ಬಳ್ಳಾರಿ: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅಕ್ರಮ ತಡೆಗೆ ಚುನಾವಣಾಧಿಕಾರಿಗಳು ಹದ್ದಿನ ಕಣ್ಣು ನೆಟ್ಟಿದ್ದಾರೆ. ಬಳ್ಳಾರಿಯಲ್ಲಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದಂತ 5 ಕೋಟಿ 50 ಲಕ್ಷ ನಗದನ್ನು ಜಪ್ತಿ ಮಾಡಿದ್ದಾರೆ.
ಬಳ್ಳಾರಿ ನಗರ ಬ್ರೂಸ್ ಪೇಟೆ ಠಾಣಾ ವ್ಯಾಪ್ತಿಯಲ್ಲಿ ಚುನಾವಣಾಧಿಕಾರಿಗಳು ವಾಹನಗಳನ್ನು ತಪಾಸಣೆ ನಡೆಸುತ್ತಿದ್ದರು. ಈ ಚೆಕ್ ಪೋಸ್ಟ್ ನಲ್ಲಿ ಕಾರನ್ನು ತಪಾಸಣೆ ನಡೆಸುತ್ತಿದ್ದಂತ ವೇಳೆಯಲ್ಲಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದಂತ ಹಣ ಪತ್ತೆಯಾಗಿದೆ.
ಕಾರಿನಲ್ಲಿ ಹಣ ಸಾಗಿಸುತ್ತಿದ್ದಂತವರನ್ನು ವಶಕ್ಕೆ ಪಡೆದು ದೊರೆತಂತ 5 ಕೋಟಿ, 50 ಲಕ್ಷ ಹಣದ ಬಗ್ಗೆ ದಾಖಲೆ ಕೇಳಿದ್ದಾರೆ. ಆದ್ರೆ ಅದಕ್ಕೆ ಸೂಕ್ತ ದಾಖಲೆ ನೀಡದ ಕಾರಣ ಅದು ಅಕ್ರಮ ಹಣವೆಂದು ಪರಿಗಣಿಸಿ, ಜಪ್ತಿ ಮಾಡಿದ್ದಾರೆ.
ಬಳ್ಳಾರಿ ನಗರದ ಬ್ರೂಸ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ಹಣವನ್ನು ಸಾಗಿಸುತ್ತಿದ್ದವರನ್ನು ವಶಕ್ಕೆ ಪಡೆದು, ದಾಖಲೆ ಇಲ್ಲದೇ ಸಾಗಿಸುತ್ತಿದ್ದಂತ 5.50 ಕೋಟಿ ಹಣದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
BREAKING : ಬೆಂಗಳೂರಲ್ಲಿ ‘ಹಿಟ್ ಅಂಡ್ ರನ್’ ಗೆ ವೃದ್ದೆ ಬಲಿ : ಕಾರು ಚಾಲಕ ಪರಾರಿ
ಐಪಿಎಲ್ 2024: ‘ಟಾಟಾ ಐಪಿಎಲ್ ಫ್ಯಾನ್ ಪಾರ್ಕ್’ 2ನೇ ಹಂತದ ವೇಳಾಪಟ್ಟಿ ಪ್ರಕಟ | TATA IPL Fan Park