ನವದೆಹಲಿ: ವಾಷಿಂಗ್ಟನ್ ಪೋಸ್ಟ್ ಸೇರಿದಂತೆ ಅಮೆರಿಕದ ಮುಖ್ಯವಾಹಿನಿಯ ಮಾಧ್ಯಮಗಳು ಭಾರತದ ಬಗ್ಗೆ ‘ಪಕ್ಷಪಾತಿ’ ವರದಿ ಮಾಡುತ್ತಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಟೀಕಿಸಿದ್ದಾರೆ. ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಭಾನುವಾರ ದಿ ವಾಷಿಂಗ್ಟನ್ ಪೋಸ್ಟ್ ಸೇರಿದಂತೆ ಅಮೆರಿಕದ ಮುಖ್ಯವಾಹಿನಿಯ ಮಾಧ್ಯಮಗಳ ಮೇಲೆ ಕಿಡಿಕಾರಿದ್ದಾರೆ. ಪ್ರತಿಷ್ಠಿತ ವಾಷಿಂಗ್ಟನ್ ಪೋಸ್ಟ್ ವಾಷಿಂಗ್ಟನ್ ಡಿಸಿಯಿಂದ ಪ್ರಕಟವಾದ ರಾಷ್ಟ್ರೀಯ ದಿನಪತ್ರಿಕೆಯಾಗಿದೆ ಮತ್ತು ಪ್ರಸ್ತುತ ಅಮೆಜಾನ್ನ ಜೆಫ್ ಬೆಜೋಸ್ ಒಡೆತನದಲ್ಲಿದೆ.
BREAKING NEWS : ಶಿವಮೊಗ್ಗದಲ್ಲಿ ಶಂಕಿತ ಉಗ್ರರ ಬಂಧನ ಪ್ರಕರಣ : ಮತ್ತೆ 5 ದಿನ ಮಾಚ್, ಯಾಸೀನ್ ಪೊಲೀಸ್ ವಶಕ್ಕೆ
BIGG NEWS : ವರುಣ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ರೌಂಡ್ಸ್ : ಚಿಕ್ಕಹೊಮ್ಮ ಗ್ರಾಮದ ಕೆರೆಗೆ ಬಾಗಿನ ಅರ್ಪಣೆ
BIGG NEWS : ಆದಾಯ ಮೀರಿ ಆಸ್ತಿ ಗಳಿಕೆ ಆರೋಪ : ಸಿಬಿಐ ಪ್ರಕರಣ ರದ್ದುಕೋರಿ ಹೈಕೋರ್ಟ್ ಗೆ ಡಿಕೆ ಶಿವಕುಮಾರ್ ಅರ್ಜಿ
ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಪ್ರಕರಣವನ್ನು ರದ್ದು ಕೋರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ವಿರುದ್ಧ ಕೇಂದ್ರ ತನಿಖಾ ದಳ ದಾಖಲಿಸಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಡಿ.ಕೆ.ಶಿವಕುಮಾರ್ ಕರ್ನಾಟಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಆಕ್ಷೇಪಣೆ ಸಲ್ಲಿಸಲು ಹೆಚ್ಚುವರಿ ಕಾಲಾವಕಾಶ ಬೇಕು ಎಂದು ಸಿಬಿಐ ಮನವಿ ಮಾಡಿದೆ.
ವಿಚಾರಣೆ ವೇಳೆ ತನಿಖೆ ಪೂರ್ಣಗೊಂಡು ಆರೋಪಪಟ್ಟಿ ದಾಖಲಿಸಲಾಗಿದೆಯೇ ಎಂದು ಸಿಬಿಐ ಪರ ವಕೀಲರನ್ನು ಹೈಕೋರ್ಟ್ ಪ್ರಶ್ನಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ಸಿಬಿಐ ಪರ ವಕೀಲರು, ಡಿ.ಕೆ.ಶಿವಕುಮಾರ್ ವಿರುದ್ಧ ತನಿಖೆ ನಡೆಯುತ್ತಿದೆ ಎಂದು ಹೇಳಿದೆ. ವಿಚಾರಣೆಯನ್ನು ದಸರಾ ರಜೆಯ ಬಳಿಕ ಮುಂದುವರಿಸಲಾಗುವುದು ಎಂದು ಹೈಕೋರ್ಟ್ ಹೇಳಿತು.