ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಖಾಸಗಿ ಬಸ್ ಗಳಲ್ಲಿ ತೆರಳುವಂತ ಪ್ರಯಾಣಿಕರಿಂದ ದುಪ್ಪಟ್ಟು ದರ ವಸೂಲಿಗೆ ಇಳಿದಂತ ಖಾಸಗಿ ಬಸ್ ಗಳಿಗೆ ಆರ್ ಟಿಓ ಅಧಿಕಾರಿಗಳು ರೈಡ್ ಮಾಡಿ, ಬಿಸಿ ಮುಟ್ಟಿಸಿದ್ದಾರೆ. ಬೆಂಗಳೂರಿನ ಹಲವೆಡೆ ಬಸ್ ಗಳ ಮೇಲೆ ದಾಳಿ ಮಾಡಿ, ಪ್ರಯಾಣಿಕರಿಂದ ಟಿಕೆಟ್ ಪಡೆದು ಪರಿಶೀಲನೆ ನಡೆಸಿ, ಸ್ಥಳದಲ್ಲಿಯೇ ಕಾನೂನು ಕ್ರಮ ಕೂಡ ಕೈಗೊಂಡಿದ್ದಾರೆ.
‘PSI’ ನೇಮಕಾತಿ ಹಗರಣದ ತನಿಖೆ ಸರಿಯಾಗಿ ನಡೆಯುತ್ತಿಲ್ಲ, ಸಿಐಡಿ ಮೇಲೆ ನಂಬಿಕೆಯಿಲ್ಲ :ಸಿದ್ದರಾಮಯ್ಯ
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಬಸ್ ನಿಲ್ದಾಣ, ಮೆಜೆಸ್ಟಿಕ್ ಬಸ್ ನಿಲ್ದಾಣ, ಕಲಾಸಿಪಾಳ್ಯ ಬಸ್ ನಿಲ್ದಾಣ ಸೇರಿದಂತೆ ವಿವಿಧೆಡೆ ಸಾರಿಗೆ ಇಲಾಖೆಯ ಜಂಟಿ ಆಯುಕ್ತ ಹಾಲಸ್ವಾಮಿ ನೇತೃತ್ವದಲ್ಲಿ ಖಾಸಗಿ ಬಸ್ ಗಳ ಮೇಲೆ ದಾಳಿಯನ್ನು ನಡೆಸಲಾಗಿದೆ.
ತೀವ್ರ ಕುತೂಹಲ ಮೂಡಿಸಿದ ಸಿ.ಎಂ ಇಬ್ರಾಹಿಂ- ‘ಕೆಜಿಎಫ್ ಬಾಬು’ ಭೇಟಿ: ಶೀಘ್ರವೇ JDS ಸೇರ್ಪಡೆ?
ಖಾಸಗಿ ಬಸ್ ಗಳ ಮೇಲೆ ದಾಳಿ ನಡೆಸಿರುವಂತ ಸಾರಿಗೆ ಇಲಾಖೆಯ ಅಧಿಕಾರಿಗಳು, ಪ್ರಯಾಣಿಕರಿಂದ ಟಿಕೆಟ್ ಪಡೆದು ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿಗೆ ಇಳಿದಿದ್ದರೇ ಸ್ಥಳದಲ್ಲಿಯೇ ಕಾನೂನು ಕ್ರಮವನ್ನು ಕೈಗೊಂಡು ಬಿಸಿ ಮುಟ್ಟಿಸಿದ್ದಾರೆ.
‘ಭಾರತ್ ಜೋಡೋ ಯಾತ್ರೆ’ ಇದೀಗ ‘ಕಾಂಗ್ರೆಸ್ ತೊಡೋ ಯಾತ್ರೆ’ : ಪ್ರಲ್ಹಾದ್ ಜೋಶಿ ವ್ಯಂಗ್ಯ
ಅಂದಹಾಗೇ ದೀಪಾವಳಿ ಹಬ್ಬಕ್ಕೆ ಊರಿಗೆ ಬೆಂಗಳೂರಿನಿಂದ ತೆರಳೋ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಬಹುತೇಕ ಬಸ್ ಗಳ ಸೀಟುಗಳು ಸಂಪೂರ್ಣ ಭರ್ತಿಯಾಗಿವೆ. ಸಾರಿಗೆ ಬಸ್ ಗಳ ಸಂಚಾರವನ್ನು ಹೆಚ್ಚು ಮಾಡಿದ್ದರೂ ಸಹ, ತಮ್ಮೂರಿಗೆ ತೆರಳೋದಕ್ಕೆ ಸೀಟು ಸಿಗದೇ ಬಸ್ ಗಳಲ್ಲಿ ನಿಂತು ಪ್ರಯಾಣಿಸುತ್ತಿರುವುದು ಕಂಡು ಬರುತ್ತಿದೆ.