ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ ಅಪರ ಕಾರ್ಯದರ್ಶಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಎಸ್.ನಿರ್ಮಲಾ ಅವರಿಗೆ ಹೊಸದಾಗಿ ಸೃಜನೆಯಾಗಿರುವ ಕಾರ್ಯದರ್ಶಿ-2ಹುದ್ದೆಗೆ ಬಡ್ತಿ ನೀಡಿ ಸರಕಾರ ಆದೇಶಿಸಿದೆ.
ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ (ಅಧಿಕಾರಿ ಮತ್ತು ನೌಕರರುಗಳ ನೇಮಕಾತಿ ಹಾಗೂ ಸೇವಾ ಷರತ್ತುಗಳು)ನಿಯಮಗಳು, 2021ರ ನಿಯಮ 6(i)ರ ಪ್ರಕಾರ ಮಾನ್ಯ ವಿಶೇಷ ಮಂಡಳಿಗೆ ಪ್ರದತ್ತವಾಗಿರುವ ಅಧಿಕಾರದ ರೀತ್ಯಾ ಹಾಗೂ ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ (ಅಧಿಕಾರಿ ಮತ್ತು ನೌಕರರುಗಳ ನೇಮಕಾತಿ ಹಾಗೂ ಸೇವಾ ಷರತ್ತುಗಳು)ನಿಯಮಗಳು, 2024ರ (2ನೇ ತಿದ್ದುಪಡಿ) ಅನ್ವಯ ಅಪರ ಕಾರ್ಯದರ್ಶಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಸ್.ನಿರ್ಮಲಾ ಇವರನ್ನು ಹೊಸದಾಗಿ ಸೃಜನೆಯಾಗಿರುವ ಕಾರ್ಯದರ್ಶಿ-2 ಹುದ್ದೆಗೆ ಸ್ಥಾನಪನ್ನ ಬಡ್ತಿ ನೀಡಿ ನೇಮಕ ಮಾಡಲಾಗಿದೆ ಎಂದು ವಿಧಾನ ಪರಿಷತ್ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮೀ ಅವರು ತಿಳಿಸಿದ್ದಾರೆ.
ಚಿತ್ರದುರ್ಗದಲ್ಲಿ ಮನಕಲಕುವ ಘಟನೆ : ಪತ್ನಿ ಸಾವಿನಿಂದ ನೊಂದು ಪತಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆ!