Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ: ಉಪನ್ಯಾಸಕರ ಹುದ್ದೆಗೆ ಬಡ್ತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ!

TVK Vijay Sworn: ನಾಳೆ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ; ಮೇ.13ಕ್ಕೆ ವಿಶ್ವಾಸಮತಯಾಚನೆ

ಉತ್ತಮ ಲೈಂಗಿಕ ಜೀವನಕ್ಕಾಗಿ ಈ 5 ವ್ಯಾಯಾಮಗಳನ್ನು ಇಂದೇ ರೂಢಿಸಿಕೊಳ್ಳಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಸಾಗರ ಶಾಸಕ ಬೇಳೂರು: ದೆಹಲಿ ಭೇಟಿ ಸಕ್ಸಸ್; ಹೈಕಮಾಂಡ್‌ನಿಂದ ಪಾಸಿಟಿವ್ ಸಿಗ್ನಲ್!
KARNATAKA

ಸಚಿವ ಸ್ಥಾನದ ನಿರೀಕ್ಷೆಯಲ್ಲಿ ಸಾಗರ ಶಾಸಕ ಬೇಳೂರು: ದೆಹಲಿ ಭೇಟಿ ಸಕ್ಸಸ್; ಹೈಕಮಾಂಡ್‌ನಿಂದ ಪಾಸಿಟಿವ್ ಸಿಗ್ನಲ್!

By kannadanewsnow09

ಶಿವಮೊಗ್ಗ: “ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಹಾಗೂ ಸಚಿವ ಸ್ಥಾನದ ಕುರಿತು ದೆಹಲಿಯಲ್ಲಿ ಪಕ್ಷದ ವರಿಷ್ಠರೊಂದಿಗೆ ನಡೆಸಿದ ಮಾತುಕತೆ ಅತ್ಯಂತ ಸಕಾರಾತ್ಮಕವಾಗಿದೆ. ನಮಗೆ ಸಚಿವ ಸ್ಥಾನ ದೊರೆಯುವ ಪೂರ್ಣ ವಿಶ್ವಾಸವಿದೆ,” ಎಂದು ಸಾಗರ ಕ್ಷೇತ್ರದ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.

ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಯಡೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಾ ತಮ್ಮ ದೆಹಲಿ ಪ್ರವಾಸದ ವಿವರಗಳನ್ನು ಹಂಚಿಕೊಂಡರು.

ಹಿರಿಯ ಶಾಸಕರ ಒಕ್ಕೂಟದಿಂದ ಹಕ್ಕು ಮಂಡನೆ

ಸುಮಾರು 30 ಮಂದಿ ಹಿರಿಯ ಶಾಸಕರು ಒಟ್ಟಾಗಿ ದೆಹಲಿಗೆ ತೆರಳಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಿರುವುದನ್ನು ಸಮರ್ಥಿಸಿಕೊಂಡ ಬೇಳೂರು, “ನಾವು ನಮ್ಮ ಹಕ್ಕುಗಳನ್ನು ಕೇಳಲು ದೆಹಲಿಗೆ ಹೋಗಿದ್ದೆವು. ವರಿಷ್ಠರ ಭೇಟಿಯ ವೇಳೆ ನಮಗೆ ಸಕಾರಾತ್ಮಕ ಸ್ಪಂದನೆ ದೊರೆತಿದೆ. ಸಚಿವ ಸ್ಥಾನ ದೊರಕುವ ಬಗ್ಗೆ ‘ಗ್ರೀನ್ ಸಿಗ್ನಲ್’ ಸಿಕ್ಕಂತಾಗಿದೆ,” ಎಂದರು.

ಸಂಪುಟ ಪುನರ್‌ರಚನೆ ವಿಳಂಬದ ಬಗ್ಗೆ ಅಸಮಾಧಾನ

ಸಾಮಾನ್ಯವಾಗಿ ಸರ್ಕಾರ ಅಸ್ತಿತ್ವಕ್ಕೆ ಬಂದ ಎರಡು ಅಥವಾ ಎರಡೂವರೆ ವರ್ಷಗಳ ಬಳಿಕ ಸಚಿವ ಸಂಪುಟ ಪುನರ್‌ರಚನೆ ಆಗಬೇಕೆಂಬ ನಿಯಮ ಅಥವಾ ಮಾತುಕತೆ ಇರುತ್ತದೆ. ಆದರೆ, ಮೂರು ವರ್ಷಗಳಾದರೂ ಪುನರ್‌ರಚನೆ ನಡೆಯದ ಕಾರಣ ಅನೇಕ ಹಿರಿಯ ನಾಯಕರು ಅವಕಾಶದಿಂದ ವಂಚಿತರಾಗುತ್ತಿದ್ದಾರೆ ಎಂಬ ಆತಂಕವನ್ನು ಅವರು ವ್ಯಕ್ತಪಡಿಸಿದರು. ಇದೇ ಕಾರಣಕ್ಕೆ ಹಿರಿಯ ಶಾಸಕರೆಲ್ಲರೂ ಒಗ್ಗೂಡಿ ವರಿಷ್ಠರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ ಎಂದು ಅವರು ವಿವರಿಸಿದರು.

ಚುನಾವಣೆ ಬಳಿಕ ನಿರ್ಧಾರದ ನಿರೀಕ್ಷೆ

ಪ್ರಸ್ತುತ ನೆರೆಯ ರಾಜ್ಯಗಳಾದ ಕೇರಳ ಮತ್ತು ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿರುವುದರಿಂದ ಪಕ್ಷದ ವರಿಷ್ಠರು ಅಲ್ಲಿನ ಕಾರ್ಯಗಳಲ್ಲಿ ಬ್ಯುಸಿಯಾಗಿದ್ದಾರೆ. ಹೀಗಾಗಿ, ಈ ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಂದ ತಕ್ಷಣ ಕರ್ನಾಟಕದ ಸಚಿವ ಸಂಪುಟ ಪುನರ್‌ರಚನೆಯ ಬಗ್ಗೆ ಸ್ಪಷ್ಟ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ ಎಂದು ಅವರು ಆಶಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಾಗರ ನಗರಸಭಾ ಸದಸ್ಯ ಗಣಪತಿ ಮಂಡಗಳಲೆ, ಸಾಗರ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಸೋಮಶೇಖರ್ ಲಾವಿಗೆರೆ, ಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ ಸೇರಿದಂತೆ ಹಲವು ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು…

Share. Facebook Twitter LinkedIn WhatsApp Email

Related Posts

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ: ಉಪನ್ಯಾಸಕರ ಹುದ್ದೆಗೆ ಬಡ್ತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ!

1 Min Read

ತಮಿಳುನಾಡಿನಲ್ಲಿ ವಿಜಯ್‌ ನೇತೃತ್ವದ ಸರ್ಕಾರ ರಚನೆ: ರಾಜ್ಯಪಾಲರ ಕ್ರಮಕ್ಕೆ ಕೆಪಿಸಿಸಿ ಸ್ವಾಗತ

1 Min Read

ಸಾಲುಮರದ ತಿಮ್ಮಕ್ಕ ಸ್ಮಾರಕಕ್ಕೆ ಡಿಪಿಆರ್ ಸಿದ್ಧ: 25 ಕೋಟಿ ವೆಚ್ಚದಲ್ಲಿ ಸ್ಮಾರಕ ನಿರ್ಮಾಣ- ಸಚಿವ ಈಶ್ವರ್ ಖಂಡ್ರೆ

1 Min Read
Recent News

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ: ಉಪನ್ಯಾಸಕರ ಹುದ್ದೆಗೆ ಬಡ್ತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ!

TVK Vijay Sworn: ನಾಳೆ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ; ಮೇ.13ಕ್ಕೆ ವಿಶ್ವಾಸಮತಯಾಚನೆ

ಉತ್ತಮ ಲೈಂಗಿಕ ಜೀವನಕ್ಕಾಗಿ ಈ 5 ವ್ಯಾಯಾಮಗಳನ್ನು ಇಂದೇ ರೂಢಿಸಿಕೊಳ್ಳಿ!

ಲೈಂಗಿಕ ಆಸಕ್ತಿ ಹೆಚ್ಚಿಸಿಕೊಳ್ಳಲು ಇಲ್ಲಿವೆ 5 ನೈಸರ್ಗಿಕ ಮಾರ್ಗಗಳು!

State News
KARNATAKA

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ: ಉಪನ್ಯಾಸಕರ ಹುದ್ದೆಗೆ ಬಡ್ತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ!

By kannadanewsnow09 KARNATAKA 1 Min Read

ಬೆಂಗಳೂರು: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆಯು ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕ ವೃಂದದಿಂದ ಸರ್ಕಾರಿ ಪದವಿ-ಪೂರ್ವ ಕಾಲೇಜುಗಳ ಉಪನ್ಯಾಸಕರ ವೃಂದದ…

ತಮಿಳುನಾಡಿನಲ್ಲಿ ವಿಜಯ್‌ ನೇತೃತ್ವದ ಸರ್ಕಾರ ರಚನೆ: ರಾಜ್ಯಪಾಲರ ಕ್ರಮಕ್ಕೆ ಕೆಪಿಸಿಸಿ ಸ್ವಾಗತ

ಸಾಲುಮರದ ತಿಮ್ಮಕ್ಕ ಸ್ಮಾರಕಕ್ಕೆ ಡಿಪಿಆರ್ ಸಿದ್ಧ: 25 ಕೋಟಿ ವೆಚ್ಚದಲ್ಲಿ ಸ್ಮಾರಕ ನಿರ್ಮಾಣ- ಸಚಿವ ಈಶ್ವರ್ ಖಂಡ್ರೆ

BREAKING : ಚಿಕ್ಕಬಳ್ಳಾಪುರದಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ | Video Viral

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.