ಬೆಂಗಳೂರು: ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಟಿಕೇಟ್ ಇಲ್ಲದೆ ಪ್ರಯಾಣಿಸಿದವರಿಗೆ ತಪಾಸಣಾಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಬರೋಬ್ಬರಿ 3836 ಪ್ರಯಾಣಿಕರಿಗೆ 6.86 ಲಕ್ಷ ದಂಡವನ್ನು ವಿಧಿಸಿ, ವಸೂಲಿ ಮಾಡಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಕೆ ಎಸ್ ಆರ್ ಟಿಸಿ ಮಾಹಿತಿ ನೀಡಿದ್ದು, ಜನವರಿ-2025ರ ಮಾಹೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 41446 ವಾಹನಗಳನ್ನು ತನಿಖೆಗೊಳಪಡಿಸಿ 3621 ಪ್ರಕರಣಗಳನ್ನು ಪತ್ತೆಹಚ್ಚಿ, 3836 ಟಿಕೇಟ್ ರಹಿತ ಪ್ರಯಾಣಿಕರಿಂದ 6,86,766/-ರೂಗಳನ್ನು ದಂಡದರೂಪದಲ್ಲಿ ವಸೂಲಿ ಮಾಡಿರುತ್ತಾರೆ ಎಂದಿದೆ.
ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 94,284/-ರೂಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ, ಹಾಗೂ ತಪ್ಪಿತಸ್ಥರ ವಿರುದ್ದ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನುಜರುಗಿಸಲಾಗಿದೆ ಎಂಬುದಾಗಿ ತಿಳಿಸಿದೆ.
ಆದ್ದರಿಂದ ಸಾರ್ವಜನಿಕ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೇಟ್/ ಪಾಸ್ ಪಡೆದು ಪ್ರಯಾಣ ಮಾಡುವಂತೆ, ನಿಗಮವು ಈ ಮೂಲಕ ಪ್ರಯಾಣಿಕರಲ್ಲಿ ಕೋರಿದೆ.
BIG NEWS: ಸೊರಬದ ಕಂತನಹಳ್ಳಿಯಲ್ಲಿ ಮರಗಳ ಮಾರಣಹೋಮ: ತನಿಖಾ ವರದಿ ಸಿದ್ಧ, ತಪ್ಪಿತಸ್ಥರ ವಿರುದ್ಧ ಕ್ರಮ ಫಿಕ್ಸ್
BREAKING: ಲೋಕಸಭೆಯಲ್ಲಿ ಹೊಸ ಆದಾಯ ತೆರಿಗೆ ಮಸೂದೆಯನ್ನು ಮಂಡನೆ | New Income Tax Bill
BREAKING: ಪ್ರಯಾಣಿಕರ ಒತ್ತಡಕ್ಕೆ ಮಣಿದ BMRCL: ‘ನಮ್ಮ ಮೆಟ್ರೋ ದರ’ ಇಳಿಕೆಗೆ ನಿರ್ಧಾರ | Namma Metro