ನವದೆಹಲಿ: ಉಡುಪಿಯ ಕೊಡಚಾದ್ರಿ ಬೆಟ್ಟ ಸೇರಿದಂತೆ ದೇಶಾದ್ಯಂತ ಸುಮಾರು 18 ಕಡೆಗಳಲ್ಲಿ ರೋಪ್ವೇ ಯೋಜನೆಯನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರ ಮುಂದಾಗಿದೆ.
BIGG NEWS: ಚಾಮರಾಜನಗರದಲ್ಲಿ ಕರ್ತವ್ಯ ನಡುವೆ ಮಾನವೀಯ ಮೌಲ್ಯಗಳಿಗೆ ಒತ್ತು ನೀಡಿದ ಆರಕ್ಷಕರು !
ಕರ್ನಾಟಕದ ಕೊಡಚಾದ್ರಿ ಬೆಟ್ಟಕ್ಕೆ ಸುಮಾರು 7 ಕಿ.ಮೀ ಉದ್ದದ ರೋಪ್ವೇಯನ್ನು ನಿರ್ಮಿಸಲು ಕೇಂದ್ರ ಯೋಜಿಸಿದೆ. ಇದರೊಂದಿಗೆ ಜಮ್ಮು ಮತ್ತು ಕಾಶ್ಮೀರ, ಈಶಾನ್ಯ ರಾಜ್ಯಗಳಾದ ತ್ರಿಪುರಾ, ಅರುಣಾಚಲ ಪ್ರದೇಶ, ಮಣಿಪುರ, ತಮಿಳುನಾಡು, ಆಂಧ್ರಪ್ರದೇಶ, ತಮಿಳುನಾಡು, ಲೇಹ್, ಸೇರಿದಂತೆ ಒಟ್ಟು 18 ಕಡೆಗಳಲ್ಲಿ ರೋಪ್ವೇ ನಿರ್ಮಾಣದ ಯೋಜನೆ ಒಳಗೊಂಡಿದೆ.
BIGG NEWS: ಚಾಮರಾಜನಗರದಲ್ಲಿ ಕರ್ತವ್ಯ ನಡುವೆ ಮಾನವೀಯ ಮೌಲ್ಯಗಳಿಗೆ ಒತ್ತು ನೀಡಿದ ಆರಕ್ಷಕರು !
ಜಮ್ಮು ಮತ್ತು ಕಾಶ್ಮೀರದಲ್ಲಿ ಬೆಟ್ಟದ ಮೇಲಿರುವ ಪ್ರಾಚೀನ ಶಂಕರಾಚಾರ್ಯ ದೇವಾಲಯಕ್ಕೆ 1 ಕಿ.ಮೀ ಉದ್ದದ ರೋಪ್ವೇ, ಜಮ್ಮು ಪ್ರದೇಶದ ಮಾತಾ ವೈಷ್ಣೋ ದೇವಿ ದೇವಸ್ಥಾನದ ಬಳಿ ಶಿವಖೋರಿ ದೇವಸ್ಥಾನದವರೆಗೆ 2 ಕಿ.ಮೀ, ಪುಣೆಯ ರಾಜ್ಗಡ್ ಕೋಟೆಗೆ 1.4 ಕಿ.ಮೀ, ಆಂಧ್ರಪ್ರದೇಶದ ಶ್ರೀಶೈಲಂ ದೇವಸ್ಥಾನಕ್ಕೆ 2.3 ಕಿ.ಮೀ, ತೆಲಂಗಾಣದ ಈಗಳಪೆಂಟಾದಿಂದ ಕೃಷ್ಣಾ ನದಿಗೆ ಅಡ್ಡಲಾಗಿ, ಉತ್ತರ ಪ್ರದೇಶದ ಗಾಜಿಯಾಬಾದ್ನ ವೈಶಾಲಿ ಮೆಟ್ರೋ ನಿಲ್ದಾಣದಿಂದ ಮೋಹನ್ ನಗರ ಮೆಟ್ರೋ ನಿಲ್ದಾಣದವರೆಗೆ 10 ಕಿ.ಮೀ ಉದ್ದದ ರೋಪ್ವೇ ನಿರ್ಮಾಣದ ಬಗ್ಗೆಯೂ ಕೇಂದ್ರ ಮುಂದಾಗಿದೆ.