Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಸಾಗರದ ಶೆಡ್ತೀಕೆರೆಯಲ್ಲಿ ವಿದ್ಯಾರ್ಥಿ ಮೇಲೆ ಹಲ್ಲೆ: ರಮೇಶ್ ನಾರಾಯಣ್ ಹಾಗೂ ಇತರ ಶಿಕ್ಷಕರ ವಿರುದ್ಧ ‘ಮಕ್ಕಳ ಆಯೋಗ ಸುಮೋಟೋ ಕೇಸ್’ ದಾಖಲು

22/03/2026 9:07 PM

ಅಮೆರಿಕ ವಿದ್ಯುತ್ ಸ್ಥಾವರಗಳ ಮೇಲೆ ದಾಳಿ ಮಾಡಿದ್ರೆ, ಹಾರ್ಮುಜ್ ಜಲಸಂಧಿ ‘ಸಂಪೂರ್ಣವಾಗಿ’ ಮುಚ್ಚಲಾಗುವುದು ; ಇರಾನ್ ಸೇನೆ ಎಚ್ಚರಿಕೆ

22/03/2026 8:55 PM

OMG : Work From Home ನಿರಾಕರಿಸಿದ ಕಂಪನಿ ವಿರುದ್ಧ ಕೇಸ್ ಹಾಕಿ ₹180 ಕೋಟಿ ಪರಿಹಾರ ಪಡೆದ ಉದ್ಯೋಗಿ

22/03/2026 8:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು ನಗರದ ಮೂಲ ಸೌಕರ್ಯ ಅಭಿವೃದ್ಧಿಗೆ 1.5 ಲಕ್ಷ ಕೋಟಿ ರೂ ಹೂಡಿಕೆ: DCM ಡಿ.ಕೆ. ಶಿವಕುಮಾರ್
KARNATAKA

ಬೆಂಗಳೂರು ನಗರದ ಮೂಲ ಸೌಕರ್ಯ ಅಭಿವೃದ್ಧಿಗೆ 1.5 ಲಕ್ಷ ಕೋಟಿ ರೂ ಹೂಡಿಕೆ: DCM ಡಿ.ಕೆ. ಶಿವಕುಮಾರ್

By kannadanewsnow0904/01/2026 6:50 PM

ಬೆಂಗಳೂರು : ಬೆಂಗಳೂರು ನಗರದ ಜನಸಂಖ್ಯೆ ಮುಂದಿನ 20 ರಿಂದ 25 ವರ್ಷಗಳಲ್ಲಿನ ದ್ವಿಗುಣಗೊಳ್ಳಲಿದ್ದು, ನಗರದ ಮೂಲ ಸೌಕರ್ಯ ಕೊರತೆ ನಿವಾರಿಸಲು 1.5 ಲಕ್ಷ ಕೋಟಿ ರೂ ವೆಚ್ಚ ಮಾಡಲು ತೀರ್ಮಾನಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪ್ರಕಟಿಸಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ಶ್ರೀ ಮಹಾವೀರ್ ಜೈನ್ ಶಿಕ್ಷಣ ಸಂಘದ ಬಿಬಿಯುಎಲ್ ಜೈನ ವಿದ್ಯಾಲಯ 40 ವರ್ಷ ಪೂರೈಸಿದ ಮತ್ತು ಸಿಬಿ ಭಂಡಾರಿ ಜೈನ್ ಕಾಲೇಜಿನ 25 ವರ್ಷಾಚರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ನಗರದ ಮೂಲ ಸೌಕರ್ಯದ ಸ್ವರೂಪವನ್ನು ಬದಲಿಸಬೇಕಿದೆ. ಇಲ್ಲಿರುವ ಎಲ್ಲರಿಗೂ ಸಂಚರಿಸಲು ಸ್ವಂತ ವಾಹನಗಳು ಬೇಕು. ಯಾರೂ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ಓಡಾಡುವುದಿಲ್ಲ. 1.4 ಕೋಟಿ ಜನ ಸಂಖ್ಯೆ ಇದ್ದರೆ 1.3 ಕೋಟಿ ವಾಹನಗಳಿವೆ. ಹಾಗಾಗಿ ಸಂಚಾರಿ ಒತ್ತಡದ ಸಮಸ್ಯೆ ತೀವ್ರವಾಗಿದೆ. ಬೆಂಗಳೂರು ನಗರದ ಜವಾಬ್ದಾರಿ ತೆಗೆದುಕೊಂಡ ನಂತರ ತಾವು ಸೌಕರ್ಯಕ್ಕೆ ಹೂಡಿಕೆಗೆ ಆದ್ಯತೆ ಕೊಡುತ್ತಿದ್ದೇನೆ. ಸಂಚಾರಿ ಒತ್ತಡ ಇದ್ದರೂ ಸಹ ಯಾರೂ ಬೆಂಗಳೂರು ಬಿಟ್ಟು ಹೋಗಲು ತಯಾರಿಲ್ಲ ಎಂದರು.

ಬೆಂಗಳೂರು ಅತ್ಯಂತ ಪರಮೋಚ್ಚ ನಗರ. ಇಲ್ಲಿ ಉತ್ತಮ ಸಂಸ್ಕೃತಿ ಇದ್ದು, ಗುಣಮಟ್ಟದ ಶಿಕ್ಷಣಕ್ಕೆ ವಿಪುಲ ಅವಕಾಶಗಳಿವೆ. ಇಲ್ಲಿ ಅತಿ ಹೆಚ್ಚಿನ ಮಾನವ ಸಂಪನ್ಮೂಲವಿದೆ. ಕ್ಯಾಲಿಪೋರ್ನಿಯಾದಲ್ಲಿ 35 ಲಕ್ಷ ಇಂಜಿನಿಯರ್ ಗಳಿದ್ದು, ಬೆಂಗಳೂರು ಒಂದೇ ನಗರದಲ್ಲಿ 25 ಲಕ್ಷ ಇಂಜಿನಿಯರ್ ಗಳಿದ್ದಾರೆ. ಇದು ಬೆಂಗಳೂರಿನ ಶಕ್ತಿಯಾಗಿದೆ. ಅಟಲ್‌ ಬಿಹಾರಿ ವಾಜಪೇಯಿ ಪ್ರಧಾನಿಯಾಗಿದ್ದಾಗ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಲು ಆಗಮಿಸಿದ್ದಾಗ ವಿಶ್ವದ ನಾಯಕರು ಮೊದಲು ದೆಹಲಿಗೆ ಬರುತ್ತಿದ್ದರು. ತರುವಾಯ ಮುಂಬೈ, ಚೆನ್ನೈ, ಬಾಂಬೆ, ಹೈದ್ರಾಬಾದ್ ನತ್ತ ತೆರಳುತ್ತಿದ್ದರು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಇದೀಗ ವಿಶ್ವದ ನಾಯಕರು ಮೊದಲು ಬೆಂಗಳೂರಿಗೆ ಬರುತ್ತಿದ್ದಾರೆ. ನಂತರ ದೆಹಲಿಗೆ ತೆರಳುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಉದ್ಗರಿಸಿದ್ದರು. ಇದಕ್ಕೆ ಕಾರಣ ಗುಣಮಟ್ಟದ ಶಿಕ್ಷಣ ಎಂದು ಡಿ.ಕೆ. ಶಿವಕುಮಾರ್‌ ಪ್ರತಿಪಾದಿಸಿದರು.

ಇದು ಕೇವಲ ಸಿಲಿಕಾನ್‌ ನಗರವಷ್ಟೇ ಅಲ್ಲ, ಆರೋಗ್ಯ ನಗರಿ, ಪ್ರತಿಯೊಂದು ವಲಯದಲ್ಲೂ ಅಭಿವೃದ್ಧಿಯಾಗುತ್ತಿದೆ. ಜೈನ ಶಿಕ್ಷಣ ಸಂಸ್ಥೆಯೂ ಸಹ ಉತ್ತಮ ವಿದ್ಯಾಭ್ಯಾಸವನ್ನು ನೀಡುತ್ತಿದೆ. ಎಲ್ಲಾ ಹಿರಿಯರು, ವಿದ್ಯಾರ್ಥಿಗಳಿಗೆ ಹೇಳುವುದಿಷ್ಟೇ, ನೀವು ಮಾರ್ಗವನ್ನು ಮರೆತರೆ, ನಿಮಗೆ ಫಲ ಸಿಗುವುದಿಲ್ಲ. ನಿಮ್ಮ ಮೂಲ, ನಿಮ್ಮ ಸಂಸ್ಥೆ, ನಿಮ್ಮ ಸಮಾಜ ನಿಮ್ಮ ವಿದ್ಯಾ ಸಂಸ್ಥೆ ಎಲ್ಲಾ ಇದೆ. ಅದನ್ನು ಗಮನದಲ್ಲಿಟ್ಟುಕೊಂಡು ಅಗತ್ಯವಿರುವವರಿಗೆ ಪ್ರೋತ್ಸಾಹ ಕೊಡಿ. ಉತ್ತಮ ಶಿಕ್ಷಣ ನೀಡಿರುವ ಶಿಕ್ಷಕರು, ಆಡಳಿತ ಮಂಡಳಿ ಎಲ್ಲರನ್ನು ಸ್ಮರಿಸಬೇಕಾಗಿದೆ. ಜೈನ ಸಮಾಜ ಮಾಡುವ ಪ್ರತಿಯೊಂದು ಒಳ್ಳೆಯ ಕೆಲಸಗಳಿಗೆ ನಮ್ಮ ಸರ್ಕಾರ ಮತ್ತು ನಾನು ಸದಾ ಬೆಂಬಲಿಸುತ್ತೇನೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಇದಕ್ಕೂ ಮುನ್ನ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಮಾತನಾಡಿ, ಜೈನ ಸಮಾಜದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುಂದುವರೆಯಬೇಕಾದಲ್ಲಿ ಸಾಮಾಜಿಕ ಮಾಧ್ಯಮದಿಂದ ದೂರ ಇದ್ದು, ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡಬೇಕು ಎಂದು ಕರೆ ನೀಡಿದರು.

ಜೈನ ಸಮುದಾಯ ಶೈಕ್ಷಣಿಕವಾಗಿ ಇನ್ನಷ್ಟು ಪ್ರಗತಿ ಸಾಧಿಸಲು ಪೋಷಕರು ಹೆಚ್ಚಿನ ಆದ್ಯತೆ ನೀಡಬೇಕು. ಮಕ್ಕಳನ್ನು ಸಾಮಾಜಿಕ ಮಾಧ್ಯಮದಿಂದ ದೂರ ಇಡಬೇಕು. ಜೈನರು ಎಲ್ಲಾ ವಲಯಗಳಲ್ಲೂ ಮುಂಚೂಣಿಗೆ ಬರಬೇಕು. ನಮ್ಮ ಸಮಾಜ ಯಾವುದೇ ಒಂದು ಪಕ್ಷಕ್ಕೆ ಸೀಮಿತವಾದದ್ದಲ್ಲ. ಎಲ್ಲಾ ಪಕ್ಷ, ಪಂಗಡಗಳನ್ನು ಒಳಗೊಂಡು ಮುನ್ನಡೆಯುತ್ತಿದೆ ಎಂದರು.

ಬೆಂಗಳೂರು ಕೇಂದ್ರ ಲೋಕಸಭಾ ಸದಸ್ಯ ಪಿ.ಸಿ. ಮೋಹನ್ ಮಾತನಾಡಿ, ಒಂದು ಕಾಲದಲ್ಲಿ ಲಕ್ಷ್ಮಿ ಪುತ್ರರಿಗೆ ಮನ್ನಣೆ ದೊರೆಯುತ್ತಿತ್ತು. ಹಣವಂತರು, ವ್ಯಾಪಾರಿಗಳಿಗೆ ಮಣೆ ಹಾಕುತ್ತಿದ್ದರು. ಆದರೆ ಇಂದು ಕಾಲ ಬದಲಾಗಿದ್ದು, ಉನ್ನತ ಶಿಕ್ಷಣ ಪಡೆದು ಉತ್ತಮ ಉದ್ಯೋಗದಲ್ಲಿರುವವರಿಗೆ ಆದ್ಯತೆ ದೊರೆಯುತ್ತಿದೆ. ಶಿಕ್ಷಣಕ್ಕೆ ಪ್ರಧಾನ್ಯತೆ ದೊರೆಯುತ್ತಿರುವುದನ್ನು ಮನಗಂಡು ಉತ್ತಮ ಶಿಕ್ಷಣ ನೀಡಲು ಪ್ರತಿಯೊಬ್ಬರು ಮುಂದಾಗಬೇಕು ಎಂದರು.

ಕೇಂದ್ರ ಸರ್ಕಾರದ ರಾಷ್ಟ್ರೀಯ ವ್ಯಾಪಾರಿಗಳ ಕಲ್ಯಾಣ ಮಂಡಳಿಯ ಅಧ್ಯಕ್ಷ ಸುನಿಲ್‌ಜಿ ಸಿಂಗ್ ಮಾತನಾಡಿ, ಶ್ರೀ ಮಹಾವೀರ್ ಜೈನ್ ಶಿಕ್ಷಣ ಸಂಘದ ಗಮನಾರ್ಹ ಸಾಧನೆ ಇತರರಿಗೆ ಮಾದರಿಯಾಗಿದೆ. ಪ್ರಗತಿಪರ ದೃಷ್ಟಿಕೋನ, ಮೌಲ್ಯಾಧಾರಿತ ಶಿಕ್ಷಣ ಮತ್ತು ರಾಷ್ಟ್ರ ನಿರ್ಮಾಣಕ್ಕೆ ನಿರಂತರ ಕೊಡುಗೆ ನೀಡಿದೆ ಎಂದು ಶ್ಲಾಘಿಸಿದರು.

ಸಂಘದ ಅಧ್ಯಕ್ಷ ಚಂಪಾಲಾಲ್‌ ಭಂಡಾರಿ ಮಾತನಾಡಿ, ಜೈನ ಶಿಕ್ಷಣ ಸಂಘದ ಅದ್ಭುತ ಬೆಳವಣಿಗೆಗೆ ಟ್ರಸ್ಟಿಗಳು, ಶಿಕ್ಷಕರು, ಹಳೆಯ ವಿದ್ಯಾರ್ಥಿಗಳು, ಪೋಷಕರು ಮತ್ತು ಹಿತೈಷಿಗಳ ಸಾಮೂಹಿಕ ಬೆಂಬಲ ಕಾರಣವಾಗಿದೆ. ಸಂಸ್ಥೆಯು ಶ್ರೇಷ್ಠತೆ ಮತ್ತು ಸಮಗ್ರ ಶಿಕ್ಷಣಕ್ಕೆ ಅಚಲವಾದ ಬದ್ಧತೆ ಹೊಂದಿದೆ ಎಂದರು.

ಸ್ಮರಣ ಸಂಚಿಕೆ ಸಮಿತಿಯ ಅಧ್ಯಕ್ಷರಾದ ಹೇಮರಾಜ್, ಆಚರಣಾ ಸಮಿತಿಯ ಅಧ್ಯಕ್ಷರಾದ ಪ್ರಕಾಶ್ ಜಿ ಪಿರ್ಗಲ್, ಕಾರ್ಯದರ್ಶಿ ಚಂಪಾಲಾಲ್‌, ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ಶ್ರೀ ಮಹಾವೀರ್ ಜೈನ್ ಶಿಕ್ಷಣ ಸಂಘದ ಸದಸ್ಯರು ಸೇರಿದಂತೆ 2,000 ಕ್ಕೂ ಹೆಚ್ಚು ಜನರು ಈ ಬೃಹತ್ ಸಮಾರಂಭಕ್ಕೆ ಸಾಕ್ಷಿಯಾದರು.

ಸುಮಾರು 1,500 ಕ್ಕೂ ಹೆಚ್ಚು ಹಳೆಯ ವಿದ್ಯಾರ್ಥಿಗಳ ಉಪಸ್ಥಿತಿಯು ಸಂಸ್ಥೆಯ ಮೇಲಿನ ಭಾವನಾತ್ಮಕ ಮೌಲ್ಯವನ್ನು ಹೆಚ್ಚಿಸಿತು.

ಏ.23, 24ರಂದು ‘KCET-2026’ ಪರೀಕ್ಷೆ: ಜ.17ರಿಂದ ಆನ್ ಲೈನ್ ಮೂಲಕ ನೋಂದಣಿಗೆ ಅವಕಾಶ

ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ: ಕಲಾವಿದರು, ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ-ಸಿಎಂ ಸಿದ್ದರಾಮಯ್ಯ

Share. Facebook Twitter LinkedIn WhatsApp Email

Related Posts

BIG NEWS: ಸಾಗರದ ಶೆಡ್ತೀಕೆರೆಯಲ್ಲಿ ವಿದ್ಯಾರ್ಥಿ ಮೇಲೆ ಹಲ್ಲೆ: ರಮೇಶ್ ನಾರಾಯಣ್ ಹಾಗೂ ಇತರ ಶಿಕ್ಷಕರ ವಿರುದ್ಧ ‘ಮಕ್ಕಳ ಆಯೋಗ ಸುಮೋಟೋ ಕೇಸ್’ ದಾಖಲು

22/03/2026 9:07 PM2 Mins Read

BIG NEWS: ಮಂಡ್ಯದಲ್ಲಿ ‘LPG ಸಿಲಿಂಡರ್‌’ಗೆ ಮುಗಿಬಿದ್ದ ಜನ: ಪೊಲೀಸ್ ರಕ್ಷಣೆಯಲ್ಲಿ ‘ಗ್ಯಾಸ್‌’ ವಿತರಣೆ

22/03/2026 8:13 PM1 Min Read

ಸಾಗರದಲ್ಲಿ ಅದ್ದೂರಿಯಾಗಿ ನೆರವೇರಿದ ‘ಶ್ರೀ ಮಹಾಗಣಪತಿ ರಥೋತ್ಸವ’: ಭಕ್ತಿಯ ಪರಾಕಾಷ್ಠೆ, ಸಂಸ್ಕೃತಿಯ ಸಂಗಮ

22/03/2026 7:55 PM3 Mins Read
Recent News

BIG NEWS: ಸಾಗರದ ಶೆಡ್ತೀಕೆರೆಯಲ್ಲಿ ವಿದ್ಯಾರ್ಥಿ ಮೇಲೆ ಹಲ್ಲೆ: ರಮೇಶ್ ನಾರಾಯಣ್ ಹಾಗೂ ಇತರ ಶಿಕ್ಷಕರ ವಿರುದ್ಧ ‘ಮಕ್ಕಳ ಆಯೋಗ ಸುಮೋಟೋ ಕೇಸ್’ ದಾಖಲು

22/03/2026 9:07 PM

ಅಮೆರಿಕ ವಿದ್ಯುತ್ ಸ್ಥಾವರಗಳ ಮೇಲೆ ದಾಳಿ ಮಾಡಿದ್ರೆ, ಹಾರ್ಮುಜ್ ಜಲಸಂಧಿ ‘ಸಂಪೂರ್ಣವಾಗಿ’ ಮುಚ್ಚಲಾಗುವುದು ; ಇರಾನ್ ಸೇನೆ ಎಚ್ಚರಿಕೆ

22/03/2026 8:55 PM

OMG : Work From Home ನಿರಾಕರಿಸಿದ ಕಂಪನಿ ವಿರುದ್ಧ ಕೇಸ್ ಹಾಕಿ ₹180 ಕೋಟಿ ಪರಿಹಾರ ಪಡೆದ ಉದ್ಯೋಗಿ

22/03/2026 8:22 PM

BIG NEWS: ಮಂಡ್ಯದಲ್ಲಿ ‘LPG ಸಿಲಿಂಡರ್‌’ಗೆ ಮುಗಿಬಿದ್ದ ಜನ: ಪೊಲೀಸ್ ರಕ್ಷಣೆಯಲ್ಲಿ ‘ಗ್ಯಾಸ್‌’ ವಿತರಣೆ

22/03/2026 8:13 PM
State News
KARNATAKA

BIG NEWS: ಸಾಗರದ ಶೆಡ್ತೀಕೆರೆಯಲ್ಲಿ ವಿದ್ಯಾರ್ಥಿ ಮೇಲೆ ಹಲ್ಲೆ: ರಮೇಶ್ ನಾರಾಯಣ್ ಹಾಗೂ ಇತರ ಶಿಕ್ಷಕರ ವಿರುದ್ಧ ‘ಮಕ್ಕಳ ಆಯೋಗ ಸುಮೋಟೋ ಕೇಸ್’ ದಾಖಲು

By kannadanewsnow0922/03/2026 9:07 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಶೆಡ್ತೀಕೆರೆಯಲ್ಲಿ ವಿದ್ಯಾರ್ಥಿಯೊಬ್ಬನ ಮೇಲೆ ಮೂವರು ಶಿಕ್ಷಕರು ಅಮಾನುಷವಾಗಿ ಗಾಯವಾಗುವಂತೆ ಕೋಲಿನಿಂದ ಹೊಡೆದು ಹಲ್ಲೆ ಮಾಡಿದ್ದು…

BIG NEWS: ಮಂಡ್ಯದಲ್ಲಿ ‘LPG ಸಿಲಿಂಡರ್‌’ಗೆ ಮುಗಿಬಿದ್ದ ಜನ: ಪೊಲೀಸ್ ರಕ್ಷಣೆಯಲ್ಲಿ ‘ಗ್ಯಾಸ್‌’ ವಿತರಣೆ

22/03/2026 8:13 PM

ಸಾಗರದಲ್ಲಿ ಅದ್ದೂರಿಯಾಗಿ ನೆರವೇರಿದ ‘ಶ್ರೀ ಮಹಾಗಣಪತಿ ರಥೋತ್ಸವ’: ಭಕ್ತಿಯ ಪರಾಕಾಷ್ಠೆ, ಸಂಸ್ಕೃತಿಯ ಸಂಗಮ

22/03/2026 7:55 PM

ಸಾಗರದಲ್ಲಿ ಮದರ್ ತೆರೇಸಾ ಕೌಶಲ್ಯ ತರಬೇತಿ ಕೇಂದ್ರದಿಂದ ಬ್ಯುಟಿಶಿಯನ್ ತರಬೇತಿ; ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

22/03/2026 7:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.