ಬೆಂಗಳೂರು : 2019 ರ ಬಳಿಕ ಇದೀಗ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಅದ್ದೂರಿಯಾಗಿ ನಡೆಯುತ್ತಿದೆ. ಈ ಬಾರಿ ಹೊಸ ವರ್ಷಾಚರಣೆ ಹಿನ್ನೆಲೆ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ನಗರ ಕಮೀಷನರ್ ಪ್ರತಾಪ್ ರೆಡ್ಡಿ ಹೇಳಿದರು.
ಪಬ್ ಕ್ಲಬ್ ಮಾಲೀಕರ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿರುವ ಪ್ರತಾಪ್ ರೆಡ್ಡಿ ಮುಂಜಾಗೃತಾ ಕ್ರಮ ಕೈಗೊಳ್ಳಲು ಹೋಟೆಲ್ ಗಳಿಗೆ ಕೆಲವು ಸೂಚನೆ ನೀಡಲಾಗಿದೆ. ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡಲಾಗಿದೆ ಎಂದರು.
ಕ್ರಿಮಿನಲ್ ಹಿನ್ನೆಲೆಯುಳ್ಳವರು ಬಂದಾಗ ಮಾಹಿತಿ ನೀಡಬೇಕು.ವಾಹನ ಸಂಚಾರ ನಿರ್ವಹಣೆ ಬಗ್ಗೆ ಯಾವೆಲ್ಲಾ ಕ್ರಮ ಕೈಗೊಳ್ಳಬೇಕು.ನಗರದಲ್ಲಿ ಜನದಟ್ಟಣೆಯಾಗದಂತೆ ಯಾವೆಲ್ಲಾ ಮುನ್ನೆಚ್ಚರಿಕೆ ಕೈಗೊಳ್ಳಬೇಕು, ವಿದ್ಯುತ್ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಹೋಟೆಲ್, ಪಬ್, ಕ್ಲಬ್ ಮಾಲೀಕರಿಗೆ ಸೂಚನೆ ನೀಡಲಾಗಿದೆ ಎಂದರು.
ಹೊಸ ವರ್ಷಾಚರಣೆಗೆ ಬಿಗಿ ಪೊಲೀಸ್ ಭದ್ರತೆ : ಗೃಹ ಸಚಿವ ಆರಗ ಜ್ಞಾನೇಂದ್ರ
ಈ ಬಾರಿ ಹೊಸ ವರ್ಷಾಚರಣೆ ಹಿನ್ನೆಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ,ಬಿಗಿ ಪೊಲೀಸ್ ಭದ್ರತೆ ಇರಲಿದೆ ನಾಲ್ಕು ಸಾವಿರ ಕ್ಯಾಮರಾ ಅಳವಡಿಸಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು ಹಿರಿಯ ಪೊಲೀಸರ ಜೊತೆ ಗೃಹ ಸಚಿವರು ಸಭೆ ನಡೆಸಿದರು. ಸಭೆ ಬಳಿಕ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಕೊರೊನಾದಿಂದ ಕಳೆದ ಎರಡು ವರ್ಷಗಳಿಂದ ಹೊಸ ವರ್ಷಾಚರಣೆ ಮಾಡಲು ಸಾಧ್ಯವಾಗಲಿಲ್ಲ. ಈ ವರ್ಷ ಜೋರಾಗಿ ಮಾಡುವ ಸಾದ್ಯತೆ ಇದೆ. ಪೊಲೀಸ್ ಬಿಗಿ ಭದ್ರತೆ ಇರಲಿದೆ. . ಮಾದಕ ವಸ್ತುಗಳನ್ನು ಸೇವನೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅನುಮತಿ ಪಡೆಯದೆ ಕ್ಲಬ್, ಪಬ್ ಮತ್ತು ಕ್ಯಾಬರೆಗಳನ್ನು ತೆಗೆದರೇ ಮುಚ್ಚಲೇಬೇಕು ಎಂದು ಎಚ್ಚರಿಕೆ ನೀಡಿದರು.
ನಗರದಲ್ಲಿ ಪೊಲೀಸರು ಉತ್ತಮ ಕೆಲಸ ಮಾಡಿದ್ದಾರೆ. ಒಂದು ವರ್ಷದಲ್ಲಿ ಇದುವರೆಗೆ 78 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. ಜೊತೆಗೆ 68 ವಿದೇಶಿಗರನ್ನು ಗಡಿಪಾರು ಮಾಡಲಾಗಿದೆ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಚರ್ಚಿಸಿದ್ದೇವೆ. ಹೊಸದಾಗಿ 4 ಸಂಚಾರಿ ಉಪ ವಿಭಾಗಗಳ ರಚನೆ ಮಾಡಲಾಗಿದೆ. ಎರಡು ಕಾನೂನು ಸುವ್ಯವಸ್ಥೆ ಉಪ ವಿಭಾಗಗಳನ್ನು ಮಾಡಿದ್ದೇವೆ ಎಂದು ಹೇಳಿದರು.ಶೀಘ್ರವೇ ವಿಧಿವಿಜ್ಞಾನ ಪ್ರಯೋಗಾಲಯ ಡಿಜಿಟಲ್ ಆಗಲಿದೆ . ಶೀಘ್ರವೇ ವಿಧಿವಿಜ್ಞಾನ ಪ್ರಯೋಗಾಲಯ ಡಿಜಿಟಲ್ ಆಗಲಿದೆ, ಹೊಸದಾಗಿ 4 ಉಪಸಂಚಾರಿ ವಿಭಾಗ ಸ್ಥಾಪನೆ ಮಾಡಲಾಗಿದೆ . ವಿಧಿವಿಜ್ಞಾನ ಪ್ರಯೋಗಾಲಯವನ್ನು ಡಿಜಿಟಲ್ ಮಾಡಲಿದ್ದೇವೆ. 50 ಜಂಕ್ಷನ್ಗಳಲ್ಲಿ ಐಟಿಎಂಎಸ್ ಹಾಕಲಾಗಿದೆ ಎಂದು ಸಚಿವರು ಹೇಳಿದರು.
ಬಿಜೆಪಿಗೆ ಗೊತ್ತಿರುವುದು ಕನ್ನ ಹಾಕೋದು ಮಾತ್ರ ಅನ್ನ ಹಾಕುವುದಲ್ಲ : ಟ್ವೀಟ್ ನಲ್ಲಿ ಕಾಂಗ್ರೆಸ್ ಕಿಡಿ
ಮದ್ದೂರು ಬ್ರ್ಯಾಂಚ್ ಕಾಲುವೆಯ ಆಧುನೀಕರಣಕ್ಕೆ ಕ್ರಮ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ