ಬೆಂಗಳೂರು: ಸಚಿವ ಜಮೀರ್ ಅಹಮದ್ ಜೆಡಿಎಸ್ ಪಕ್ಷಕ್ಕೆ ಸೇರುತ್ತಾರೆಯೇ ಎಂದು ವರದಿಗಾರರು ಕೇಳಿದ ಪ್ರಶ್ನೆಗೆ ನೇರ ಉತ್ತರ ನೀಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ಕಾಂಗ್ರೆಸ್ ಪಕ್ಷದ ಯಾರೋಬ್ಬರೂ ನನ್ನ ಸಂಪರ್ಕದಲ್ಲಿ ಇಲ್ಲ. ಹಾಗಿದ್ದ ಮೇಲೆ ಅವರು ಪಕ್ಷ ಸೇರುವ ಮಾತೆಲ್ಲಿಂದ ಬರಬೇಕು? ಇದೆಲ್ಲವೂ ಗಾಳಿಸುದ್ದಿಯಷ್ಟೇ ಎಂದು ಈವರೆಗೆ ಕೆಲವರು ತೇಲಿಬಿಟ್ಟಿದ್ದ ಸುದ್ದಿಗಳಿಗೆ ತೆರೆ ಎಳೆದರು.
ಪಕ್ಷಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಎಂಬ ಬಗ್ಗೆ ನಾನು ತಾನೇ ನಿರ್ಧಾರ ಕೈಗೊಳ್ಳಬೇಕು. ನನ್ನ ಸಂಪರ್ಕಕ್ಕೇ ಯಾರೂ ಬಂದಿಲ್ಲ ಎಂದ ಮೇಲೆ ಪಕ್ಷಕ್ಕೆ ಸೇರಿಸಿಕೊಳ್ಳುವ ಮಾತೇಕೆ ಬರುತ್ತದೆ ಎಂದು ಅವರು ಹೇಳಿದರು.
ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳ ಫಲಿತಾಂಶ ಏನಾಗುತ್ತದೋ ನೋಡೋಣ. ಫಲಿತಾಂಶ ಬರುವ ಮುನ್ನವೇ ಯಾಕೆ ಅನುಮಾನ? ಅಲ್ಪಸಂಖ್ಯಾತರನ್ನು ನಾವೇ ರಕ್ಷಣೆ ಮಾಡುವವರು ಎನ್ನುವ ಕಾಂಗ್ರೆಸ್ ಯಾಕೆ ಗೊಂದಲ ಮಾಡುತ್ತಿದೆ. ಒಂದು ಸಮುದಾಯದ ಮೇಲೆ ಯಾಕೆ ಗದಾಪ್ರಹಾರ ನಡೆಸುತ್ತಿದ್ದಾರೆ? ಎಂದು ಅವರು ಪ್ರಶ್ನಿಸಿದರು.
ನನಗೂ ನೀವು ಹೇಳಿದ ವ್ಯಕ್ತಿಗೂ ಸಂಪರ್ಕ ಇಲ್ಲ. ಜೆಡಿಎಸ್ ಜತೆಗೆ ಯಾರೂ ಸಂಪರ್ಕ ಸಾಧಿಸಿಲ್ಲ. ನಾವು ಮಾಡಿದ ತಪ್ಪುಗಳನ್ನೇ ಮತ್ತೆ ಮಾಡುವುದಿಲ್ಲ. ಇನ್ನೊಂದು ಪಕ್ಷದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟುಗಳನ್ನು ಲಾಭ ಮಾಡಿಕೊಳ್ಳುವ ಮನಸ್ಥಿತಿ ನಮ್ಮದಲ್ಲ ಎಂದು ಅವರು ಸ್ಪಷ್ಟಪಡಿಸಿದರು.
AI ನೀಡುವ ಸುಳ್ಳು ಮಾಹಿತಿ ಬಗ್ಗೆ ಎಚ್ಚರ! ನ್ಯಾಯದಾನಕ್ಕೆ ಕೃತಕ ಬುದ್ಧಿಮತ್ತೆ ಪರ್ಯಾಯವಲ್ಲ: ನ್ಯಾ. ಬಿ.ವಿ. ನಾಗರತ್ನ
ನಿಮ್ಮ ಮೇಲಿನ ಆರೋಪ ಸುಳ್ಳಾಗಲಿ: ತಂದೆ ವಿನಯ್ ಕುಲಕರ್ಣಿ ಪರ ಪುತ್ರಿ ವೈಶಾಲಿ ಭಾವನಾತ್ಮಕ ಪೋಸ್ಟ್!








