ಶಿವಮೊಗ್ಗ: ಡಿಸೆಂಬರ್.23 ಮತ್ತು 24ರಂದು ಸರ್ಕಾರಿ ಪದವಿಪೂರ್ವ ಕಾಲೇಜಿನ ಸುವರ್ಣ ಮಹೋತ್ಸವ ಕಾರ್ಯಕ್ರಮ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.
ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಾನು ಸಹ ರಾಜ್ಯದ ಅತ್ಯಂತ ಪ್ರತಿಷ್ಟಿತ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಎಂದು ಹೇಳಿಕೊಳ್ಳಲು ನನಗೆ ಹೆಮ್ಮೆ ಆಗುತ್ತದೆ. ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ಕಾಲೇಜಿಗೆ ಸುಣ್ಣಬಣ್ಣ ಸೇರಿದಂತೆ ವಿವಿಧ ಮೂಲಭೂತ ಸೌಲಭ್ಯ ಒದಗಿಸಲು 50 ಲಕ್ಷ ರೂ. ನೀಡಲಾಗಿದೆ ಎಂದರು.
ಡಿ. 23ರಂದು ಹಳೇಯ ವಿದ್ಯಾರ್ಥಿಗಳ ಸಮಾಗಮ, ಉದ್ಘಾಟನೆ ಸೇರಿದಂತೆ ವಿವಿಧ ಕಾರ್ಯಕ್ರಮ ನಡೆಯಲಿದ್ದು, ಡಿ. 24ರಂದು ಸ್ಮರಣ ಸಂಚಿಕೆ ಬಿಡುಗಡೆ, ಸಮಾರೋಪ ಸಮಾರಂಭ ಹಾಗೂ ಝೀ ಕನ್ನಡ ಖ್ಯಾತಿಯ ಕಲಾವಿದರಿಂದ ರಸಮಂಜರಿ ಕಾರ್ಯಕ್ರಮ ಏರ್ಪಡಿಸಿದೆ ಎಂದು ಹೇಳಿದರು.
ಈ ಕಾಲೇಜಿನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಅಭ್ಯಾಸ ಮಾಡಿದ್ದು ದೊಡ್ಡದೊಡ್ಡ ಹುದ್ದೆಯಲ್ಲಿದ್ದಾರೆ. ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಎಲ್ಲರನ್ನೂ ಆಹ್ವಾನಿಸುತ್ತಿದ್ದೇವೆ. ಕಾಲೇಜಿನಲ್ಲಿ ಶಿಕ್ಷಣ ಪಡೆದು ಸಾಧನೆ ಮಾಡಿದವರಿಗೆ, ಹಿಂದಿನ ಉಪನ್ಯಾಸಕರಿಗೆ ಸೇರಿ ಹಲವರಿಗೆ ಸನ್ಮಾನ ಮಾಡಲಾಗುತ್ತಿದೆ. ಕಾಲೇಜಿಗೆ ಸುಮಾರು 95 ಲಕ್ಷ ರೂ. ವೆಚ್ಚದಲ್ಲಿ 5 ಕೊಠಡಿಗಳನ್ನು ನಿರ್ಮಿಸಲಾಗಿದೆ. ಇದರ ಜೊತೆಗೆ ತಾಲ್ಲೂಕಿನಲ್ಲಿರುವ ಶಾಲಾಕಾಲೇಜುಗಳಿಗೆ ಸುಣ್ಣಬಣ್ಣ ಸೇರಿದಂತೆ ಮೂಲಭೂತ ಸೌಲಭ್ಯ ಒದಗಿಸಲಾಗುತ್ತಿದೆ ಎಂದರು.
ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಬಿ.ಎ.ಇಂದೂಧರ ಬೇಸೂರು, ಸದಸ್ಯರಾಧ ಸಲೀಂ, ಉಮೇಶ್ ಸೂರನಗದ್ದೆ, ಭವ್ಯ, ಬಸವರಾಜ್, ಲೋಕೇಶ್, ಪ್ರಾಚಾರ್ಯ ಸತ್ಯನಾರಾಯಣ ಕೆ.ಸಿ, ಪ್ರಾಧ್ಯಾಪಕರಾದಂತ ಪರಮೇಶ್ವರಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.
BREAKING: ‘ಡಿಸಿಎಂ ಡಿ.ಕೆ ಶಿವಕುಮಾರ್’ಗೆ ಬಿಗ್ ಶಾಕ್: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ದೆಹಲಿ ಪೊಲೀಸರಿಂದ ನೋಟಿಸ್
ಸೊರಬ ಉಳವಿಯಲ್ಲಿ 5 ದಿನ ಹುಡುಕಿದರೂ ಕಣ್ಣಿಗೆ ಕಾಣದ ಆನೆಗಳು: ನಾಳೆ ‘ಥರ್ಮಲ್ ಡ್ರೋನ್’ ಮೂಲಕ ಪತ್ತೆ ಕಾರ್ಯಾಚರಣೆ







