ಶಿವಮೊಗ್ಗ: ಜಿಲ್ಲೆಯಲ್ಲಿ ಪೊಲೀಸರ ಗುಂಡಿನ ಸದ್ದು ಕೇಳಿ ಬಂದಿದೆ. ಹಲವು ಪ್ರಕರಣಗಳಲ್ಲಿ ಬೇಕಿದ್ದಂತ ರೌಡಿ ಶೀಟರ್ ಕಾಲಿಗೆ ಗುಂಡೇಟು ನೀಡಿ, ಬಂಧಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಹೊಸಮನೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಲವು ಪ್ರಕರಣಗಳಿಗೆ ಬೇಕಿದ್ದಂತ ರೌಡಿ ಶೀಟರ್ ಗುಂಡಾ ಆಲಿಯಾಸ್ ರವಿ ಎಂಬಾತ ಇರುವ ಖಚಿತ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಈ ಮಾಹಿತಿಯನ್ನು ಹೊಸಮನೆ ಪೊಲೀಸರಿಗೆ ಸಿಕ್ಕಿತ್ತು.
ಈ ಕೂಡಲೇ ಅಲರ್ಟ್ ಆದಂತೆ ಪೊಲೀಸರು, ಆರೋಪಿ ರವಿಯನ್ನು ಬಂಧಿಸೋದಕ್ಕೆ ತೆರಳಿದ್ದಾರೆ. ಈ ವೇಳೆಯಲ್ಲಿ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿ, ಪರಾರಿಯಾಗಲೂ ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಪಿಎಸ್ಐ ಕೃಷ್ಣ ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ್ದಾರೆ.
ಪೊಲೀಸರ ವಾರ್ನಿಂಗ್ ಗೂ ಬಗ್ಗದಂತ ಗುಂಡಾ ಆಲಿಯಾಸ್ ರವಿಯ ಕಾಲಿಗೆ ಗುಂಡು ಹಾರಿಸಿ, ಬಂಧಿಸಿದ್ದಾರೆ. ಗುಂಡಿನಿಂದ ಗಾಯಗೊಂಡಿದ್ದಂತ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಈ ಬಗ್ಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಗುಂಡಾ ಆಲಿಯಾಸ್ ರೌಡಿ ಶೀಟರ್ ರವಿ, ಪೊಲೀಸರಿಗೆ ನಾಲ್ಕು ಪ್ರಕರಣಗಳಲ್ಲಿ ಬೇಕಿದ್ದನು. ಇಂದು ಬಂಧಿಸೋದಕ್ಕೆ ತೆರಳಿದಾಗ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ರಕ್ಷಣೆಗಾಗಿ ಆತನ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿರುವುದಾಗಿ ತಿಳಿಸಿದ್ದಾರೆ.
BREAKING: ಮಾನನಷ್ಟ ಪ್ರಕರಣದಲ್ಲಿ IAS ಅಧಿಕಾರಿ ರೋಹಿಣಿ ಸಿಂಧೂರಿಗೆ ತಾತ್ಕಾಲಿಕ ರಿಲೀಫ್: ಮಧ್ಯಂತರ ತಡೆಯಾಜ್ಞೆ