2:23 AM

ಭೀಕರ ರಸ್ತೆ ಅಪಘಾತ : ಕಾರು – ಟ್ರಕ್ ಢಿಕ್ಕಿ ಹೊಡೆದು ಆರು ಜನರ ದಾರುಣ ಸಾವು


Saturday, March 9th, 2019 8:30 am

ರಾಮಗಡ್​: ಅತಿವೇಗದಲ್ಲಿ ಚಲಿಸುತ್ತಿದ್ದ ಇನೋವಾ ಕಾರು ಮತ್ತು ಟ್ರಕ್​ ಪರಸ್ಪರ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿ ಕಾರಿನಲ್ಲಿದ್ದ ಆರು ಜನ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಾರ್ಖಂಡ್​ನ ರಾಮಗಡ್​ನಲ್ಲಿ ನಡೆದಿದೆ.

ರಾಂಚಿ ಮತ್ತು ಪಟನಾ ಮುಖ್ಯ ರಸ್ತೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಇನೋವಾ ಕಾರು ಮತ್ತು ಟ್ರಕ್​ ಅತಿವೇಗದಿಂದ ಚಲಿಸುತ್ತಿದ್ದರಿಂದ ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಹಲವು ಜನರು ತೀವ್ರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರು ಬಗ್ಗೆ ಇನ್ನೂ ಮಾಹಿತಿ ತಿಳಿದು ಬಂದಿಲ್ಲ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions