ಉಡುಪಿ : ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಕೊಟ್ರೂ ಬಿಜೆಪಿಯವರು ನನ್ನನ್ನು ಹಿಂದೂ ವಿರೋಧಿ ಎಂದು ಮೂದಲಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೋದಿಯವರು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟಿಸಿದರೆ, ಅಂದು ರಾಜ್ಯದಲ್ಲಿ ನಾನು ಆಂಜನೇಯ ದೇಗುಲವನ್ನು ಉದ್ಘಾಟಿಸಿದೆ. ಇಲ್ಲಿನ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗಾಗಿ ರೂ. 100 ಕೋಟಿ ಅನುದಾನವನ್ನು ಮೀಸಲಿಟ್ಟಿದ್ದೇನೆ. ಆದರೂ ನನ್ನನ್ನು ಹಿಂದೂ ವಿರೋಧಿ ಎಂದು ಮೂದಲಿಸುತ್ತಾರೆ ಎಂದರು.
ಪ್ರಧಾನಿ ಮೋದಿ ಅವರು ದೇಶದ ಎಲ್ಲ ಜನರ ಖಾತೆಗೆ ಹಣ ಹಾಕುವುದಾಗಿ ಹಾಗೂ ಉದ್ಯೋಗ ನೀಡುವುದಾಗಿ ಸುಳ್ಳು ಹೇಳಿದ್ದಾರೆ. ಈ ರೀತಿ ಜನರ ದಾರಿ ತಪ್ಪಿಸಿ ಮೋದಿಯವರು ಅಧಿಕಾರಕ್ಕೆ ಬರುತ್ತಿದ್ದು, ಈ ಬಾರಿ ಜನರು ರಾಜ್ಯದಲ್ಲಿ “ಬಿಜೆಪಿ ಗೋಬ್ಯಾಕ್” ಎನ್ನಬೇಕು.