ಬೆಳಗಾವಿ : ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾವು ಏನು ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ ಬಡ ಕುಟುಂಬದ ಮಹಿಳೆಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿ ಕೊಡುತ್ತೇವೆ ಎಂ ಎಸ್ ಪಿ ಕಾನೂನು ಜಾರಿಗೊಳಿಸುವುದಾಗಿ ನಾವು ಭರವಸೆ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಳಗಾವಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಜಂಟಿ ಸುದ್ದಿಗೋಷ್ಠಿಯನ್ನು ನಡೆಸುತ್ತಿದ್ದು, ಈ ವೇಳೆ ಸಿದ್ದರಾಮಯ್ಯ ಮಾತನಾಡಿ,ಮೋದಿ ಉದ್ಯಮಿಗಳ ಸಾಲ ಮನ್ನಾ ಮಾಡಿದ್ದಾರೆ.ಆದರೆ ರೈತರ ಸಾಲ ಮನ್ನಾ ಮಾಡಿಲ್ಲ ರೈತರ ಸಾಲ ಮನ್ನಾ ಮಾಡಿ ಅಂದರೆ ನೋಟ್ ಪ್ರಿಂಟ್ ಮಷೀನ್ ಇಲ್ಲ ಅಂದಿದ್ದರು. ವಿಧಾನಮಂಡಲದಲ್ಲಿ ಅಂದಿನ ಸಿಎಂ ಬಿಎಸ್ ಯಡಿಯೂರಪ್ಪ ಈ ರೀತಿ ಹೇಳಿಕೆ ನೀಡಿದ್ದರು. ಇದು ರೈತರ ಬಗ್ಗೆ ಬಿಜೆಪಿಗಿರುವ ಮನಸ್ಥಿತಿ ಎಂದು ಸಿದ್ದರಾಮಯ್ಯ ಕಿಡಿ ಕಾರಿದರು.
ದೇಶದ ಪ್ರಧಾನಿಯಾಗಿ ಮೋದಿ ಈ ರೀತಿ ಹೇಳಿಕೆ ನೀಡಬಾರದು. ಸೋಲಿನ ಹತಾಶೆಯಿಂದ ಪ್ರಧಾನಿ ನರೇಂದ್ರ ಮೋದಿ ಈ ರೀತಿ ಮಾತನಾಡುತ್ತಿದ್ದಾರೆ. ಬಿಜೆಪಿಯವರಿಗೆ ಸಂವಿಧಾನದ ಮೇಲೆ ಯಾವಾಗಲೂ ನಂಬಿಕೆ ಇಲ್ಲ. ಈ ಚುನಾವಣೆಯನ್ನು ಎರಡನೇ ಸ್ವಾತಂತ್ರ ಹೋರಾಟ ಎಂದು ಕರೆಯಬಹುದು ಎಂದು ತಿಳಿಸಿದರು.
ಏಕೆಂದರೆ ಸಂವಿಧಾನಕ್ಕೆ ವಿರುದ್ಧವಾಗಿ ಬಿಜೆಪಿಯವರು ನಡೆದುಕೊಳ್ಳುತ್ತಿದ್ದಾರೆ ಪ್ರಧಾನಿಯಾಗಿ ಹತ್ತು ವರ್ಷದ ಸಾಧನೆಗಳ ಬಗ್ಗೆ ನರೇಂದ್ರ ಮೋದಿ ಎಲ್ಲಿಯೂ ಹೇಳುತ್ತಿಲ್ಲ. ದ್ವೇಷದ ರಾಜಕಾರಣ ಧರ್ಮದ ರಾಜಕಾರಣ ಮಾಡುತ್ತಿದ್ದಾರೆ ಹೀಗಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನ್ಯಾಯ ಯಾತ್ರೆ ಮಾಡಿದರು ಮನಸ್ಸುಗಳನ್ನು ಒಗ್ಗೂಡಿಸಲು ರಾಹುಲ್ ಸುಧೀರ್ಘ ಯಾತ್ರೆ ಕೈಗೊಂಡಿದ್ದರು.
ಕಾಂಗ್ರೆಸ್ನ ಗ್ಯಾರಂಟಿಗಳಿಂದ ಮಹಿಳೆಯರಿಗೆ ಬಡವರಿಗೆ ತುಂಬಾ ಅನುಕೂಲವಾಗಿದೆ. ಎಚ್ ಡಿ ಕುಮಾರಸ್ವಾಮಿ ಸರ್ಕಾರವನ್ನು ಪತನಗೊಳಿಸಿ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದರು. ಅಕ್ಕಿ ದಾಸ್ತಾನು ಇದ್ದರೂ ಕೂಡ ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿಯನ್ನು ಪೂರೈಕೆ ಮಾಡುತ್ತಿಲ್ಲ ಎಂದು ಆರೋಪಿಸಿದರು.ಗ್ಯಾರಂಟಿ ಜಾರಿ ಆದರೆ ರಾಜ್ಯ ದಿವಾಳಿ ಆಗುತ್ತದೆ ಎಂದು ಬಿಜೆಪಿಯವರು ಹೇಳಿದರು.ಬಳಿಕ ಲೋಕಸಭಾ ಚುನಾವಣೆಯವರೆಗೂ ಮಾತ್ರ ಗ್ಯಾರಂಟಿ ಜಾರಿಗೆ ಇರುತ್ತದೆ ಅಂತ ಅಂದರು.ಅಭಿವೃದ್ಧಿ ಯೋಜನೆಗಳಿಗೆ 68,000 ಕೋಟಿ ರೂಪಾಯಿ ಮೀಸಲಿಟ್ಟಿದ್ದೇವೆ ಎಂದು ಅವರು ತಿಳಿಸಿದರು.
ಹೀಗಾಗಿ 5 ಕೆಜಿ ಅಕ್ಕಿ ಬದಲಿಗೆ ಹಣ ನೀಡುತ್ತಿದ್ದೇವೆ. ಅಧಿಕಾರಕ್ಕೆ ಬಂದ ಎಂಟು ತಿಂಗಳಲ್ಲಿ ಎಲ್ಲಾ 5 ಗ್ಯಾರಂಟಿಗಳನ್ನು ಜಾರಿಗೆ ಮಾಡಿದ್ದೇವೆ. ನಾವು ಹೇಳಿದಂತೆ 5 ಗ್ಯಾರಂಟಿ ಜಾರಿ ಮಾಡಿ ನುಡಿದಂತೆ ನಡೆದಿದ್ದೇವೆ.ಹೀಗಾಗಿ ರಾಜ್ಯದ ಜನರಿಗೆ ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಬಂದಿದೆ. ಐದು ಗ್ಯಾರಂಟಿ ಗಳಿಗೆ ಇದುವರೆಗೂ 44,000 ಕೋಟಿ ರೂಪಾಯಿ ಖರ್ಚಾಗಿದೆ ಎಂದು ತಿಳಿಸಿದರು.