ಬೆಂಗಳೂರು : ನಿನ್ನೆ ಬೆಂಗಳೂರಿನ ಕುಮಾರ ಕೃಪಾ ರಸ್ತೆಯಲ್ಲಿ ಚಿತ್ರಕಲಾ ಪರಿಷತ್ ನಿಂದ ಆಯೋಜಿಸಿದ್ದ 21ನೇ ಚಿತ್ರಸಂತೆಯನ್ನ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಚಿತ್ರಕಲೆಯ ಅಭಿವೃದ್ಧಿಗೆ ನಮ್ಮ ನಮ್ಮ ಸರ್ಕಾರ ಬದ್ಧವಾಗಿದೆ. ಈ ಬಾರಿ ಮೊದಲು ಚಿತ್ರ ಸಂತೆಗೆ 10 ಲಕ್ಷ ನೀಡುವುದಾಗಿ ಹೇಳಿದ್ದೆವು. ಅದನ್ನು ಹೆಚ್ಚಿಸಿ ₹50 ಲಕ್ಷ ಅನುದಾನವನ್ನು ಪರಿಷತ್ತಿಗೆ ಒದಗಿಸಲಾಗುವುದು ಎಂದು ಅವರು ತಿಳಿಸಿದರು.
ಭಾನುವಾರ ಕುಮಾರ ಕೃಪಾ ರಸ್ತೆಯಲ್ಲಿ ಚಿತ್ರಕಲಾ ಪರಿಷತ್ ಹಮ್ಮಿಕೊಂಡಿದ್ದ 21ನೇ ಚಿತ್ರ ಸಂತೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಚಿತ್ರಕಲೆ ಬೆಳೆಸಲು ಸರ್ಕಾರ ತೆರೆದ ಮನಸ್ಸಿನಿಂದ ಕೆಲಸ ಮಾಡಲಿದ್ದು, ಎಲ್ಲ ಜಿಲ್ಲೆಗಳಲ್ಲಿ ಆರ್ಟ್ ಗ್ಯಾಲರಿ ಗ್ಯಾಲರಿ ಸ್ಥಾಪಿಸಲು ನೆರವಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಎಲ್ಲ ಜಿಲ್ಲೆಗಳಲ್ಲಿ ವಸ್ತು ಸಂಗ್ರಹಾಲಯ ಸ್ಥಾಪನೆ ಹಾಗೂ ಆರ್ಟ್ ಗ್ಯಾಲರಿ ಸ್ಥಾಪಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಸಹಾಯ ಮಾಡಲಿದೆ. ಈ ಬಾರಿ ಚಿತ್ರಸಂತೆಯನ್ನು ಬಾಹ್ಯಾಕಾಶ ವಿಜ್ಞಾನಿಗಳಿಗೆ ಸಮರ್ಪಣೆ ಮಾಡಿರುವುದು ಅವರಿಗೆ ಸಲ್ಲಿಸಿರುವ ವಿಶೇಷವಾದ ಗೌರವ ಸೂಚಿಸುತ್ತದೆ ಎಂದರು.
ತಮಿಳುನಾಡಿನ ಕಲಾವಿದ ಮೇಯಪನ್ ಅವರು ರಚಿಸಿರುವ ಪ್ರಕೃತಿಕಲಾಕೃತಿಯನ್ನು ಮುಖ್ಯಮಂತ್ರಿಗಳಿಗೆ ನೀಡಲಾಯಿತು.ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ರಸ್ತೆಯ ಇಕ್ಕೆಲದಲ್ಲಿ ಚಿತ್ರ ಸಂತೆಯನ್ನು ಏರ್ಪಡಿಸುವುದರಿಂದ ನಮ್ಮ ಹಳ್ಳಿ ಸೊಗಡಿನ ಸಂತೆಯನ್ನು ಕಾಣುತ್ತಿದ್ದೇವೆ. ಇದು ನಾಡಿನ ಸಂಸ್ಕೃತಿಯನ್ನು ಬಿಂಬಿಸುತ್ತಿದೆ ಎಂದರು.
ಇದೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಚಿವ ಎಚ್.ಕೆ.ಪಾಟೀಲ್, ಶಾಸಕರಾದ ರಿಜ್ವಾನ್ ಅರ್ಷದ್, ಅಜಯ್ ಸಿಂಗ್ ಸಾಥ್ ನೀಡಿದರು.ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ.ಎಲ್. ಶಂಕರ್, ಉಪಾಧ್ಯಕ್ಷ ಪ್ರಭಾಕರ್‌ಇದ್ದರು.