ಕೈವ್:ಉಕ್ರೇನ್ ಮತ್ತು ರಷ್ಯಾ ನಡುವೆ ತಾತ್ಕಾಲಿಕ ಕದನ ವಿರಾಮ (Ceasefire) ಘೋಷಣೆಯಾಗಲಿದೆ ಎಂಬ ನಿರೀಕ್ಷೆಗಳ ನಡುವೆಯೇ, ರಷ್ಯಾ ಪಡೆಗಳು ಉಕ್ರೇನ್‌ನ ವಿವಿಧ ನಗರಗಳ ಮೇಲೆ ನಡೆಸಿದ ಭೀಕರ ಕ್ಷಿಪಣಿ ದಾಳಿಯಲ್ಲಿ ಕನಿಷ್ಠ 22 ಮಂದಿ ಮೃತಪಟ್ಟಿದ್ದಾರೆ. ಶಾಂತಿ ಮಾತುಕತೆಯ ಮುನ್ಸೂಚನೆಗಳ ನಡುವೆ ನಡೆದ ಈ ದಾಳಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ರಷ್ಯಾದ ಕ್ಷಿಪಣಿಗಳು ಉಕ್ರೇನ್‌ನ ಜನನಿಬಿಡ ವಸತಿ ಸಮುಚ್ಚಯಗಳು ಮತ್ತು ಆಸ್ಪತ್ರೆಗಳ ಮೇಲೆ ಬಿದ್ದಿದ್ದು, ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಎರಡೂ ದೇಶಗಳ ನಡುವೆ ಮಾನವೀಯ ನೆಲೆಯಲ್ಲಿ ಕದನ ವಿರಾಮ ಘೋಷಿಸಲು ಸಿದ್ಧತೆಗಳು ನಡೆಯುತ್ತಿದ್ದವು. ಆದರೆ ಈ ದಾಳಿಯು ಶಾಂತಿ ಪ್ರಕ್ರಿಯೆಗೆ ದೊಡ್ಡ ಹಿನ್ನಡೆ ತಂದಿದೆ.
ರಷ್ಯಾದ ಈ ಅಮಾನವೀಯ ಕೃತ್ಯಕ್ಕೆ ತಕ್ಕ ಪ್ರತ್ಯುತ್ತರ ನೀಡಲಾಗುವುದು ಮತ್ತು ನಮ್ಮ ಭೂಮಿಯ ರಕ್ಷಣೆಗಾಗಿ ಹೋರಾಟ ಮುಂದುವರಿಸಲಾಗುವುದು ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಗುಡುಗಿದ್ದಾರೆ.








