ಬೀದರ್: ಗುತ್ತಿಗೆದಾರ ಸಚಿನ್ ಪಾಂಚಾಳ್ ಅವರು ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಕೊಲೆ ಬೆದರಿಕೆ ಹಾಕಿದ್ದಾರೆ ಅಂತ ಆರೋಪಿಸಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಇಂತಹ ಗುತ್ತಿಗೆದಾರ ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರ 10 ಲಕ್ಷ ಪರಿಹಾರ ನೀಡುವುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಘೋಷಿಸಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಚಿನ್ ಪಾಂಚಾಳ್ ಆತ್ಮಹತ್ಯೆಗೆ ಸಂತಾಪವಿದೆ. ಈ ಘಟನೆಯಲ್ಲಿ ಕರ್ತವ್ಯ ಲೋಪ ಎಸಗಿದಂತ ಪೊಲೀಸರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ. ಈ ಪ್ರಕರಣವನ್ನು ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದರು.
ಇನ್ನೂ ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಕಟ್ಟಿತೊಗಾಂವ್ ಗ್ರಾಮದ ಸಚಿನ್ ಪಾಂಚಾಳ್ ಅವರ ಮನೆಗೆ ಭೇಟಿ ನೀಡಿದಂತ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಅಲ್ಲದೇ ಸಚಿನ್ ಕುಟುಂಬಸ್ಥರಿಗೆ ಸರ್ಕಾರದಿಂದ 10 ಲಕ್ಷ ಪರಿಹಾರವನ್ನು ನೀಡುವುದಾಗಿ ಇದೇ ಸಂದರ್ಭದಲ್ಲಿ ಘೋಷಿಸಿದರು.
BIG NEWS: ಬೆಂಗಳೂರು ಜನತೆ ಗಮನಕ್ಕೆ: ಇ-ಖಾತಾ ಪಡೆಯಲು ಈ ಐದು ದಾಖಲೆಗಳನ್ನು ಅಪ್ ಲೋಡ್ ಮಾಡುವುದು ಕಡ್ಡಾಯ
ಅಫ್ಘಾನ್ ತಾಲಿಬಾನ್ ಪಡೆಗಳ ಗುಂಡಿನ ದಾಳಿ: ಪಾಕ್ ಸೈನಿಕ ಸಾವು, 11 ಮಂದಿಗೆ ಗಾಯ