ರಾಯಚೂರು : ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿರುದ್ಧ ರುಪ್ಸಾ ಭ್ರಷ್ಟಾಚಾರ ಆರೋಪದ ಕುರಿತು ಕೃಷಿ ಸಚಿವ ಬಿ.ಸಿ.ಪಾಟೀಲ್ ಪ್ರತಿಕ್ರಿಯೆ ನೀಡಿದ್ದು, ಈಗ ಚುನಾವಣೆ ವರ್ಷ. ಹೀಗಾಗಿ ಆರೋಪ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
BIGG NEWS : ಸರ್ಕಾರದ ವತಿಯಿಂದ `ಅಗ್ನಿ ಬನ್ನಿಗರಾಯ ಜಯಂತಿ’ ಆಚರಣೆ : ಸಿಎಂ ಬಸವರಾಜ ಬೊಮ್ಮಾಯಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ 40 ಪರ್ಸೆಂಟ್ ಆರೋಪ ಮಾಡಿರುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಕಾಂಗ್ರೆಸ್ ಪ್ರಾಯೋಜಿತರು. ಸಿದ್ದರಾಮಯ್ಯರ ಮನೆಗೆ ಹೋಗಿ ಬಂದು ಆರೋಪಿಸಿದ್ದಾರೆ. ಎಲ್ಲಾ ಶಾಸಕರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದಿದ್ದಾರೆ. ಅದರಲ್ಲಿ ಕಾಂಗ್ರೆಸ್ ಪಕ್ಷದವರೂ ಇದ್ದಾರೆ ಅಂದಂತಾಯ್ತಲ ಎಂದರು.