ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಹಾಗೂ ಜನಪ್ರಿಯ ನಟ ದೊಡ್ಡಣ್ಣ (Actor Doddanna) ಅವರು ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಬೆನ್ನಲ್ಲೇ, ನಟ ದೊಡ್ಡಣ್ಣ ಅವರು ಕಂಟಕ ಪರಿಹಾರಕ್ಕಾಗಿ ಆಂಜನೇಯ ಸ್ವಾಮಿಯ ಮೊರೆ ಹೋಗಿದ್ದಾರೆ.
ತಮ್ಮ ಬಗ್ಗೆ ಹರಡಿದ ಅಪಪ್ರಚಾರ ಮತ್ತು ಕಂಟಕ ನಿವಾರಣೆಗಾಗಿ ದೊಡ್ಡಣ್ಣ ಅವರು ತಮ್ಮ ಕುಟುಂಬ ಸಮೇತರಾಗಿ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನಲ್ಲಿರುವ ಪ್ರಸಿದ್ಧ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದ್ದಾರೆ.
ಆತಂಕ ಮೂಡಿಸಿದ್ದ ಕಿಡಿಗೇಡಿಗಳ ಕೃತ್ಯ:
ಶುಕ್ರವಾರ ಬೆಳಗ್ಗೆ ಕೆಲವು ಕಿಡಿಗೇಡಿಗಳು ಹಿರಿಯ ನಟ ದೊಡ್ಡಣ್ಣ ಇನ್ನಿಲ್ಲ ಎಂಬ ಸುಳ್ಳು ಸುದ್ದಿಯನ್ನು (Rumors) ಸೋಷಿಯಲ್ ಮೀಡಿಯಾದಲ್ಲಿ ಹಬ್ಬಿಸಿದ್ದರು. ಈ ಸುದ್ದಿ ಕಾಡ್ಗಿಚ್ಚಿನಂತೆ ಹರಡುತ್ತಿದ್ದಂತೆ ಚಿತ್ರರಂಗದ ಗಣ್ಯರು, ಆಪ್ತರು ಹಾಗೂ ಲಕ್ಷಾಂತರ ಅಭಿಮಾನಿಗಳು ತೀವ್ರ ಆತಂಕಕ್ಕೆ ಒಳಗಾಗಿದ್ದರು. ದೊಡ್ಡಣ್ಣ ಅವರ ಆರೋಗ್ಯದ ಬಗ್ಗೆ ವಿಚಾರಿಸಲು ಅವರ ಕುಟುಂಬಸ್ಥರಿಗೆ ಸರಣಿ ಕರೆಗಳು ಬರಲಾರಂಭಿಸಿದ್ದವು.
ನಾನು ಆರೋಗ್ಯವಾಗಿದ್ದೇನೆ: ವಿಡಿಯೋ ಮೂಲಕ ದೊಡ್ಡಣ್ಣ ಸ್ಪಷ್ಟನೆ
ಸುಳ್ಳು ಸುದ್ದಿಯಿಂದ ಆತಂಕಗೊಂಡಿದ್ದ ಅಭಿಮಾನಿಗಳಿಗೆ ಸ್ವತಃ ದೊಡ್ಡಣ್ಣ ಅವರೇ ವಿಡಿಯೋ ಸಂದೇಶದ ಮೂಲಕ ಧೈರ್ಯ ತುಂಬಿದ್ದಾರೆ.
“ನಾನು ಸಂಪೂರ್ಣವಾಗಿ ಆರೋಗ್ಯವಾಗಿದ್ದೇನೆ. ಬೆಳಗ್ಗೆ ನಾನು ನಿದ್ರೆಯಿಂದ ಎದ್ದೇಳುವ ಮುನ್ನವೇ ನನ್ನ ಬಗ್ಗೆ ಇಂತಹದ್ದೊಂದು ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಬರುತ್ತಿರುವ ಸುದ್ದಿ ಸಂಪೂರ್ಣ ಸುಳ್ಳು ಮತ್ತು ಆಧಾರರಹಿತ” ಎಂದು ದೊಡ್ಡಣ್ಣ ಸ್ಪಷ್ಟಪಡಿಸಿದ್ದಾರೆ.
ಕಿಡಿಗೇಡಿಗಳಿಗೆ ಕಾನೂನು ಕ್ರಮದ ಎಚ್ಚರಿಕೆ:
ಅಭಿಮಾನಿಗಳ ಪ್ರೀತಿಯನ್ನು ಸ್ಮರಿಸಿದ ಅವರು, “ನಿಮ್ಮೆಲ್ಲರ ಆಶೀರ್ವಾದ ಮತ್ತು ಪ್ರೀತಿ ಇರುವವರೆಗೆ ನನಗೆ ಏನೂ ಆಗುವುದಿಲ್ಲ, ನಾನು ಚೆನ್ನಾಗಿರುತ್ತೇನೆ ಎಂಬ ನಂಬಿಕೆ ನನಗಿದೆ. ಆದರೆ, ನನ್ನ ಬಗ್ಗೆ ಇಂತಹ ದstatus ಸುಳ್ಳು ಸುದ್ದಿ ಹಬ್ಬಿಸಿ ಆತಂಕ ಸೃಷ್ಟಿಸಿದವರನ್ನು ನಾನು ಸುಮ್ಮನೆ ಬಿಡುವುದಿಲ್ಲ. ಇಂತಹ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇನೆ” ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.
ರಾಜ್ಯಾದ್ಯಂತ ‘ಉಚಿತ ಬಸ್ ಪಾಸ್’ ವಿತರಣೆ ಆರಂಭ: ಇಂದು ಒಂದೇ ದಿನ 2764 ವಿದ್ಯಾರ್ಥಿಗಳಿಗೆ ಪಾಸ್ ವಿತರಣೆ








