ಹಾವೇರಿ: ಬೆಳಗಾವಿಯಲ್ಲಿ ನಡೆದಿದ್ದಂತ ಗಾಂಧಿ ಭಾರತ ಸಮಾವೇಶದಲ್ಲಿ ಭಾಗಿಯಾಗಿದ್ದಂತ ಕಾಂಗ್ರೆಸ್ ಕಾರ್ಯಕರ್ತನೊಬ್ಬ ಸಾವನ್ನಪ್ಪಿದ್ದನು. ಇಂತಹ ಕೈ ಕಾರ್ಯಕರ್ತನಿಗೆ ಕೆಪಿಸಿಸಿ ವತಿಯಿದಂ 5 ಲಕ್ಷ ಪರಿಹಾರ ವಿತರಣೆ ಮಾಡಲಾಗಿದೆ.
ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲ್ಲೂಕಿನ ನದಿಹರಳಹಳ್ಳಿ ಗ್ರಾಮ ಬಸಪ್ಪ ಕೆಂಚಪ್ಪ ಪಾಮೇನಹಳ್ಳಿ ಎಂಬುವರು ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯೋಜಿಸಿದ್ದಂತ ಗಾಂಧಿ ಭಾರತ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಈ ಸಮಾವೇಶದ ಸಂದರ್ಭದಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದರು.
ಶಾಸಕ ಪ್ರಕಾಶ್ ಕೋಳಿವಾಡಗೆ ಮೃತ ಕುಟುಂಬಸ್ಥರು ಪರಿಹಾರಕ್ಕಾಗಿ ಮನವಿ ಮಾಡಿದ್ದರು. ಅವರ ಮನವಿಗೆ ಸ್ಪಂದಿಸಿರುವಂತ ಶಾಸಕ ಪ್ರಕಾಶ್ ಕೋಳಿವಾಡ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಗಮನಕ್ಕೆ ತಂದಿದ್ದರು. ಇಂದು ಕೆಪಿಸಿಸಿಯಿಂದ 5 ಲಕ್ಷ ಪರಿಹಾರದ ಚೆಕ್ ಅನ್ನು ಕುಟುಂಬಸ್ಥರಿಗೆ ವಿತರಿಸಲಾಯಿತು.
BREAKING: ಆಟೋ, ಬೈಕ್ ಕದಿಯೋದನ್ನೇ ವೃತ್ತಿಯಾಗಿಸಿಕೊಂಡಿದ್ದ ಕುಖ್ಯಾತ ಕಳ್ಳ ಅರೆಸ್ಟ್
BIG NEWS : ದೇಶಾದ್ಯಂತ `ತಾಪಮಾನ’ ಹೆಚ್ಚಳ : ಹೃದಯ, ಶ್ವಾಸಕೋಶ, ಮೆದುಳಿಗೆ ಹಾನಿಕಾರಕ.!