ಬೆಂಗಳೂರು : ಮಂಡ್ಯದಲ್ಲಿ ಈ ವರ್ಷದ ಕೊನೆಯಲ್ಲಿ ಅಂದರೆ ಡಿಸೆಂಬರ್ 20, 21 ರಂದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಿರುವುದರ ಕುರಿತು ಸಮ್ಮೇಳನಕ್ಕೆ ಅನುದಾನ ಬಿಡುಗಡೆ ಮಾಡುವ ವಿಚಾರವಾಗಿ ಸದನದಲ್ಲಿ ಶಾಸಕ ರವಿ ಕುಮಾರ್ ಗಣಿಗ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಶಿವರಾಜ್ ತಂಗಡಗಿ ಸಮ್ಮೇಳನಕ್ಕೆ 100 ಕೋಟಿ ಮೀಸಲಿರಿಸಲಾಗಿದ್ದು 30 ಕೋಟಿ ರೂಪಾಯಿಗಳ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ ಎಂದು ತಿಳಿಸಿದರು.
ಇಂದು ಸದನದಲ್ಲಿ ಪ್ರಶ್ನೋತ್ತರದ ಕಲಾಪದ ವೇಳೆ ಮಂಡ್ಯ ಶಾಸಕ ರವಿಕುಮಾರ್ ಗಣಿಗ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರುಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 100 ಕೋಟಿ ರೂಪಾಯಿಗಳನ್ನು ಮೀಸಲಿರಿಸಲಾಗಿದ್ದು, 30 ಕೋಟಿ ರೂಪಾಯಿಗಳ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಡಿಸೆಂಬರ್ 20, 21 ರಂದು ಆಯೋಜಿಸಲಾಗಿರುವ ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ಬಿಡುಗಡೆ ಮಾಡುವ ಕುರಿತು ಪರಿಶೀಲಿಸಲಾಗುತ್ತಿದೆ. ಈಗಾಗಲೇ 2024 25ನೇ ಸಾಲಿನ ಕ್ರಿಯಾ ಯೋಜನೆಯಲ್ಲಿ ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ಮೀಸಲಿರಿಸಲಾಗಿದೆ ಎಂದು ಹೇಳಿದರು.