ಕೋಲ್ಕತ್ತಾ: ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹರಣರದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಟಿಎಂಸಿ ನಾಯಕ ಪಾರ್ಥ ಚಟರ್ಜಿಯವರು ಪ್ರಕರಣ ಸಂಬಂಧ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಷಡ್ಯಂತ್ರಕ್ಕೆ ಬಲಿಯಾಗಿ ತಮ್ಮನ್ನು ಸಿಲುಕಿಸಲಾಗುತ್ತಿದೆ ಎಂದಿದ್ದಾರೆ.
BIGG BREAKING NEWS : ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪೊಲೀಸ್ ವಶಕ್ಕೆ
ಪಾರ್ಥ ಚಟರ್ಜಿ ವಿರುದ್ಧ ಹಗರಣ ಬಯಾಲಾದ ಬಳಿಕ ಟಿಎಂಸಿ ಪಕ್ಷದಲ್ಲಿ ಅನೇಕ ಗದ್ದಲಗಳು ಎದ್ದಿದ್ದವು. ಚಟರ್ಜಿಯವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಅನೇಕ ಟಿಎಂಸಿ ನಾಯಕರು ಒತ್ತಾಯಿಸಿದ್ದರು. ಇದರ ಬೆನ್ನಲ್ಲೆ ನಿನ್ನೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಚಟರ್ಜಿ ಅವರನ್ನು ಪಕ್ಷದ ಎಲ್ಲಾ ಹುದ್ದೆಗಳಿಂದ ತೆಗೆದು ಹಾಕಿದ್ದು, ತೃಣಮೂಲ ಕಾಂಗ್ರೆಸ್ನಿಂದ ಅಮಾನತುಗೊಳಿಸಿದ್ದಾರೆ.
ಪಾರ್ಥ ಚಟರ್ಜಿ ಅವರು ಸುಮಾರು ಎರಡು ದಶಕಗಳ ಕಾಲ ಟಿಎಂಸಿಯ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಈ ವರ್ಷದ ಆರಂಭದಲ್ಲಿ ಅವರನ್ನು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.
ಇತ್ತ ಚಟರ್ಜಿ ಅವರ ಆಪ್ತ ಸಹಾಯಕಿ ಅರ್ಪಿತಾ ಮುಖರ್ಜಿ ಅವರ ಪಾದಗಳಿಗೆ ಗಾಯವಾಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗುತ್ತಿದೆ.
ಗುಜರಾತಿನಲ್ಲಿ ಮಾಫಿಯಾಗಳನ್ನು ರಕ್ಷಿಸುತ್ತಿರುವವರು ಯಾರು? : ಅಕ್ರಮ ಮದ್ಯ ದುರಂತ ಕುರಿತು ರಾಹುಲ್ ಗಾಂಧಿ ವಾಗ್ದಾಳಿ
ಅರ್ಪಿತಾ ಮುಖರ್ಜಿ ಅವರಿಗೆ ಸಂಬಂಧಿಸಿದ ಮತ್ತೊಂದು ಅಪಾರ್ಟ್ಮೆಂಟ್ ಮೇಲೆ ಜಾರಿ ನಿರ್ದೇಶನಾಲಯ ಶುಕ್ರವಾರ ದಾಳಿ ನಡೆಸಿದೆ. ಆಕೆಗೆ ಸೇರಿದ ಮತ್ತೊಂದು ಫ್ಲಾಟ್ನಿಂದ ತನಿಖಾ ಸಂಸ್ಥೆಯು ಸುಮಾರು 28 ಕೋಟಿ ರೂಪಾಯಿ ನಗದು ಮತ್ತು 5 ಕೆಜಿಗೂ ಹೆಚ್ಚು ಚಿನ್ನವನ್ನು ವಶಪಡಿಸಿಕೊಂಡಿದೆ.
ಈ ಹಿಂದೆ ಆಕೆಯ ಮನೆಯಲ್ಲಿ 21.90 ಕೋಟಿ ನಗದು, 56 ಲಕ್ಷ ವಿದೇಶಿ ಕರೆನ್ಸಿ ಮತ್ತು 76 ಲಕ್ಷ ಮೌಲ್ಯದ ಚಿನ್ನ ಪತ್ತೆಯಾಗಿತ್ತು.
ಕೋಲ್ಕತ್ತಾ ಹೈಕೋರ್ಟ್ ನಿರ್ದೇಶನದಂತೆ ಸಿಬಿಐ, ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗದ (ಎಸ್ಎಸ್ಸಿ) ಶಿಫಾರಸಿನ ಮೇರೆಗೆ ಸರ್ಕಾರಿ ಪ್ರಾಯೋಜಿತ ಮತ್ತು ಅನುದಾನಿತ ಶಾಲೆಗಳಲ್ಲಿ ಗ್ರೂಪ್-ಸಿ ಮತ್ತು ಡಿ ಸಿಬ್ಬಂದಿ ಮತ್ತು ಶಿಕ್ಷಕರ ನೇಮಕಾತಿಯಲ್ಲಿನ ಅಕ್ರಮಗಳ ಬಗ್ಗೆ ತನಿಖೆ ನಡೆಸುತ್ತಿದೆ. ಇಡಿ ಹಗರಣದಲ್ಲಿ ಹಣದ ಜಾಡು ಹಿಡಿಯುತ್ತಿದೆ.
BREAKING NEWS : ಸುರತ್ಕಲ್ ನ ಕಬರಸ್ತಾನದಲ್ಲಿ `ಫಾಜಿಲ್’ ಅಂತ್ಯಸಂಸ್ಕಾರ