ಬೆಂಗಳೂರು: ನಗರದಲ್ಲಿ ರೌಡಿ ಶೀಟರ್ ಶಿವಕುಮಾರ್ ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ.
ಬೆಂಗಳೂರಿನ ಹಲಸೂರು ಕೆರೆ ಬಳಿಯ ಮನೆಯ ಮುಂದೆ ರೌಡಿ ಶೀಟರ್ ಶಿವಕುಮಾರ್ ಆಲಿಯಾಸ್ ಬಿಕ್ಲು ಶಿವ ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಗೈದಿದ್ದಾರೆ.
ಮನೆ ಮುಂದೆ ನಿಂತಿದ್ದಾಗಲೇ ನಾಲ್ಕೈದು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಬರ್ಬರವಾಗಿ ಕೊಚ್ಚಿ ಕೊಲೆ ಗೈದಿದ್ದಾರೆ. ಬಿಕ್ಲು ಶಿವನನ್ನು ಕೊಚ್ಚಿ ಕೊಲೆಗೈದು ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಈ ವಿಷಯ ತಿಳಿದು ಸ್ಥಳಕ್ಕೆ ಡಿಸಿಪಿ ಡಿ.ದೇವರಾಜ, ಜಂಟಿ ಪೊಲೀಸ್ ಆಯುಕ್ತ ರಮೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
GOOD NEWS: MDS ಪ್ರವೇಶ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಜುಲೈ.17ರವರೆಗೆ ಶುಲ್ಕ ಪಾವತಿಗೆ ಅವಕಾಶ
BREAKING: ಸರ್ಕಾರಿ ಜಮೀನಿಗೆ ನಿಯಮ ಬಾಹಿರವಾಗಿ ಆದೇಶ: ‘IAS ಅಧಿಕಾರಿ ವಾಸಂತಿ ಅಮರ್’ ವಿರುದ್ಧ FIR ದಾಖಲು