ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆಆರ್ ಪುರಂ ಬಿಜೆಪಿ ಶಾಸಕ ಭೈರತಿ ಬಸವರಾಜ್ ಇಂದು ಎರಡನೇ ಬಾರಿಗೆ ಪೊಲೀಸರ ಎದುರು ವಿಚಾರಣೆಗೆ ಹಾಜರಾದರು. ಬೆಂಗಳೂರಿನ ಭಾರತೀ ನಗರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಶಾಸಕ ಭರತಿ ಬಸವರಾಜ್ ವಿಚಾರಣೆಗೆ ಹಾಜರಾಗಿದ್ದಾರೆ.
ಎರಡನೇ ಬಾರಿಗೆ ಶಾಸಕ ಭೈರತಿ ಬಸವರಾಜ್ ವಿಚಾರಣೆಗೆ ಹಾಜರಾಗಿದ್ದು, ತನಿಖಾಧಿಕಾರಿ ಪ್ರಕಾಶ್ ರಾಥೋಡ್ ಅವರಿಂದ ಭೈರತಿ ಬಸವರಾಜ್ ಅವರ ವಿಚಾರಣೆ ನಡೆಯುತ್ತಿದೆ. ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನನ್ನು ಮಾರಕಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಈ ಒಂದು ಘಟನೆಗೆ ಸಂಬಂಧಿಸಿದಂತೆ ಈ ಮೊದಲು ಬೈರತಿ ಬಸವರಾಜ್ ಭಾರತೀ ನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದು ಇಂದು ಎರಡನೇ ಬಾರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.