ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವಂತ ಗ್ಯಾರಂಟಿ ಯೋಜನೆಗೆ ಹಣ ಹೊಂದಾಣಿಕೆಗೆ ಮತ್ತೊಂದು ದಾರಿಯನ್ನು ಹಿಡಿದಿದೆ. ಅದೇ ಪರಿಶಿಷ್ಟ ಜಾತಿ ಉಪ ಯೋಜನೆ ( SCSP) ಹಾಗೂ ಪರಿಶಿಷ್ಟ ಪಂಗಡಗಳ ಉಪ ಯೋಜನೆ(TSP) ಯೋಜನೆಗಳಿಗೆ ಮೀಸಲಿಟ್ಟಿದ್ದಂತ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡೋದಕ್ಕೆ ಮುಂದಾಗಿದೆ ಎಂಬುದಾಗಿ ಹೇಳಲಾಗುತ್ತಿದೆ.

ಇದಕ್ಕೆ ಸಾಕ್ಷಿ ಎನ್ನುವಂತೆ ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಎಸ್ ಸಿ ಎಸ್ ಪಿ ಮತ್ತು ಟಿ ಎಸ್ ಪಿ ಗೆ ಬಜೆಟ್ ನಲ್ಲಿ ಮೀಸಲಿಟ್ಟಿದ್ದಂತ ಒಟ್ಟು ಹಣದಲ್ಲಿ 14,282 ಕೋಟಿ ಹಣವನ್ನು ಬಳಸಿಕೊಳ್ಳೋದಕ್ಕೆ ಅನುಮತಿ ನೀಡಿದೆ ಎಂಬುದಾಗಿ ತಿಳಿದು ಬಂದಿದೆ.

2024-25ನೇ ಆರ್ಥಿಕ ವರ್ಷದಲ್ಲಿ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅಡಿಯಲ್ಲಿ ಮೀಸಲಿಟ್ಟ 39,121.46 ಕೋಟಿ ರೂ. ಹಣವನ್ನು ಖರ್ಚು ಮಾಡುವ ಪ್ರಸ್ತಾವವುಳ್ಳ ಕ್ರಿಯಾ ಯೋಜನೆಗೆ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ರಾಜ್ಯ ಅಭಿವೃದ್ಧಿ ಪರಿಷತ್ ಶುಕ್ರವಾರ ಅನುಮೋದನೆ ನೀಡಿದೆ.

ಅಂದಹಾಗೇ ಎಸ್ ಸಿ ಎಸ್ ಪಿ ಹಾಗೂ ಟಿ ಎಸ್ ಪಿ ಯೋಜನೆಯ 14,282 ಕೋಟಿ ಹಣದಲ್ಲಿ ಯುವನಿಧಿ 175 ಕೋಟಿ ರೂ, ಶಕ್ತಿ ಯೋಜನೆಗೆ 1451 ಕೋಟಿ ರೂ, ಗೃಹ ಲಕ್ಷ್ಮೀ ಯೋಜನೆಗೆ  7,881 ಕೋಟಿ ರೂ, ಅನ್ನಭಾಗ್ಯ ನಗದು ಹಣ ವರ್ಗಾವಣೆಗೆ 2,187 ಕೋಟಿ ರೂ ಹಾಗೂ ಗೃಹ ಜ್ಯೋತಿ ಯೋಜನೆಗೆ  2,585 ಕೋಟಿ ರೂ ಮೀಸಲಿಡಲು ನಿರ್ಧರಿಸಿದೆ.

‘ಅಂಗನವಾಡಿ ಕಾರ್ಯಕರ್ತೆ’ಯರಿಗೆ ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ ಗುಡ್ ನ್ಯೂಸ್

‘ಅಂಗನವಾಡಿ ಕಾರ್ಯಕರ್ತೆ’ಯರಿಗೆ ‘ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ ಗುಡ್ ನ್ಯೂಸ್

Share.
Exit mobile version