Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ​ಮಹಾರಾಷ್ಟ್ರದಲ್ಲಿ ಭೀಕರ ದುರಂತ: ಪಂಢರಪುರ ವಿಠ್ಠಲನ ದರ್ಶನಕ್ಕೆ ತೆರಳುತ್ತಿದ್ದ ಭಕ್ತರ ವಾಹನ ಬಾವಿಗೆ ಬಿದ್ದು 14 ಮಂದಿ ಜಲಸಮಾಧಿ!

ಸಾಗರ ನಗರಸಭೆ ‘ಮೇಸ್ತ್ರಿ ನಾಗರಾಜ್’ ಮಹಿಳೆಗೆ ಲೈಂಗಿಕ ಕಿರುಕುಳ; ನಾಳೆ ಅಮಾನತಿಗೆ ಆಗ್ರಹಿಸಿ ‘DSS ಪ್ರತಿಭಟನೆ’

​ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ: ‘ಅಮೆರಿಕದ ಆದೇಶ ಪಾಲಿಸುವ ವಿಧೇಯ ಸೇವಕ’ ಎಂದು ತೀವ್ರ ಲೇವಡಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾಗರ ನಗರಸಭೆ ‘ಮೇಸ್ತ್ರಿ ನಾಗರಾಜ್’ ಮಹಿಳೆಗೆ ಲೈಂಗಿಕ ಕಿರುಕುಳ; ನಾಳೆ ಅಮಾನತಿಗೆ ಆಗ್ರಹಿಸಿ ‘DSS ಪ್ರತಿಭಟನೆ’
KARNATAKA

ಸಾಗರ ನಗರಸಭೆ ‘ಮೇಸ್ತ್ರಿ ನಾಗರಾಜ್’ ಮಹಿಳೆಗೆ ಲೈಂಗಿಕ ಕಿರುಕುಳ; ನಾಳೆ ಅಮಾನತಿಗೆ ಆಗ್ರಹಿಸಿ ‘DSS ಪ್ರತಿಭಟನೆ’

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ: ಜಿಲ್ಲೆಯ ಸಾಗರ ನಗರಸಭೆಯ ಪೌರಕಾರ್ಮಿಕ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ನಗರಸಭೆಯ ಪೌರಕಾರ್ಮಿಕ ಮೇಸ್ತ್ರಿ ಹಾಗೂ ಪ್ರಭಾರಿ ಪೌರಕಾರ್ಮಿಕ ಆರೋಗ್ಯ ಅಧಿಕಾರಿಯಾಗಿರುವ ನಾಗರಾಜ್ ಎಂಬುವವರ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ. ಹೀಗಾಗಿ ಆರೋಪಿಯನ್ನು ತಕ್ಷಣವೇ ಬಂಧಿಸುವಂತೆ ಮತ್ತು ಸೇವೆಯಿಂದ ಅಮಾನತುಗೊಳಿಸುವಂತೆ ಆಗ್ರಹಿಸಿ ನಾಳೆ ನಗರದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂಬುದಾಗಿ ಸಾಗರ ತಾಲ್ಲೂಕು ಡಿಎಸ್ಎಸ್ ಸಂಚಾಲಕ ಲಕ್ಷ್ಮಣ್ ಸಾಗರ್ ತಿಳಿಸಿದ್ದಾರೆ.

ನಾಳೆ ನಗರಸಭೆ ಎದುರು ಪ್ರತಿಭಟನೆ:

ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಸಾಗರ ನಗರಸಭೆ ಮೆಸ್ತ್ರಿ ನಾಗರಾಜ್ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಸದ್ಯಕ್ಕೆ ಯಾವುದೇ ಕಠಿಣ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ, ಸಾಗರ ಡಿಎಸ್ಎಸ್ (DSS) ಸಂಘಟನೆಗಳ ಒಕ್ಕೂಟಗಳ ವತಿಯಿಂದ ನಾಳೆ ಬೆಳಗ್ಗೆ 10:30 ಕ್ಕೆ ಸಾಗರ ನಗರಸಭೆಯ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆ ಎದುರು ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ಸಂಘಟನೆಗಳ ಆಗ್ರಹ:

ಪೌರಕಾರ್ಮಿಕ ಮಹಿಳೆಯ ಮೇಲೆ ನಡೆದಿರುವ ಈ ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳವನ್ನು ತೀವ್ರವಾಗಿ ಖಂಡಿಸಿರುವ ದಲಿತ ಸಂಘಟನೆಗಳು, ಆರೋಪಿತ ಅಧಿಕಾರಿಯನ್ನು ಕೂಡಲೇ ಬಂಧಿಸಬೇಕು ಹಾಗೂ ಆತನನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸೇವೆಯಿಂದ ಅಮಾನತು (Suspend) ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಈ ಪ್ರತಿಭಟನೆಗೆ ಸಾಗರ ತಾಲ್ಲೂಕಿನ ಎಲ್ಲಾ ಡಿಎಸ್ಎಸ್ ಪದಾಧಿಕಾರಿಗಳು, ಪ್ರಗತಿಪರ ಚಿಂತಕರು, ಮಹಿಳಾ ಒಕ್ಕೂಟಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ನೊಂದ ಮಹಿಳೆಗೆ ನ್ಯಾಯ ಕೊಡಿಸಲು ಮತ್ತು ಮಹಿಳೆಯ ಮೇಲಾದ ದೌರ್ಜನ್ಯವನ್ನು ಖಂಡಿಸಲು ಕೈಜೋಡಿಸಬೇಕು ಎಂಬುದಾಗಿ ಸಾಗರ ತಾಲ್ಲೂಕು ಡಿಎಸ್ಎಸ್ ಸಂಚಾಲಕ ಲಕ್ಷ್ಮಣ್ ಸಾಗರ್ ಅವರು ಮನವಿ ಮಾಡಿದ್ದಾರೆ.

ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು…

BREAKING: ಮಧ್ಯಪ್ರದೇಶ ಭೀಕರ ದುರಂತ: ರೈಲಿನಿಂದ ಕೆಳಗಿಳಿದ ಪ್ರಯಾಣಿಕರ ಮೇಲೆ ಹರಿದ ಎಕ್ಸ್‌ಪ್ರೆಸ್, ಹಲವರು ಸಾವು!

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಪ್ರಿಯಕರನಿಂದಲೇ ಯುವತಿ ಕೊಲೆ ಕೇಸ್‌ಗೆ ಬಿಗ್ ಟ್ವಿಸ್ಟ್! ಮದುವೆ ವಿಷಯ ಮುಚ್ಚಿಟ್ಟು ಪ್ರೀತಿ, ಕೊನೆಗೆ ಕಗ್ಗೊಲೆ!

2 Mins Read

SHOCKING: ರಾಜ್ಯದಲ್ಲೊಂದು ಧಾರುಣ ಘಟನೆ: ಬಳ್ಳಾರಿಯಲ್ಲಿ ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

BREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿ ಯಾವುದೇ ‘ಗ್ಯಾರಂಟಿ ಯೋಜನೆ’ ನಿಲ್ಲುವುದಿಲ್ಲ: ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

1 Min Read
Recent News

BREAKING: ​ಮಹಾರಾಷ್ಟ್ರದಲ್ಲಿ ಭೀಕರ ದುರಂತ: ಪಂಢರಪುರ ವಿಠ್ಠಲನ ದರ್ಶನಕ್ಕೆ ತೆರಳುತ್ತಿದ್ದ ಭಕ್ತರ ವಾಹನ ಬಾವಿಗೆ ಬಿದ್ದು 14 ಮಂದಿ ಜಲಸಮಾಧಿ!

ಸಾಗರ ನಗರಸಭೆ ‘ಮೇಸ್ತ್ರಿ ನಾಗರಾಜ್’ ಮಹಿಳೆಗೆ ಲೈಂಗಿಕ ಕಿರುಕುಳ; ನಾಳೆ ಅಮಾನತಿಗೆ ಆಗ್ರಹಿಸಿ ‘DSS ಪ್ರತಿಭಟನೆ’

​ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ: ‘ಅಮೆರಿಕದ ಆದೇಶ ಪಾಲಿಸುವ ವಿಧೇಯ ಸೇವಕ’ ಎಂದು ತೀವ್ರ ಲೇವಡಿ

BREAKING: ಮಧ್ಯಪ್ರದೇಶ ಭೀಕರ ದುರಂತ: ರೈಲಿನಿಂದ ಕೆಳಗಿಳಿದ ಪ್ರಯಾಣಿಕರ ಮೇಲೆ ಹರಿದ ಎಕ್ಸ್‌ಪ್ರೆಸ್, ಹಲವರು ಸಾವು!

State News
KARNATAKA

ಸಾಗರ ನಗರಸಭೆ ‘ಮೇಸ್ತ್ರಿ ನಾಗರಾಜ್’ ಮಹಿಳೆಗೆ ಲೈಂಗಿಕ ಕಿರುಕುಳ; ನಾಳೆ ಅಮಾನತಿಗೆ ಆಗ್ರಹಿಸಿ ‘DSS ಪ್ರತಿಭಟನೆ’

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರ ನಗರಸಭೆಯ ಪೌರಕಾರ್ಮಿಕ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ನಗರಸಭೆಯ ಪೌರಕಾರ್ಮಿಕ ಮೇಸ್ತ್ರಿ…

ಬೆಂಗಳೂರಲ್ಲಿ ಪ್ರಿಯಕರನಿಂದಲೇ ಯುವತಿ ಕೊಲೆ ಕೇಸ್‌ಗೆ ಬಿಗ್ ಟ್ವಿಸ್ಟ್! ಮದುವೆ ವಿಷಯ ಮುಚ್ಚಿಟ್ಟು ಪ್ರೀತಿ, ಕೊನೆಗೆ ಕಗ್ಗೊಲೆ!

SHOCKING: ರಾಜ್ಯದಲ್ಲೊಂದು ಧಾರುಣ ಘಟನೆ: ಬಳ್ಳಾರಿಯಲ್ಲಿ ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

BREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿ ಯಾವುದೇ ‘ಗ್ಯಾರಂಟಿ ಯೋಜನೆ’ ನಿಲ್ಲುವುದಿಲ್ಲ: ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.