ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಈ ಮೊದಲು ಪರಪ್ಪನ ಅಗ್ರಹಾರ ಜೈಲು ಸೇರಿದಾಗ ಅಲ್ಲಿನ ರೌಡಿ ಶೀಟರ್ಗಳ ಜೊತೆ ಕುಳಿತು ಹರಟೆ ಹೊರೆಡೆಯುವುದು ಸಿಗರೇಟ್ ಸಿರುವುದು ಭಾರಿ ಚರ್ಚೆಯಾಗಿತ್ತು. ಇದಕ್ಕೆ ಬ್ರೇಕ್ ಹಾಕಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದರು ಕೂಡ ಇದೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜ್ಯಾತಿಥ್ಯ ಮುಂದುವರೆದಿದೆ.
ಹೌದು ಜೈಲಿನಲ್ಲಿ ಕೈದಿಗಳ ಕಳ್ಳಾಟ ಇನ್ನೂ ನಿಂತಿಲ್ಲ. ವಿಚಾರಣಾಧೀನ ಕೈದಿಗಳ ಕಳ್ಳಾಟಕ್ಕೆ ಬ್ರೇಕ್ ಇಲ್ಲ ಎಂಬಂತಾಗಿದೆ. ನಟೋರಿಯಸ್ ರೌಡಿಶೀಟರ್ ಶೀನಿವಾಸ್ ಅಲಿಯಾಸ್ ಗುಬ್ಬಚ್ಚಿ ಸೀನಾ ಜೈಲಲ್ಲೇ ಭರ್ಜರಿಯಾಗಿ ಬರ್ತ್ಡೇ ಸೆಲಬ್ರೇಟ್ ಮಾಡಿಕೊಂಡಿದ್ದಾನೆ. ಆ್ಯಪಲ್ ಹಾರ ಹಾಕಿಕೊಂಡು ಜೈಲಿನ ಬ್ಯಾರಕ್‌ನಲ್ಲಿ ಕೇಕ್ ಕಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾನೆ.
ಈತ ಕೊಲೆ ಕೇಸ್‌ನಲ್ಲಿ ಜೈಲು ಸೇರಿದ್ದ ನಟೋರಿಯಸ್ ರೌಡಿಶೀಟರ್. ಮೊಬೈಲ್‌ನಲ್ಲಿ ಬರ್ತ್ಡೇ ಪಾರ್ಟಿಯ ವಿಡಿಯೋ, ಪೋಟೋ ತೆಗೆದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಜೈಲಿನಿಂದಲೇ ವಿಡಿಯೋ, ಪೋಟೋ ಪೋಸ್ಟ್ ಆಗಿದೆ. ಗುಬ್ಬಚ್ಚಿ ಸೀನನ ಶಿಷ್ಯಂದಿರಿಂದ ಪೋಸ್ಟ್ ಆಗಿದೆ. ಜೈಲಧಿಕಾರಿಗಳು, ಸಿಬ್ಬಂದಿಯಿಂದ ಕೈದಿಗಳಿಗೆ ರಾಜಾತಿಥ್ಯ ಸಿಗುತ್ತಿದೆ ಎಂಬುದನ್ನು ವೀಡಿಯೋ ಬಹಿರಂಗಪಡಿಸಿದೆ.