ಶಿವಮೊಗ್ಗ: ಜಿಲ್ಲೆಯ ಸಾಗರ ನಗರಸಭೆಯಿಂದ 2024-25ನೇ ಸಾಲಿನ ಆಸ್ತಿ ತೆರಿಗೆ ವಾಪತಿಗೆ ನೀಡಲಾಗುತ್ತಿರುವ ಶೇ.5ರಷ್ಟು ರಿಯಾಯಿತಿ ಅವಧಿಯನ್ನು ವಿಸ್ತರಣೆ ಮಾಡಿ ಆದೇಶಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರ ನಗರಸಭೆಯ ಪೌರಾಯುಕ್ತ ಹೆಚ್.ಕೆ.ನಾಗಪ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸಲು ಹಾಗೂ ಸ್ವಯಂ ತೆರಿಗೆ ಪಾವತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ 204-25ನೇ ಆರ್ಥಿಕ ವರ್ಷದ ಪ್ರಾರಂಭದ 30 ದಿನಗಳಲ್ಲಿ ಪೂರ್ಣ ಪ್ರಮಾಣದ ಆಸ್ತಿ ತೆರಿಗೆ ಪಾವತಿ ಮಾಡಿದ್ದಲ್ಲಿ ಶೇ.5ರಷ್ಟು ರಿಯಾಯಿತಿ ನೀಡಲು ಕಲ್ಪಿಸಲಾಗಿರುತ್ತದೆ ಎಂದಿದ್ದಾರೆ.
ಶೇ.5ರಷ್ಟು ಆಸ್ತಿ ತೆರಿಗೆಯಲ್ಲಿ ರಿಯಾಯಿತಿ ಪಡೆಯುವ ಅವಧಿಯನ್ನು ದಿನಾಂಕ 31-07-2024ರ ಈ ತಿಂಗಳ ಕೊನೆಯ ವರೆಗೆ ಅವಕಾಶ ನೀಡಲಾಗಿದೆ. ಸಾಗರದ ಆಸ್ತಿ ತೆರಿಗೆ ಪಾವತಿದಾರರು ಸದುಪಯೋಗ ಪಡಿಸಿಕೊಳ್ಳುವಂತೆ ಸಾಗರ ನಗರಸಭೆಯ ಪೌರಾಯುಕ್ತ ಹೆಚ್.ಕೆ.ನಾಗಪ್ಪ ಅವರು ಮನವಿ ಮಾಡಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ
‘SSLC ಪರೀಕ್ಷೆ-3’ಕ್ಕೆ ನೋಂದಾಯಿಸಿಕೊಳ್ಳುವ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ | SSLC Exam-3
BREAKING : ವಾಲ್ಮೀಕಿ ಹಗರಣ ಕೇಸ್ : ಯಾವುದೇ ಕ್ಷಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಬಂಧನ ಸಾಧ್ಯತೆ!