ಬೆಂಗಳೂರು: ಶೇ.60ರಷ್ಟು ಕಮೀಷನ್ ವೀಡಿಯೋ ವೈರಲ್ ಆಗಿದ್ದರಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿ ಕುಮಾರ್ ವಿರುದ್ಧ ಗರಂ ಆಗಿದ್ದರು. ಅಲ್ಲದೇ ಕೂಡಲೇ ರಾಜೀನಾಮೆ ಸಲ್ಲಿಸುವಂತೆಯೂ ಸೂಚಿಸಿದ್ದರು. ಈ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ, ಎಸ್ ರವಿಕುಮಾರ್ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
ಇಂದು ಸಿಎಂ ಸಿದ್ಧರಾಮಯ್ಯ ಅವರಿಗೆ ರಾಜೀನಾಮೆ ಪತ್ರವನ್ನು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್ ಸಲ್ಲಿಸಿದ್ದಾರೆ. ಅವರು ಸಲ್ಲಿಸಿರುವಂತ ರಾಜೀನಾಮೆ ಪತ್ರದಲ್ಲಿ 2024 ರ ಮಾರ್ಚ್ 15 ರಿಂದ ನಾನು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ನನ್ನ ಅಧಿಕಾರಾವಧಿಯಲ್ಲಿ ಸರ್ಕಾರದ ಕಾರ್ಯಕ್ರಮಗಳನ್ನು ನಿಗಮದ ಮೂಲಕ ಕಾರ್ಯಗತಗೊಳಿಸಿದ್ದೇನೆ. ನನ್ನ ಅವಧಿಯಲ್ಲಿ ನಿಗಮದಲ್ಲಿ ಯಾವುದೇ
ಅಕ್ರಮಗಳು ನಡೆದಿರುವುದಿಲ್ಲ ಎಂಬುದನ್ನು ತಮ್ಮ ಗಮನಕ್ಕೆ ತರಬಯಸುತ್ತೇನೆ ಎಂದಿದ್ದಾರೆ.
ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದಿದ ಅಕ್ರಮಗಳ ಬಗ್ಗೆ ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿರುವುದು ಸರಿಯಷ್ಟೆ. ನಿಗಮದಲ್ಲಿ ಹಿಂದಿನಿಂದ ನಡೆದುಕೊಂಡು ಬರುತ್ತಿದ್ದ ಕೆಲವು ಅನುಚಿತ ವ್ಯವಹಾರ ಮತ್ತು ಅಶಿಸ್ತನ್ನು ನಾನು ಪತ್ತೆ ಹಚ್ಚಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದಕ್ಕೆ ನನ್ನ ವಿರುದ್ಧ ಪಿತೂರಿ ನಡೆದು ನನ್ನ ತೇಜೋವಧೆ ಮಾಡುವ ಪ್ರಯತ್ನ ನಡೆದಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧದ ಅಗತ್ಯ ಕ್ರಮಕ್ಕೆ ತಮ್ಮಲ್ಲಿ ವಿನಂತಿಸುತ್ತೇನೆ. ಸೈಬರ್ ಪೊಲೀಸರು ಮತ್ತು ಎಫ್‌ಎಸ್‌ಎಲ್ ತಂಡದಿಂದ ತನಿಖೆ ನಡೆಸಿ ತಾಂತ್ರಿಕ ಸಲಕರಣೆಗಳನ್ನು ಬಳಸಿ ನನ್ನ ತೇಜೋವಧೆಗೆ ವೀಡಿಯೋ ಮಾಡಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ತಮ್ಮಲ್ಲಿ ವಿನಂತಿಸಿದ್ದಾರೆ.
ನಾನು ಅಧ್ಯಕ್ಷನಾಗಿ ಕಾರ್ಯ ನಿರ್ವಹಿಸಲು ಅವಕಾಶ ನೀಡಿದ ತಮಗೆ ಹಾಗೂ ಸರ್ಕಾರಕ್ಕೆ ನಾನು ಆಭಾರಿಯಾಗಿದ್ದೇನೆ. ನಾನು ಶಿವಮೊಗ್ಗ ನಿವಾಸಿಯಾಗಿರುವುದರಿಂದ, ನಿಗಮದ ಅಧ್ಯಕ್ಷನಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ನಿಗಮದ ಅಧ್ಯಕ್ಷ ಸ್ಥಾನಕ್ಕೆ ನನ್ನ ರಾಜಿನಾಮೆಯನ್ನು ನೀಡುತ್ತಿದ್ದೇನೆ. ದಯಮಾಡಿ ಅಂಗೀಕರಿಸಿ ಎಂಬುದಾಗಿ ಕೋರಿದ್ದಾರೆ.
ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್: ರಾಜ್ಯ ಸರ್ಕಾರದಿಂದ ಹೊಸ ನೇಮಕಾತಿ ಅಧಿಸೂಚನೆಗೆ ಗ್ರೀನ್ ಸಿಗ್ನಲ್
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತಪತ್ರ ಬಳಸಿದರೆ ಬಿಜೆಪಿಗೇಕೆ ಗಾಬರಿ?: ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ