Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೇಕೆದಾಟು ಅಣೆಕಟ್ಟು ಯೋಜನೆ ವಿರೋಧಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್

​’ಭಾರತದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಬೇಡ’: ಚೀನಾ-ಪಾಕಿಸ್ತಾನದ ಜಂಟಿ ಹೇಳಿಕೆಗೆ ಭಾರತದ ತೀಕ್ಷ್ಣ ತಿರುಗೇಟು

ಏರ್ ಇಂಡಿಯಾ AI 171 ಅಪಘಾತ ತನಿಖೆ: ಮಧ್ಯಂತರ ವರದಿಯಿಲ್ಲ, ಜೂನ್ 12ರ ನಂತರವೇ ಅಂತಿಮ ತೀರ್ಪು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಎಲ್ಲಾ ‘ತಾಲ್ಲೂಕು ಕೇಂದ್ರ’ಗಳಲ್ಲಿ ‘ಕೆಂಪೇಗೌಡ ಜಯಂತಿ’ ಆಚರಣೆಗೆ 1 ಲಕ್ಷ ವಿತರಣೆ: ಡಿಸಿಎಂ ಡಿಕೆಶಿ ಘೋಷಣೆ
KARNATAKA

ಎಲ್ಲಾ ‘ತಾಲ್ಲೂಕು ಕೇಂದ್ರ’ಗಳಲ್ಲಿ ‘ಕೆಂಪೇಗೌಡ ಜಯಂತಿ’ ಆಚರಣೆಗೆ 1 ಲಕ್ಷ ವಿತರಣೆ: ಡಿಸಿಎಂ ಡಿಕೆಶಿ ಘೋಷಣೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು : ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು 1 ಲಕ್ಷ ನೀಡಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡರ ಬಗ್ಗೆ ವಿದ್ಯಾರ್ಥಿಗಳಿಗೆ ವಿಚಾರಸಂಕಿರಣ ಏರ್ಪಡಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ರೂ.1 ಲಕ್ಷ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಕೆಂಪೇಗೌಡರ ಜಯಂತಿ ಆಚರಣೆ ಸಂಬಂಧ ವಿಧಾನಸೌಧದಲ್ಲಿಏರ್ಪಡಿಸಿದ್ದ ಪೂರ್ವಭಾವಿ ಸಭೆ ಹಾಗೂ ನಂತರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಹೇಳಿದ್ದಿಷ್ಟು;

ಶಾಲಾ ಮಕ್ಕಳಿಗೆ ಕೆಂಪೇಗೌಡರ ಕುರಿತು ಚರ್ಚಾಸ್ಪರ್ಧೆ ಏರ್ಪಡಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 20 ಸಾವಿರ, ತಾಲ್ಲೂಕು ಕೇಂದ್ರಗಳಿಗೆ 20 ಸಾವಿರದ ಜೊತೆಗೆ ಹೆಚ್ಚುವರಿಯಾಗಿ 1 ಲಕ್ಷ ನೀಡಲಾಗುವುದು. ಜಿಲ್ಲಾ ಕೇಂದ್ರಗಳಿಗೆ 50 ಸಾವಿರ ನೀಡಲಾಗುತ್ತಿದ್ದು ಹೆಚ್ಚು ಮಾಡಲು ಚಿಂತನೆ ನಡೆಸಲಾಗುವುದು.

ನಾಡಪ್ರಭು ಕೆಂಪೇಗೌಡರ 515 ನೇ ಜಯಂತೋತ್ಸವವನ್ನು ಅರಮನೆ ಮೈದಾನ ಅಥವಾ ಹೊರಾಂಗಣ ಮೈದಾನದಲ್ಲಿ ಜೂನ್ 27 ರಂದು ನಡೆಸಲು ತೀರ್ಮಾನಿಸಲಾಗಿದೆ. ಹುಲಿಯೂರುದುರ್ಗ, ಮಾಗಡಿ, ಆವತಿ ಸೇರಿದಂತೆ ಬೆಂಗಳೂರಿನ ಎಲ್ಲಾ ದಿಕ್ಕುಗಳಿಂದ ಪ್ರತಿವರ್ಷದಂತೆ ಗೋಪುರ ಮತ್ತು ಜ್ಯೋತಿಗಳ ಮೆರವಣಿಗೆ ಬರುತ್ತದೆ.

ಕೆಂಪೇಗೌಡರು ನಿರ್ಮಾಣ ಮಾಡಿದ್ದ ಗೋಪುರಗಳನ್ನು ದಾಟಿ ಬೆಂಗಳೂರು ಮೂರು, ನಾಲ್ಕು ಪಟ್ಟು ಹೆಚ್ಚು ಬೆಳೆದಿದೆ. ಬೆಂಗಳೂರು ಇಷ್ಟು ಅಗಾಧವಾಗಿ ಬೆಳೆಯಬಹುದು ಎನ್ನುವ ಕಲ್ಪನೆ ಸ್ವತಃ ಕೆಂಪೇಗೌಡರಿಗೆ ಇರಲಿಲ್ಲ. ಈ ನಗರ ಸ್ಥಾಪಿಸಿದ ಮಹಾನ್ ವ್ಯಕ್ತಿಯ ಜಯಂತಿಯನ್ನು ಇತರೇ ಸಾಧಕರ ಜಯಂತಿಯಂತೆ ಆಚರಿಸಬೇಕಿದೆ.

ಬಿ.ಎಲ್.ಶಂಕರ್ ಅವರ ನೇತೃತ್ವದಲ್ಲಿ ಆಯ್ಕೆ ಸಮಿತಿ

ಬಿ.ಎಲ್.ಶಂಕರ್ ಅವರ ನೇತೃತ್ವದಲ್ಲಿ ಕೆಂಪೇಗೌಡ ಪ್ರಶಸ್ತಿ ಆಯ್ಕೆ ಸಮಿತಿ ರಚನೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬಿಡಿಎ, ಬಿಬಿಎಂಪಿಯಿಂದ ಕೆಂಪೇಗೌಡ ಪ್ರಶಸ್ತಿ ನೀಡಲು ಯೋಜಿಸಲಾಗಿದೆ. ಪ್ರಶಸ್ತಿಗೆ ನಾನು ಒಂದಷ್ಟು ಹೆಸರು ಸೂಚಿಸಿದ್ದೆ. ವಾರ್ಡ್ ಮಟ್ಟದಲ್ಲಿ ಅಥವಾ ಬೇರೆ ಸ್ವರೂಪದಲ್ಲಿ ಪ್ರಶಸ್ತಿ ನೀಡಬೇಕಾ ಎಂದು ಗೊಂದಲ ಇರುವ ಕಾರಣಕ್ಕೆ ಮುಂದುವರೆದಿಲ್ಲ. ಮುಂದಿನ ದಿನಗಳಲ್ಲಿ ಈ ಪ್ರಶಸ್ತಿ ನೀಡಲಾಗುವುದು.

ಸಮಾಧಿ ಹಾಗೂ ಕೋಟೆ ಅಭಿವೃದ್ದಿಗೆ ಕ್ರಿಯಾ ಯೋಜನೆ

ಕೆಂಪೇಗೌಡರ ಮೂಲ ಸಮಾಧಿ ಸ್ಥಳ, ಕೋಟೆಯನ್ನು ಅಭಿವೃದ್ದಿಪಡಿಸುವ ಕ್ರಿಯಾಯೋಜನೆ ಸಿದ್ದ ಪಡಿಸಲಾಗಿದೆ. ಅವರ ಬಗ್ಗೆ ಮಾಹಿತಿಯೂ ಸಿಗಬೇಕು ಹಾಗೂ ಪ್ರವಾಸಿ ಸ್ಥಳವಾಗಿಯೂ ಪರಿವರ್ತನೆಯಾಗಬೇಕು. ಸಚಿವರಾದ ಕೆ.ಎಚ್.ಮುನಿಯಪ್ಪ ಅವರ ಕ್ಷೇತ್ರದಲ್ಲಿ ಕೆಂಪೇಗೌಡರ ಜನ್ಮಸ್ಥಳ ಅಭಿವೃದ್ದಿಗೆ 10 ಎಕರೆ ಮಂಜೂರು ಮಾಡಲಾಗಿದೆ. ಶೀಘ್ರದಲ್ಲೇ ಸ್ಥಳ ಪರಿಶೀಲನೆ ನಡೆಸಲಾಗುವುದು. ಸುಮ್ಮನಹಳ್ಳಿಯಲ್ಲಿ ಕೆಂಪೇಗೌಡ ಪ್ರಾಧಿಕಾರದ ಕಚೇರಿಗಾಗಿ 5 ಎಕರೆ ಜಾಗವನ್ನು ಮಂಜೂರು ಮಾಡಲಾಗಿದೆ. ಜಯಂತಿಯಂದೇ ಗುದ್ದಲಿಪೂಜೆಗೆ ಯೋಚಿಸಲಾಗಿದೆ.

ಕೆಂಪೇಗೌಡರನ್ನು ಕೇವಲ ಒಂದು ಜಾತಿಗೆ ಸೀಮಿತ ಮಾಡಬಾರದು. ಜಾತ್ಯಾತೀತ ತತ್ವದಲ್ಲಿ ಆಚರಣೆ ಮಾಡಬೇಕು. ಕೆಂಪೇಗೌಡರ ಜಯಂತಿ ಕೇವಲ ಸರ್ಕಾರಿ ಕಾರ್ಯಕ್ರಮವಲ್ಲ. ಈ ರೀತಿ ನಮ್ಮ ಸರ್ಕಾರ ಬಿಂಬಿಸುವುದಿಲ್ಲ. ಎಲ್ಲ ವರ್ಗದ ಜನರಿಗೂ ಕೆಂಪೇಗೌಡರು ಸಹಕಾರ ನೀಡಿದ್ದಾರೆ. ಬಸವಣ್ಣ ನವರ ಜಯಂತಿಯನ್ನು ಕೇವಲ ಲಿಂಗಾಯತರು ಹಾಗೂ ಅಂಬೇಡ್ಕರ್ ಅವರ ಜಯಂತಿಯನ್ನು ಪರಿಶಿಷ್ಟರು ಮಾಡುತ್ತಿದ್ದಾರೆ. ನಾವು ಎಲ್ಲಾ ಸಂಘ ಸಂಸ್ಥೆಗಳನ್ನು, ಸಮುದಾಯಗಳನ್ನು ಸೇರಿಸಿಕೊಂಡು ಆಚರಣೆ ಮಾಡಬೇಕು. ಸಭೆಯಲ್ಲಿ 100 ಕ್ಕೂ ಉತ್ತಮವಾದ ಸಲಹೆಗಳು ಬಂದಿವೆ. ಇದರಲ್ಲಿ ಸೂಕ್ತವಾದವುಗಳನ್ನು ಅಧಿಕಾರಿಗಳ ಬಳಿ ಚರ್ಚಿಸಲಾಗುವುದು.

ಬೆಂಗಳೂರಿನ ಪ್ರವಾಸೋದ್ಯಮಕ್ಕೆ ಆದ್ಯತೆ

ಇತರೇ ರಾಜ್ಯಗಳ ಶೇ 60 ರಷ್ಟು ಜನರು ಬೆಂಗಳೂರಿನ ವಾತಾವರಣ, ಶಿಕ್ಷಣ ಸೇರಿದಂತೆ ಇತರೇ ಸೌಲಭ್ಯಗಳಿಗೆ ಮಾರುಹೋಗಿದ್ದಾರೆ. ದೆಹಲಿ ನಂತರ ಬೆಂಗಳೂರನ್ನು ದೇಶ- ವಿದೇಶಿಯರು ನೋಡುವಂತಾಗಿದೆ. ಸರ್ವಜನಾಂಗಕ್ಕೂ ಬೆಂಗಳೂರು ಆಪ್ತವಾಗಿದೆ. ಕೆಂಪೇಗೌಡರ ಅಭಿವೃದ್ದಿಯ ಹೆಜ್ಜೆ ನಂತರ ಎಸ್.ಎಂ.ಕೃಷ್ಣ ಅವರ ಕಾಲದಲ್ಲಿ ವಿಕಾಸಸೌಧ, ಉದ್ಯೋಗ ಸೌಧ ನಿರ್ಮಾಣವಾಯಿತು. ಇದಾದ ನಂತರ ಪ್ರವಾಸೋದ್ಯಮದಲ್ಲಿ ಸ್ವಲ್ಪ ಹಿಂದೆ ಬಿದ್ದಿದೆ. ಒಂದಷ್ಟು ಹಳೆಯ ದೇವಾಲಯಗಳು ಬಿಟ್ಟರೆ ಪ್ರೇಕ್ಷಣೀಯ ಸ್ಥಳಗಳು ಇಲ್ಲ. ಅಲ್ಲದೇ ಟ್ರಾಫಿಕ್ ಸಮಸ್ಯೆ ಹೆಚ್ಚುತ್ತಿದೆ. ಸಮಸ್ಯೆ ನಿವಾರಣೆಗೆ ಕಟ್ಟಡಗಳನ್ನು ಒಡೆಯಲು ಆಗುವುದಿಲ್ಲ. ಆದ ಕಾರಣ ಪರ್ಯಾಯ ಮಾರ್ಗಗಳನ್ನು ಹುಡುಕಬೇಕಿದೆ.

ಮೂಲಸೌಕರ್ಯಗಳ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕು. ಈ ನಾಡು ಕಟ್ಟಿದಂತಹ ಕೆಂಪೇಗೌಡರನ್ನು ನಾವು ಸ್ಮರಿಸಿಕೊಳ್ಳಬೇಕು. ಹಿಂದಿನ ಸರ್ಕಾರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಕೆಂಪೇಗೌಡರ ಪ್ರತಿಮೆ ನಿರ್ಮಾಣ ಮಾಡಿತ್ತು. ಅದರ ಅಕ್ಕಪಕ್ಕ ಒಂದಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕಿದೆ. ತರಾತುರಿಯಲ್ಲಿ ಪ್ರಧಾನಮಂತ್ರಿಗಳನ್ನು ಕರೆಸಿ ಕೆಂಪೇಗೌಡರ ಪ್ರತಿಮೆಯನ್ನು ಬಿಸಿಲಿನಲ್ಲಿ ನಿಲ್ಲಿಸಲಾಗಿದೆ. ಈ ಉಸ್ತುವಾರಿಯನ್ನು ಸಚಿವರಾದ ಮುನಿಯಪ್ಪ ಅವರು ಹಾಗೂ ಕೃಷ್ಣಭೈರೇಗೌಡರು ತೆಗೆದುಕೊಳ್ಳಲಿದ್ದಾರೆ.

ಯಾರೇ ಸ್ಟೇ ತಂದಿದ್ರೂ ತೆರವು ಮಾಡ್ತೀವಿ: ‘ನಟ ದರ್ಶನ್’ ಮನೆ ತೆರವು ಬಗ್ಗೆ ಡಿಕೆ ಶಿವಕುಮಾರ್ ಖಡಕ್ ಮಾತು

ಮೋದಿ ಪ್ರಧಾನಿಯಾದ ಬೆನ್ನಲ್ಲೇ ಷೇರು ಮಾರುಕಟ್ಟೆ ಸಂಚಲನ : 5 ಟ್ರಿಲಿಯನ್ ಡಾಲರ್ ದಾಟಿದ ಮಾರುಕಟ್ಟೆ ಕ್ಯಾಪ್ | PM Modi

Share. Facebook Twitter LinkedIn WhatsApp Email

Related Posts

ಕಾರ್ಮಿಕರ ಕನಿಷ್ಠ ವೇತನ ಶೇ.60 ರಷ್ಟು ಹೆಚ್ಚಳ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

1 Min Read

ಸರ್ಕಾರಿ, ಗೋಮಾಳ ಒತ್ತುವರಿ ತೆರವುಗೊಳಿಸದಿದ್ದರೆ ಅಧಿಕಾರಿಗಳ ತಲೆದಂಡ: ಮದ್ದೂರು ಶಾಸಕ ಕೆ.ಎಂ.ಉದಯ್ ಎಚ್ಚರಿಕೆ

2 Mins Read

ಶಿಂಷಾ ನದಿಗೆ ಅಡ್ಡಲಾಗಿ 4.50 ಕೋಟಿ ರೂ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ: ಮದ್ದೂರು ಶಾಸಕ ಕೆ.ಎಂ.ಉದಯ್ ಚಾಲನೆ

2 Mins Read
Recent News

ಮೇಕೆದಾಟು ಅಣೆಕಟ್ಟು ಯೋಜನೆ ವಿರೋಧಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್

​’ಭಾರತದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಬೇಡ’: ಚೀನಾ-ಪಾಕಿಸ್ತಾನದ ಜಂಟಿ ಹೇಳಿಕೆಗೆ ಭಾರತದ ತೀಕ್ಷ್ಣ ತಿರುಗೇಟು

ಏರ್ ಇಂಡಿಯಾ AI 171 ಅಪಘಾತ ತನಿಖೆ: ಮಧ್ಯಂತರ ವರದಿಯಿಲ್ಲ, ಜೂನ್ 12ರ ನಂತರವೇ ಅಂತಿಮ ತೀರ್ಪು!

​ಧೂಮಪಾನದಷ್ಟೇ ಅಪಾಯಕಾರಿ ಮಕ್ಕಳ ಮೇಲೆ ಸಾಮಾಜಿಕ ಜಾಲತಾಣಗಳ ಪ್ರಭಾವ: ಬ್ರಿಟಿಷ್ ವೈದ್ಯರ ಎಚ್ಚರಿಕೆ

State News
KARNATAKA

ಕಾರ್ಮಿಕರ ಕನಿಷ್ಠ ವೇತನ ಶೇ.60 ರಷ್ಟು ಹೆಚ್ಚಳ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ರಾಷ್ಟ್ರ ನಿರ್ಮಾಣದಲ್ಲಿ ಹಗಲಿರುಳು ಶ್ರಮಿಸುತ್ತಿರುವ ಕಾರ್ಮಿಕ ವರ್ಗದ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಘೋಷಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರ್ಮಿಕರ…

ಸರ್ಕಾರಿ, ಗೋಮಾಳ ಒತ್ತುವರಿ ತೆರವುಗೊಳಿಸದಿದ್ದರೆ ಅಧಿಕಾರಿಗಳ ತಲೆದಂಡ: ಮದ್ದೂರು ಶಾಸಕ ಕೆ.ಎಂ.ಉದಯ್ ಎಚ್ಚರಿಕೆ

ಶಿಂಷಾ ನದಿಗೆ ಅಡ್ಡಲಾಗಿ 4.50 ಕೋಟಿ ರೂ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ: ಮದ್ದೂರು ಶಾಸಕ ಕೆ.ಎಂ.ಉದಯ್ ಚಾಲನೆ

ಹೆಂಡತಿ ಮುಂದೆ ‘ಶ್ರೀಮಂತಿಕೆ’ ಬಿಲ್ಡಪ್ ಕೊಡಲು ಸರಗಳ್ಳನಾದ ಪತಿರಾಯ: ಮಂಡ್ಯದಲ್ಲಿ ₹70 ಲಕ್ಷದ ಚಿನ್ನದೊಂದಿಗೆ ನಾಲ್ವರು ಅಂದರ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.