ಶಿವಮೊಗ್ಗ: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು ವಯೋಸಜಹತೆಯಿಂದ ಇಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಸಂತಾಪವನ್ನು ಸೂಚಿಸಿದ್ದಾರೆ.
ತಮ್ಮ ಫೇಸ್ ಬುಕ್ ಮುಖಪುಟದಲ್ಲಿ ಸಂತಾಪ ಸೂಚಿಸಿ ಪೋಸ್ಟ್ ಮಾಡಿರುವಂತ ಅವರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ದಾವಣಗೆರೆ ಜಿಲ್ಲೆಯ ಮುತ್ಸದ್ದಿ ರಾಜಕಾರಣಿ, ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರು, ಮಾಜಿ ಮಂತ್ರಿ ಶಾಮನೂರು ಶಿವಶಂಕರಪ್ಪ ಅವರ ನಿಧನದ ಸುದ್ದಿ ತಿಳಿದು ಅತ್ಯಂತ ಬೇಸರವಾಯಿತು ಎಂದಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಶಾಮನೂರು ಶಿವಶಂಕರಪ್ಪ ಅವರು ಅಪಾರ ಸೇವೆ ಸಲ್ಲಿಸಿದ್ದಾರೆ. 6 ಬಾರಿ ಶಾಸಕರಾಗಿ, ಮಂತ್ರಿಯಾಗಿಯೂ ಸೇವೆಯನ್ನು ಶಾಮನೂರು ಶಿವಶಂಕರಪ್ಪ ಸಲ್ಲಿಸಿದ್ದಾರೆ. ಅವರ ನಿಧನಕ್ಕೆ ಹೃದಯಾಂತರಾಳದಿಂದ ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ. ಅವರ ಬಂದು ಬಳಗ ಹಾಗೂ ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂಬುದಾಗಿ ದೇವರಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಸಚಿವ ಈಶ್ವರ ಖಂಡ್ರೆ ಸಂತಾಪ
‘ಡಿಜಿಟಲ್ ಅರೆಸ್ಟ್’ ವಂಚನೆ: 1 ಕೋಟಿ ರೂ. ಕಳೆದುಕೊಂಡ 82 ವರ್ಷದ ವ್ಯಕ್ತಿ | Digital arrest scam








