ನವದೆಹಲಿ: ಐಪಿಎಸ್ ಅಧಿಕಾರಿ ಸದಾನಂದ ವಸಂತ್ ಅವರು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಯ ಹೊಸ ಮಹಾನಿರ್ದೇಶಕರಾಗಿ ಭಾನುವಾರ ಅಧಿಕಾರ ವಹಿಸಿಕೊಂಡರು.
2008 ರ ಮುಂಬೈ ದಾಳಿಯ ಸಮಯದಲ್ಲಿ ಭಯೋತ್ಪಾದಕರ ವಿರುದ್ಧ ಹೋರಾಡುವಲ್ಲಿ ವಹಿಸಿದ ಪಾತ್ರಕ್ಕಾಗಿ ಸದಾನಂದ್ ಅವರಿಗೆ ಶೌರ್ಯಕ್ಕಾಗಿ ರಾಷ್ಟ್ರಪತಿಗಳ ಪೊಲೀಸ್ ಪದಕವನ್ನು ನೀಡಲಾಗಿದೆ. ಅವರು 2007 ರಲ್ಲಿ ಶ್ಲಾಘನೀಯ ಸೇವೆಗಾಗಿ ಮತ್ತು 2014 ರಲ್ಲಿ ವಿಶಿಷ್ಟ ಸೇವೆಗಾಗಿ ರಾಷ್ಟ್ರಪತಿಗಳ ಪೊಲೀಸ್ ಪದಕವನ್ನು ಪಡೆದಿದ್ದಾರೆ.
ಮಹಾರಾಷ್ಟ್ರ ಕೇಡರ್ನ 1990ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ ಸದಾನಂದ ಅವರು ದಿನಕರ್ ಗುಪ್ತಾ ನಿವೃತ್ತಿ ಹಿನ್ನೆಲೆಯಲ್ಲಿ ನೇಮಕ ಮಾಡಲಾಗಿದೆ. ಸದಾನಂದ್ ಅವರು ಈ ಹಿಂದೆ ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ಅವರು ಮೀರಾ-ಭಯಂದರ್ ವಸಾಯಿ ವಿರಾರ್ನ ಪೊಲೀಸ್ ಆಯುಕ್ತರಾಗಿ, ಕಾನೂನು ಮತ್ತು ಸುವ್ಯವಸ್ಥೆಯ ಜಂಟಿ ಆಯುಕ್ತರಾಗಿ ಮತ್ತು ಮುಂಬೈನ ಅಪರಾಧ ವಿಭಾಗದ ಜಂಟಿ ಆಯುಕ್ತರಾಗಿದ್ದರು.
ಇದಲ್ಲದೆ, ಅವರು ಭಾರತ ಸರ್ಕಾರದಲ್ಲಿ ಎರಡು ಅವಧಿಗಳಲ್ಲಿ ಸೇವೆ ಸಲ್ಲಿಸಿದ್ದಾರೆ – ಕೇಂದ್ರ ತನಿಖಾ ದಳದಲ್ಲಿ (ಸಿಬಿಐ) ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್ ಆಗಿ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ನಲ್ಲಿ ಇನ್ಸ್ಪೆಕ್ಟರ್ ಜನರಲ್ ಆಗಿ.