ಹಾವೇರಿ: ಮಳೆಯಿಂದಾಗಿ ಶಿಥಿಲಾವಸ್ಥೆಗೊಂಡಿದ್ದಂತ ಪ್ರಾಥಮಿಕ ಆರೋಗ್ಯ ಕೇಂದ್ರದ ಹೊಸ ಕಟ್ಟಡಕ್ಕೆ ಮನವಿ ಮಾಡಿದ್ದರೂ, ಮಂಜೂರು ಮಾಡದ ಕಾರಣ ಅದೇ ಕಟ್ಟಡದಲ್ಲಿ ರೋಗಿಗಳ ಚಿಕಿತ್ಸೆ ಮುಂದುವರೆಸಲಾಗಿತ್ತು. ಶಿಥಿಲಾವಸ್ಥೆಯಲ್ಲಿದ್ದಂತ ಪಾಥಮಿಕ ಆರೋಗ್ಯ ಕೇಂದ್ರದ ಮೇಲ್ಛಾವಣಿ ವೈದ್ಯರ ಮೇಲೆಯೇ ಕುಸಿದು ಬಿದ್ದಿರುವಂತ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲ್ಲೂಕಿನ ಕೋಡಾ ಗ್ರಾಮದ ವ್ಯಾಪ್ತಿಯಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರ ಮಳೆಯಿಂದಾಗಿ ಶಿಥಿಲಾವಸ್ಥೆಯನ್ನು ತಲುಪಿತ್ತು. ಈ ಕಟ್ಟಡವನ್ನು ಬದಲಾಯಿಸಿ ಹೊಸ ಕಟ್ಟಡವನ್ನು ನೀಡುವಂತೆ ಆರೋಗ್ಯ ಇಲಾಖೆಗೆ ಮನವಿ ಸಲ್ಲಿಸಿದ್ದರೂ ಅದು ಸಾಧ್ಯವಾಗಿರಲಿಲ್ಲ.
ಶಿಥಿಲಾವಸ್ಥೆಯಲ್ಲಿದ್ದಂತ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೇ ರೋಗಿಗಳಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಂತ ವೇಳೆಯಲ್ಲೇ ಮೇಲ್ಛಾವಣಿ ಕುಸಿದು ಬಿದ್ದಿರುವುದಾಗಿ ತಿಳಿದು ಬಂದಿದೆ.
ಕುಸಿತದ ನಂತ್ರ ಎಚ್ಚೆತ್ತುಕೊಂಡು ಪ್ರತ್ಯೇಕ ಶೆಡ್ ನಿರ್ಮಿಸಿ, ಅಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೋಟಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುಮಾರು 25 ಗ್ರಾಮದ ಜನರು ಚಿಕಿತ್ಸೆಗಾಗಿ ಆಗಮಿಸುತ್ತಿರುವುದಾಗಿ ಹೇಳಲಾಗುತ್ತಿದೆ.
ಸದ್ಯ ಎರಡೇ ಕೊಠಡಿಯಲ್ಲಿ ರೋಗಿಗಳಿಗೆ ಚಿಕಿತ್ಸೆ, ಔಷಧಿ, ಹಾರೈಕೆಯಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ತೊಡಗಿದ್ದಾರೆ. ಶಿಥಿಲಾವಸ್ಥೆಯಲ್ಲಿರುವಂತ ಕಟ್ಟಡವನ್ನು ತೆರವುಗೊಳಿಸಿ, ಹೊಸ ಕಟ್ಟಡವನ್ನು ನಿರ್ಮಿಸಿಕೊಡುವಂತೆ ಸಾರ್ವಜನಿಕರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಆಂಧ್ರದ ಡಿಸಿಎಂ ‘ಪವನ್ ಕಲ್ಯಾಣ್’ ನೋಡಲು ನೂಕು ನುಗ್ಗಲು: ವಿಧಾನಸೌಧದಲ್ಲಿ ಸಿಎಸ್ ಕಚೇರಿ ಗ್ಲಾಸ್ ಪೀಸ್ ಪೀಸ್
BREAKING :`PG’ ವೈದ್ಯರ ಕಡ್ಡಾಯ ಸೇವಾ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ | Karnataka High Court