ಕಲಬುರ್ಗಿ : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ದರ್ಶನ್, ಜೈಲಿನಲ್ಲಿ ರೌಡಿಶೀಟರ್ ಗಳೊಂದಿಗೆ ಸಿಗರೇಟ್ ಸೇದುತ್ತಾ ಕುಳಿತಿರುವ ಫೋಟೋ ವೈರಲಾಗಿತ್ತು. ಇದರ ಬೆನ್ನಲ್ಲೇ ದರ್ಶನನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಯಿತು. ಅದಾದ ಬಳಿಕ ಇದೀಗ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನನ್ನು ಕಲಬುರ್ಗಿಯ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ.
ಹೌದು ವಿಲ್ಸನ್ ಗಾರ್ಡನ್ ನಾಗ ಸೇರಿ ಕೋಕಾ ಕೇಸ್ ಅಲ್ಲಿ ಬಂಧನ ಆಗಿದ್ದ 20 ಜನರೂ ಕೂಡ ಬೇರೆ ಬೇರೆ ಜೈಲಿಗೆ ವರ್ಗವಾಗಿದ್ದಾರೆ.ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆ ಆರೋಪಿ ನಟ ದರ್ಶನ್‌ಗೆ ರಾಜಾಥಿತ್ಯ ಕೊಟ್ಟಿದ್ದ ಆರೋಪ ವಿಲ್ಸನ್ ಗಾರ್ಡನ್ ನಾಗನ ಮೇಲಿತ್ತು. ನಾಗನ ಶಿಫ್ಟ್ ಮಾಡಲು ಜೈಲು ಅಧಿಕಾರಿಗಳು ಹಾಗೂ ಬೆಂಗಳೂರು ಪೊಲೀಸರು ಕೋರ್ಟ್ ಮೊರೆ ಹೋಗಿದ್ದರು.
ಇಂದು ಕೊಲೆ ಪ್ರಕರಣದಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದ ದರ್ಶನ್ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಇನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದೆ. ಅಲ್ಲದೆ ಇಂದು ಬಳ್ಳಾರಿ ಜೈಲಿಗೆ ಪತ್ನಿ ವಿಜಯಲಕ್ಷ್ಮಿ ಹಾಗೂ ನಟ ಧನ್ವೀರ ಜೈಲಿಗೆ ಆಗಮಿಸಿ ದರ್ಶನ್ ಅವರನ್ನು ಭೇಟಿ ಮಾಡಿ ಕಾನೂನು ಹೋರಾಟದ ಬಗ್ಗೆ ಚರ್ಚಿಸಿದ್ದಾರೆ.