ನವದೆಹಲಿ: ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅಗತ್ಯ ಭೂಮಿಯನ್ನು ಹಸ್ತಾಂತರಿಸಲು ಮತ್ತು ಎಲ್ಲಾ ಅನುಮತಿಗಳನ್ನು ನೀಡಲು ಕ್ರಮ ಕೈಗೊಂಡರೆ, ರಾಜ್ಯದಲ್ಲಿ ಬಾಕಿ ಇರುವ ಎಲ್ಲಾ ರಸ್ತೆ ಯೋಜನೆಗಳನ್ನು ಪೂರ್ಣಗೊಳಿಸಲು ಕೇಂದ್ರದಿಂದ ಒಂದು ತಿಂಗಳೊಳಗೆ 2 ಲಕ್ಷ ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಸಿದ್ಧ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಗುರುವಾರ ಪ್ರತಿಪಾದಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸಚಿವರ ನಿಯೋಗ ಕಳೆದ ವಾರ ದೆಹಲಿಯಲ್ಲಿ ಗಡ್ಕರಿ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಬಾಕಿ ಇರುವ ರಸ್ತೆ ಮತ್ತು ಇತರ ಮೂಲಸೌಕರ್ಯ ಯೋಜನೆಗಳನ್ನು ತ್ವರಿತಗೊಳಿಸುವಂತೆ ಕೇಂದ್ರವನ್ನು ಒತ್ತಾಯಿಸಿದ ಹಿನ್ನೆಲೆಯಲ್ಲಿ ಗಡ್ಕರಿ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಪೂರ್ವಾಗ್ರಹವಿಲ್ಲದೆ ದೇಶದ ಸಮಗ್ರ ಅಭಿವೃದ್ಧಿಗೆ ಕೇಂದ್ರ ಬದ್ಧವಾಗಿದೆ ಎಂದು ಗಡ್ಕರಿ ಹೇಳಿದರು.

“ಬಿಜೆಪಿಯ ಸಿದ್ಧಾಂತವೇ ‘ಸರ್ವೇ ಜನಾಹ ಸುಖಿನೋ ಭವಂತು’ ಪರಿಕಲ್ಪನೆಯನ್ನು ಆಧರಿಸಿದೆ. ಕಳೆದ 10 ವರ್ಷಗಳಲ್ಲಿ ನಾವು ಪ್ರಾರಂಭಿಸಿದ ಯೋಜನೆಗಳು ಇದಕ್ಕೆ ಸಾಕ್ಷಿ” ಎಂದು ಅವರು ಹೇಳಿದರು.

ರಿಂಗ್ ರಸ್ತೆ, ಎಕ್ಸ್ ಪ್ರೆಸ್ ವೇ

ಬೆಂಗಳೂರು ಸುತ್ತಮುತ್ತಲಿನ ಪಟ್ಟಣಗಳನ್ನು ಸಂಪರ್ಕಿಸುವ 17,000 ಕೋಟಿ ರೂ.ಗಳ ರಿಂಗ್ ರಸ್ತೆ ಯೋಜನೆಯ ಕಾಮಗಾರಿಗಳು 2024 ರ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಮತ್ತು ಇದನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ಸಚಿವರು ಹೇಳಿದರು.

Share.
Exit mobile version