ಬೆಂಗಳೂರು: ರಾಜ್ಯಾದ್ಯಂತ ಪ್ರವಾಸಿ ತಾಣಗಳಲ್ಲಿನ ರೆಸಾರ್ಟ್, ಹೋಂಸ್ಟೇಗಳಲ್ಲಿ ಪ್ರವಾಸಿಗರಿಗೆ ಭದ್ರತೆ ಮತ್ತು ಸುರಕ್ಷತೆ ಒದಗಿಸುವ ನಿಟ್ಟಿನಲ್ಲಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
ಈ ಸಂಬಂಧ ಒಳಾಡಳಿತ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ 06.03.2025 ರಂದು ಗಂಗಾವತಿ ತಾಲ್ಲೂಕಿನ ಆನೆಗುಂದಿ ಗ್ರಾಮದಲ್ಲಿ ಹಾರ್ಟ್ ಲ್ಯಾಂಡ್ ಹೋಂ ಸ್ಟೇನಲ್ಲಿ ವಾಸವಿದ್ದ ಎರಡು ವಿದೇಶಿಯರು, ಎರಡು ಭಾರತೀಯರನ್ನು ಹೋಮ್ ಮಾಲೀಕರು ರಾತ್ರಿ ಭೋಜನದ ನಂತರ ನಿರ್ಜನ ಪ್ರದೇಶದಲ್ಲಿ ನಕ್ಷತ್ರ ವೀಕ್ಷಣೆಗೆಂದು ಕರೆದುಕೊಂಡು ಹೋದ ಸಂದರ್ಭದಲ್ಲಿ ಮೂರು ದುಷ್ಕರ್ಮಿಗಳು ಪುರುಷ ಪವಾಸಿಗರೊಂದಿಗೆ ವಾಗ್ವಾದ ಮಾಡಿ ಅವರುಗಳನ್ನು ಸಮೀಪದಲ್ಲಿಯೇ ತುಂಗಾಭದ್ರ ಎಡದಂಡೆ ಕಾಲುವೆಗೆ ನೂಕಿರುತ್ತಾರೆಂದು ವರದಿ ಮಾಡಿರುತ್ತಾರೆ. ಮುಂದುವರೆದು, ಹೋಮ್‌ಸ್ಯೆ ಮಾಲೀಕಳು ಹಾಗೂ ಮತ್ತೊಬ್ಬ ಇಸ್ರೇಲ್ ಪ್ರಜೆಯ ಮೇಲೆ ಹಲ್ಲೆ ಮಾಡಿ ಅತ್ಯಾಚಾರ ಎಸಗಿರುವುದಾಗಿ ತಿಳಿಸಿರುತ್ತಾರೆ. ಕಾಲುವೆಯ ನೀರಿನಲ್ಲಿ ಕೊಚ್ಚಿ ಹೋಗಿದ್ದವರ ಪೈಕಿ ಒರಿಸ್ಸಾ ಮೂಲದ ವ್ಯಕ್ತಿ ಮೃತರಾಗಿರುವ ಘಟನೆ ಉಲ್ಲೇಖದ ಪತ್ರದಲ್ಲಿ ವರದಿಯಾಗಿರುತ್ತದೆ.
ಮೇಲಿನ ಘಟನೆಯು ಅತ್ಯಂತ ದು:ಖಕರ ಹಾಗೂ ವಿಷಾದನೀಯವಾದುದಾಗಿದೆ. ಈ ಹಿನ್ನೆಲೆಯಲ್ಲಿ ಭವಿಷ್ಯತ್‌ನಲ್ಲಿ ಈ ರೀತಿಯ ದುರ್ಘಟನೆಗಳು ಜರುಗದ ರೀತಿಯಲ್ಲಿ ಕೆಳಕಂಡ ಸೂಚನೆಗಳನ್ನು ಹಾಗೂ ನಿರ್ದೇಶನಗಳನ್ನು ನೀಡಲಾಗಿದೆ:-
೩) ರಾಜ್ಯದ ಪ್ರವಾಸಿ ತಾಣಗಳಲ್ಲಿನ ಹೋಮ್‌ಸ್ಟೇಗಳು ವಿದೇಶಿ ಪ್ರವಾಸಿಗರನ್ನು ಒಳಗೊಂಡಂತೆ ಎಲ್ಲಾ ಪವಾಸಿಗರ ಭದ್ರತೆ ಹಾಗೂ ಸುರಕ್ಷತೆಗಾಗಿ ಸೂಕ್ತ ಕ್ರಮಗಳನ್ನು ಕಡ್ಡಾಯವಾಗಿ ತೆಗೆದುಕೊಳ್ಳತಕ್ಕದ್ದು,
b) ಹೊರವಲಯಗಳಲ್ಲಿ ಅಥವಾ ನಿರ್ಜನ ಪ್ರದೇಶಗಳಿಗೆ ಪ್ರವಾಸಿಗರನ್ನು ಕರೆದೊಯ್ಯುವ ಮುಂಚಿತವಾಗಿ ಸಂಬಂಧಿಸಿದ ಅಧಿಕಾರ ವ್ಯಾಪ್ತಿಯುಳ್ಳ ಪೊಲೀಸ್ ಠಾಣೆಯಲ್ಲಿ ಮಾಹಿತಿಯನ್ನು ನೀಡಿ, ಅನುಮತಿ ಪಡೆಯತಕ್ಕದ್ದು.
c) ಪೊಲೀಸರಿಂದ/ಅರಣ್ಯ ಇಲಾಖೆ ಸಿಬ್ಬಂದಿಯಿಂದ ಪೂರ್ವಾನುಮತಿಯನ್ನು ಪಡೆಯದೇ ನಿರ್ಜನ ಪ್ರದೇಶ/ಹೊರವಲಯ ಅಥವಾ ಅರಣ್ಯ ಪ್ರದೇಶಗಳಲ್ಲಿ ಪ್ರವಾಸಿಗರನ್ನು ಕರೆದೊಯ್ಯಲ್ಲಿ ದುಷ್ಕರ್ಮಿಗಳಿಂದ ಅಥವಾ ಕಾಡು ಪ್ರಾಣಿಗಳಿಂದ ಸಂಭವಿಸುವ ದುರ್ಘಟನೆಗಳಿಗೆ ಆಯಾ ಹೋಮ್‌ಸ್ಟೇ ಮಾಲೀಕರು ಜವಾಬ್ದಾರರಾಗುತ್ತಾರೆ ಹಾಗೂ ಕಾನೂನಿನ್ವಯ ಶಿಕ್ಷಾರ್ಹ ಅಪರಾಧಕ್ಕೆ ಒಳಪಡುತ್ತಾರೆ.
ಈ ಸಂಬಂಧ ಅಗತ್ಯ ಸೂಚನೆಗಳನ್ನು ನಿಮ್ಮ ಜಿಲ್ಲೆಯ ಪುತಿ ರೆಸಾರ್ಟ್ ಹಾಗೂ ಹೋಮ್ ಸೈಗಳಿಗೆ ಖುದ್ದಾಗಿ ಜಾರಿಗೊಳಿಸಿ ಅವರಿಂದ ಸೂಕ್ತ ಮುಚ್ಚಳಿಕೆ ಪಡೆದುಕೊಳ್ಳುವುದು. ಪ್ರತಿ ರೆಸಾರ್ಟ್/ಹೋಮ್‌ಸ್ಯೆಗಳಿಂದ ಅವರ ಸ್ಥಳ ವೀಕ್ಷಣಾ ಕಾರ್ಯಕ್ರಮಗಳ ಪಟ್ಟಿಯನ್ನು ಪಡೆದು ಆ ಕಾರ್ಯಕ್ರಮಗಳಲ್ಲಿ ಯಾವುದೇ ಅಪಾಯವಿಲ್ಲದಿರುವುದನ್ನು ಖಾತರಿಪಡಿಸಿಕೊಳ್ಳಲು ತಿಳಿಸಿದ್ದಾರೆ.
ಈ ಪ್ರಕ್ರಿಯೆಯನ್ನು ಒಂದು ವಾರದಲ್ಲಿ ಕೈಗೊಂಡು ದಿನಾಂಕ:18.03.2025 ರೊಳಗೆ ತಪ್ಪದೇ ವರದಿಯನ್ನು ಸಲ್ಲಿಸಲು ಸೂಚಿಸಿದೆ.
ರಾಜ್ಯಾದ್ಯಂತ ಪ್ರವಾಸಿ ತಾಣಗಳಲ್ಲಿನ ರೆಸಾರ್ಟ್, ಹೋಂಸ್ಟೇಗಳಲ್ಲಿ ಪ್ರವಾಸಿಗರಿಗೆ ಭದ್ರತೆ ಮತ್ತು ಸುರಕ್ಷತೆ ಒದಗಿಸುವ ನಿಟ್ಟಿನಲ್ಲಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. pic.twitter.com/ttk4vlPGYO
— DIPR Karnataka (@KarnatakaVarthe) March 12, 2025
BREAKING : ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ : ಯೂಟ್ಯೂಬರ್ ಸಮೀರ್ ವಿರುದ್ಧದ ‘FIR’ ಗೆ ಹೈಕೋರ್ಟ್ ತಡೆ