ಜಾಮ್ನರ್ : ರಜೆ ಕಳೆಯಲು ಮನೆಗೆ ಬಂದಿದ್ದ ಸಚಿನ್ ತೆಂಡೂಲ್ಕರ್’ ಸೆಕ್ಯುರಿಟಿ ಗಾರ್ಡ್ `ಪ್ರಕಾಶ್ ಕಪಾಡೆ’ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳವಾರ ರಾತ್ರಿ ಜಾಮ್ನರ್ ನಲ್ಲಿ ಈ ಘಟನೆ ನಡೆದಿದೆ.
ಜಾಮ್ನರ್ ಗಣಪತಿ ನಗರ ನಿವಾಸಿ ಪ್ರಕಾಶ್ ಗೋವಿಂದ ಕಪ್ಡೆ (37). ಅವರು ಈ ಹಿಂದೆ ಕೇಂದ್ರ ಸಚಿವ ನಾರಾಯಣ್ ರಾಣೆ, ಸಚಿವ ಛಗನ್ ಭುಜ್ಬಲ್ ಮತ್ತು ಕ್ರಿಕೆಟಿಗ ಸಚಿನ್ ತೆಡುಲ್ಕರ್ ಅವರ ಅಂಗರಕ್ಷಕರಾಗಿ ಕೆಲಸ ಮಾಡಿದ್ದರು. ಮೃತರು ತಾಯಿ, ತಂದೆ, ಪತ್ನಿ, ಇಬ್ಬರು ಪುತ್ರರು, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.
ಕಪ್ಡೆ ಅವರ ಆತ್ಮಹತ್ಯೆಯ ಹಿಂದಿನ ಕಾರಣವನ್ನು ಇನ್ನೂ ಕಂಡುಹಿಡಿಯಲಾಗಿಲ್ಲ. ಕಪ್ಡೆ ಪ್ರಸ್ತುತ ಸಚಿನ್ ತೆಂಡೂಲ್ಕರ್ ಅವರ ಮನೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಅವರು ಕಳೆದ ಎಂಟು ದಿನಗಳಿಂದ ತಮ್ಮ ಗ್ರಾಮದಲ್ಲಿದ್ದರು. ಸುದ್ದಿ ಹರಡುತ್ತಿದ್ದಂತೆ, ಜನರು ಅವರ ಮನೆಯ ಬಳಿ ಜಮಾಯಿಸಿದರು. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.